Karnataka SSLC Result 2020: ಸೋಮವಾರ ಮಧ್ಯಾಹ್ನ 3ಕ್ಕೆ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ

KSEEB 10th result 2020: ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟವಾದ ಬಳಿಕ ಫಲಿತಾಂಶವನ್ನು ನೀವು kseeb.kar.nic.in ಅಥವಾ karresults.nic.in. ವೆಬ್​ಸೈಟ್​ನಲ್ಲಿ ವೀಕ್ಷಿಸಬಹುದು. ಇದಷ್ಟೇ ಅಲ್ಲದೆ, examresults.net ಮತ್ತು indiaresults.com ವೆಬ್​ಸೈಟ್​ನಲ್ಲಿ ಕೂಡ ರಿಸಲ್ಟ್​ ನೋಡಬಹುದು.

Sushma Chakre | news18-kannada
Updated:August 7, 2020, 1:08 PM IST
Karnataka SSLC Result 2020: ಸೋಮವಾರ ಮಧ್ಯಾಹ್ನ 3ಕ್ಕೆ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ
ಎಸ್​ಎಸ್​ಎಲ್​ಸಿ ಫಲಿತಾಂಶ
  • Share this:
ಬೆಂಗಳೂರು (ಆ.7): ಕರ್ನಾಟಕ ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ಸೋಮವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ. ಒಮ್ಮೆ ಫಲಿತಾಂಶ ಪ್ರಕಟವಾದ ನಂತರ ಇಲಾಖೆಯ ಅಧಿಕೃತ ವೆಬ್​ಸೈಟ್​ನಲ್ಲಿ ಪ್ರಕಟವಾಗಲಿದೆ. ಆದರೆ, ಏಕಕಾಲಕ್ಕೆ ಎಲ್ಲರೂ ವೆಬ್​ಸೈಟ್​ನಲ್ಲಿ ಫಲಿತಾಂಶ ವೀಕ್ಷಿಸಲು ಲಾಗಿನ್ ಆಗುವುದರಿಂದ ಬೇರೆ ವೆಬ್​ಸೈಟ್​ಗಳಲ್ಲೂ ಫಲಿತಾಂಶ ವೀಕ್ಷಿಸಬಹುದು. ಆ ಬಗ್ಗೆ ಇಲ್ಲಿದೆ ಮಾಹಿತಿ...

ಕರ್ನಾಟಕದಲ್ಲಿ ಈ ವರ್ಷ ಸುಮಾರು 8.40 ಲಕ್ಷ ವಿದ್ಯಾರ್ಥಿಗಳು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದಿದ್ದಾರೆ. ಕಳೆದ ತಿಂಗಳು ದ್ವಿತೀಯ ಪರೀಕ್ಷೆ ಫಲಿತಾಂಶ ಪ್ರಕಟವಾಗಿತ್ತು. ಜುಲೈ 3ರಂದು ಎಸ್​ಎಸ್​ಎಲ್​ಸಿ ಪರೀಕ್ಷೆ ಮುಗಿದಿತ್ತು. ಈಗಾಗಲೇ ಮೌಲ್ಯಮಾಪನ ಮುಕ್ತಾಯವಾಗಿದೆ. ಹೀಗಾಗಿ, ಈ ವಾರದಲ್ಲೇ ಪರೀಕ್ಷೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗಿತ್ತು. ಆದರೆ, ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಇಂದು ಫೇಸ್​ಬುಕ್​ನಲ್ಲಿ ಮಾಹಿತಿ ನೀಡಿದ್ದು, ಸೋಮವಾರ ಮಧ್ಯಾಹ್ನ 3 ಗಂಟೆಗೆ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದಿದ್ದಾರೆ.



ಇದನ್ನೂ ಓದಿ: Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ; ಚಾರ್ಮಾಡಿ ಘಾಟ್, ಶೃಂಗೇರಿ- ಮಂಗಳೂರು ಹೆದ್ದಾರಿ​ ಬಂದ್

ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟವಾದ ಬಳಿಕ ಫಲಿತಾಂಶವನ್ನು ನೀವು kseeb.kar.nic.in ಅಥವಾ karresults.nic.in. ವೆಬ್​ಸೈಟ್​ನಲ್ಲಿ ವೀಕ್ಷಿಸಬಹುದು. ಇದಷ್ಟೇ ಅಲ್ಲದೆ, examresults.net ಮತ್ತು indiaresults.com ವೆಬ್​ಸೈಟ್​ನಲ್ಲಿ ಕೂಡ ರಿಸಲ್ಟ್​ ನೋಡಬಹುದು.

examresults.net​ ವೆಬ್​ಸೈಟ್​ನಲ್ಲಿ ನಿಮ್ಮ ಫಲಿತಾಂಶವನ್ನು ವೀಕ್ಷಿಸಲು ಇಲ್ಲಿದೆ ಸುಲಭ ವಿಧಾನ.
  • ಮೊದಲು examresults.net ವೆಬ್​ಸೈಟ್​ಗೆ ಹೋಗಿ.

  • ಹೋಂ ಪೇಜ್​ನಲ್ಲಿ ಎಸ್​ಎಸ್​ಎಲ್​ಸಿ ರಿಸಲ್ಟ್​ 2020 ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.

  • ಅಥವಾ ಹೋಂ ಪೇಜ್​ನಲ್ಲಿರುವ Karnataka ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.

  • ಈ ಪೇಜ್​ನಲ್ಲಿ Karnataka SSLC Exam ಎಂಬ ಆಯ್ಕೆ ಇರುತ್ತದೆ.

  • ಆ ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ಅಲ್ಲಿ ಕೇಳುವ ನಿಮ್ಮ ಮಾಹಿತಿಯನ್ನು ಪೂರ್ತಿ ಮಾಡಿದರೆ ನಿಮ್ಮ ಫಲಿತಾಂಶ ಸಿಗುತ್ತದೆ.


indiaresults.com​ ವೆಬ್​ಸೈಟ್​ನಲ್ಲಿ ನಿಮ್ಮ ಫಲಿತಾಂಶವನ್ನು ನೋಡುವ ವಿಧಾನ ಹೀಗಿದೆ...

  • indiaresults.com ವೆಬ್​ಸೈಟ್​ಗೆ ಹೋಗಿ.

  • ಅಲ್ಲಿರುವ ರಾಜ್ಯಗಳ ಪೈಕಿ ಕರ್ನಾಟಕವನ್ನು ಆಯ್ಕೆ ಮಾಡಿಕೊಳ್ಳಿ. ಹಾಗೇ karnataka.indiaresults.com ಎಂದು ಟೈಪ್ ಮಾಡಿ ಎಂಟರ್ ಬಟನ್ ಒತ್ತಿ.

  • ಅಲ್ಲಿ ಕರ್ನಾಟಕ ಸೆಕೆಂಡರಿ ಎಜುಕೇಷನ್ ಎಕ್ಸಾಮಿನೇಷನ್ ಬೋರ್ಡ್​ ಎಂಬ ಆಯ್ಕೆ ಇರುತ್ತದೆ. ಅದರ ಜೊತೆಗೆ ಕರ್ನಾಟಕ ಎಸ್​ಎಸ್​ಎಲ್​ಸಿ ರಿಸಲ್ಟ್​ 2020 ಎಂಬ ಆಯ್ಕೆ ಇರುತ್ತದೆ.

  • ಆ ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ಆಗ ಹೊಸ ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ವಿವರಗಳನ್ನು ತುಂಬಿದರೆ ರಿಸಲ್ಟ್​ ಸಿಗುತ್ತದೆ. 


kseeb.kar.nic.in ಅಥವಾ karresults.nic.in ವೆಬ್​ಸೈಟ್​ನಲ್ಲಿ ರಿಸಲ್ಟ್​ ವೀಕ್ಷಿಸಲು ಹೀಗೆ ಮಾಡಿ.

  • ವೆಬ್​ಸೈಟ್​ ಓಪನ್ ಮಾಡಿ ನಂತರ ಹೋಂ ಪೇಜ್​ನಲ್ಲಿ ಎಸ್​ಎಸ್​ಎಲ್​ಸಿ ರಿಸಲ್ಟ್​ ಎಂಬ ಆಯ್ಕೆಯನ್ನು ಒತ್ತಿ.

  • ನಿಮ್ಮ ಪರೀಕ್ಷೆಯ ರೋಲ್ ನಂಬರ್ ಮತ್ತು ಪೇಜ್​ನಲ್ಲಿ ಕೇಳುವ ಮಾಹಿತಿಯನ್ನು ಭರ್ತಿ ಮಾಡಿ.

  • ಹಾಲ್​ ಟಿಕೆಟ್​ನ ಮಾಹಿತಿಯನ್ನು ವೆಬ್​ಸೈಟ್​ನಲ್ಲಿ ವೇರಿಫೈ ಮಾಡಿಕೊಳ್ಳಿ.

  • ಆಗ ನಿಮ್ಮ ಪರೀಕ್ಷೆ ಫಲಿತಾಂಶ ಸಿಗುತ್ತದೆ.

  • ನಂತರ ಆ ಫಲಿತಾಂಶವನ್ನು ಪಿಡಿಎಫ್​ ಫಾರ್ಮಾಟ್​ನಲ್ಲಿಯೇ ಡೌನ್​ಲೋಡ್ ಮಾಡಿಕೊಳ್ಳಿ. ಹಾಗೇ, ಒಂದು ಕಾಪಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಿ.



ಜೂನ್ 25ರಿಂದ ಕರ್ನಾಟಕದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸಲಾಗಿತ್ತು. ಕೊರೋನಾ ಭೀತಿಯ ನಡುವೆಯೇ ಎಲ್ಲ ವಿಷಯಗಳ ಪರೀಕ್ಷೆಗಳನ್ನೂ ನಡೆಸಿದ್ದಕ್ಕೆ ವ್ಯಾಪಕ ವಿರೋಧ ಕೇಳಿಬಂದಿತ್ತು. ಕೊರೋನಾ ಹಿನ್ನೆಲೆ ಈ ಬಾರಿ ಶಾಲೆಗಳ ಬದಲು ಆನ್​ಲೈನ್​ನಲ್ಲಿ ನೇರವಾಗಿ ಫಲಿತಾಂಶ ಪ್ರಕಟಿಸಲಾಗುವುದು. ಕಳೆದ ವರ್ಷ ಏಪ್ರಿಲ್ 30ರಂದು ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟವಾಗಿತ್ತು. ಈ ವರ್ಷ ಲಾಕ್​ಡೌನ್​ನಿಂದಾಗಿ ಪರೀಕ್ಷೆಯೂ ಮುಂದೂಡಲ್ಪಟ್ಟಿತ್ತು.
Published by: Sushma Chakre
First published: August 7, 2020, 12:45 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading