ಲಕ್ಷ್ಮಣ ಸವದಿಗೆ ಡಿಸಿಎಂ ಪಟ್ಟ; ಕೆಂಡಾಮಂಡಲರಾದ ಮಹಿಳಾ ಹೋರಾಟಗಾರ್ತಿಯರು, ಬಿಜೆಪಿ ಕಚೇರಿ ಎದುರು ಉಗ್ರ ಪ್ರತಿಭಟನೆ!

ಸದನದಲ್ಲಿ ನೀಲಿ ಚಿತ್ರ ವೀಕ್ಷಿಸಿದ ಲಕ್ಷ್ಮಣ ಸವದಿಗೆ ಡಿಸಿಎಂ ಪಟ್ಟ ಕೊಟ್ಟಿರುವುದು ಖಂಡಿಸಿ ಇಂದು ರಾಜಧಾನಿಯ ಮಲ್ಲೇಶ್ವರದಲ್ಲಿರುವ ಬಿಜೆಪಿ ಪಕ್ಷದ ಕೇಂದ್ರ ಕಚೇರಿ ಎದುರು ಜಮಾವಣೆಗೊಂಡ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.

MAshok Kumar | news18-kannada
Updated:August 31, 2019, 1:47 PM IST
ಲಕ್ಷ್ಮಣ ಸವದಿಗೆ ಡಿಸಿಎಂ ಪಟ್ಟ; ಕೆಂಡಾಮಂಡಲರಾದ ಮಹಿಳಾ ಹೋರಾಟಗಾರ್ತಿಯರು, ಬಿಜೆಪಿ ಕಚೇರಿ ಎದುರು ಉಗ್ರ ಪ್ರತಿಭಟನೆ!
ಪ್ರತಿಭಟನಾ ನಿರತ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು.
MAshok Kumar | news18-kannada
Updated: August 31, 2019, 1:47 PM IST
ಬೆಂಗಳೂರು (ಆಗಸ್ಟ್.31); ಕಳೆದ ಮಂಗಳವಾರ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಲಕ್ಷ್ಮಣ ಸವದಿ ಅವರಿಗೆ ಅಚ್ಚರಿಯ ಬೆಳವಣಿಗೆಯಲ್ಲಿ ಡಿಸಿಎಂ ಸ್ಥಾನ ಒಲಿದು ಬಂದಿತ್ತು. ಆದರೆ, ಸದನದಲ್ಲೇ ನೀಲಿ ಚಿತ್ರ ವೀಕ್ಷಿಸಿದ ಅವರ ವಿರುದ್ಧ ಇದೀಗ ಮಹಿಳಾ ಹೋರಾಟಗಾರ್ತಿಯರು ತಿರುಗಿ ಬಿದ್ದಿದ್ದಾರೆ.

ಸದನದಲ್ಲಿ ನೀಲಿ ಚಿತ್ರ ವೀಕ್ಷಿಸಿದವರಿಗೆ ಡಿಸಿಎಂ ಪಟ್ಟ ಕೊಟ್ಟಿರುವುದು ಖಂಡಿಸಿ ಇಂದು ರಾಜಧಾನಿಯ ಮಲ್ಲೇಶ್ವರದಲ್ಲಿರುವ ಬಿಜೆಪಿ ಪಕ್ಷದ ಕೇಂದ್ರ ಕಚೇರಿ ಎದುರು ಜಮಾವಣೆಗೊಂಡ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು. ರಸ್ತೆಯಲ್ಲೇ ಧರಣಿ ಕುಳಿತ ಮಹಿಳೆಯರು ಲಕ್ಷ್ಮಣ ಸವದಿ ಹಾಗೂ ಬಿಜೆಪಿ ವಿರುದ್ಧ ಘೋಷಣೆ ಕೂಗಿದರು. ಅಲ್ಲದೆ, ಅವರನ್ನು ಈ ಕೂಡಲೇ ಆ ಸ್ಥಾನದಿಂದ ವಜಾ ಮಾಡುವಂತೆ ಒತ್ತಾಯಿಸಿದರು.

ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿರುವ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್, “ಸದನದಲ್ಲಿ ನೀಲಿ ಚಿತ್ರ ವೀಕ್ಷಿಸಿದವರಿಗೆ ಸಚಿವ ಸ್ಥಾನದ ಜೊತೆಗೆ ಡಿಸಿಎಂ ಸ್ಥಾನವನ್ನೂ ನೀಡಿರುವುದು ಮಹಿಳೆಯರಿಗೆ ಮಾಡಿದ ಅಪಮಾನ. ಬಿಜೆಪಿ ಪಕ್ಷದಲ್ಲೂ ಶೋಭಾ ಕರಂದ್ಲಾಜೆ ಸೇರಿ ಹಲವಾರು ಮಹಿಳೆಯರಿದ್ದಾರೆ ಅವರಿಗೆ ಮಾಡಿದ ಅವಮಾನ. ಇವನ್ನೆಲ್ಲಾ ನೋಡಿ ಶೋಭಾ ಕರಂದ್ಲಾಜೆ ಸುಮ್ಮನಿರಬಹುದು. ಆದರೆ, ನಾವು ಸುಮ್ಮನಿರಲು ಸಾಧ್ಯವಿಲ್ಲ. ಕೂಡಲೇ ಅವರಿಗೆ ನೀಡಿರುವ ಹುದ್ದೆಯನ್ನು ಹಿಂಪಡೆಯಬೇಕು” ಎಂದು ಒತ್ತಾಯಿಸಿದರು.

ಈ ವೇಳೆ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಬಿಜೆಪಿ ಕಚೇರಿಗೆ ಬಿಗಿ ಪೊಲೀಸ್ ಬಂದೋಬಸ್ತ್ ನೀಡಲಾಗಿತ್ತು. ಕೊನೆಗೆ ಎಲ್ಲಾ ಪ್ರತಿಭಟನಾಕಾರರನ್ನು ಬಂಧಿಸುವ ಮೂಲಕ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದರು.

ಇದನ್ನೂ ಓದಿ :ಜೆಡಿಎಸ್​ ಪಕ್ಷಕ್ಕೆ ಕೈಕೊಟ್ಟು ಕಮಲ ಹಿಡೀತಾರ ಶಾಸಕ ಸಿ.ಎಸ್.​ ಪುಟ್ಟರಾಜು?; ಅನುಮಾನಕ್ಕೆ ಎಡೆಮಾಡಿಕೊಟ್ಟ ಮಾಜಿ ಸಚಿವ!

First published:August 31, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...