Karnataka Budget 2022: ಗ್ರಾಮಗಳ ಅಭಿವೃದ್ಧಿಗೆ ಸಿಎಂ ಕೊಟ್ಟಿದ್ದೇನು? ಸಮಾಜ ಕಲ್ಯಾಣಕ್ಕೆ ಸಿಕ್ಕ ಅನುದಾನವೆಷ್ಟು?

ಗ್ರಾಮದ ಅಭಿವೃದ್ಧಿಯಿಂದಲೇ ದೇಶದ ಅಭಿವೃದ್ಧಿ ಅಂತ ಗಾಂಧೀಜಿಯವರು ಹೇಳಿದ್ದರು. ಹಾಗಾದ್ರೆ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯದ ಗ್ರಾಮಗಳ ಅಭಿವೃದ್ಧಿಗೆ ಕೊಟ್ಟಿದ್ದು ಏನು? ಸಮಾಜ ಕಲ್ಯಾಣ ಇಲಾಖೆಗೆ ಎಷ್ಟು ಅನುದಾನ ನೀಡಿದ್ರು? ಇಲ್ಲಿದೆ ಸಂಪೂರ್ಣ ಮಾಹಿತಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಸಿಎಂ (CM) ಬಸವರಾಜ ಬೊಮ್ಮಾಯಿ (Basavaraj Bommai)  ಮೊದಲ ಬಾರಿಗೇ 2,65,720 ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದ್ದಾರೆ.   ಶುಕ್ರವಾರವಾದ ಇಂದು  (Friday) ಹಲವು ವಲಯಗಳಿಗೆ, ಹಲವು ವರ್ಗದವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಶುಭ ಸುದ್ದಿ (Good News) ನೀಡಿದ್ದಾರೆ. ಇನ್ನು ಗ್ರಾಮಗಳ ಅಭಿವೃದ್ಧಿಗೆ 17,325 ಕೋಟಿ (Crore) ರೂಪಾಯಿ ಅನುದಾನ ನೀಡಿದ್ದಾರೆ. ಮತ್ತೊಂದೆೆಡೆ  ಸಮಾಜ ಕಲ್ಯಾಣ ಇಲಾಖೆಗೆ 9389 ಕೋಟಿ ಅನುದಾನ ನೀಡಿದ್ದಾರೆ. 

ಈ ಬಾರಿ 2 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್

ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಚೊಚ್ಚಲ ಬಜೆಟ್ ಮಂಡಿಸುತ್ತಿದ್ದಾರೆ. ಈ ಬಾರಿ ಬಜೆಟ್ ಗಾತ್ರ 2,65,720 ಕೋಟಿ ರೂಪಾಯಿ ಗಾತ್ರದ್ದಾಗಿದೆ. ರಾಜ್ಯದ ಕೆರೆಗಳ ಅಭಿವೃದ್ಧಿಗೆ 500 ಕೋಟಿ ನೀಡುವುದಾಗಿ ಸಿಎಂ ಘೋಷಿಸಿದ್ದಾರೆ.

ಯಾವ ಇಲಾಖೆಗೆ ಎಷ್ಟು ಕೋಟಿ ಅನುದಾನ?

ಈ ಬಾರಿ ಎಲ್ಲಾ ಇಲಾಖೆಗಳಿಗೂ ಭರಪೂರ ಅನುದಾನ ನೀಡವಾಗಿದೆ. ಪ್ರಮುಖವಾಗಿ ಆಹಾರ ಇಲಾಖೆ – 2,288 ಕೋಟಿ ರೂಪಾಯಿ ಅನುದಾನ , ವಸತಿ ಇಲಾಖೆ – 3,594 ಕೋಟಿ ರೂಪಾಯಿ ಅನುದಾನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ – 4,713 ಕೋಟಿ ಅನುದಾನ, ಕೃಷಿ ಮತ್ತು ತೋಟಗಾರಿಕೆ ಇಲಾಖೆ – 8,457 ಕೋಟಿ ರೂ ಅನುದಾನ, ಸಮಾಜ ಕಲ್ಯಾಣ ಇಲಾಖೆ – 9,389 ಕೋಟಿ ರೂ ಅನುದಾನ, ಲೋಕೋಪಯೋಗಿ ಇಲಾಖೆ – 10,447 ಕೋಟಿ ರೂ ಅನುದಾನ ನೀಡಲಾಗಿದೆ.

ಇನ್ನು ಒಳಾಡಳಿತ ಮತ್ತು ಸಾರಿಗೆ ಇಲಾಖೆ – 11,222 ಕೋಟಿ ರೂ ಅನುದಾನ, ಜಲ ಸಂಪನ್ಮೂಲ ಇಲಾಖೆ – 20,601 ಕೋಟಿ ರೂ ಅನುದಾನ, ಶಿಕ್ಷಣ ಇಲಾಖೆ – 31,980 ಕೋಟಿ ರೂಪಾಯಿ ಅನುದಾನ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ – 17,325 ಕೋಟಿ ರೂಪಾಯಿ, ನಗರಾಭಿವೃದ್ಧಿ ಇಲಾಖೆ – 16,076 ಕೋಟಿ ರೂಪಾಯಿ ಅನುದಾನ, ಕಂದಾಯ ಇಲಾಖೆ – 16,388 ಕೋಟಿ ರೂಪಾಯಿ ಅನುದಾನ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ – 13,982 ಕೋಟಿ ರೂಪಾಯಿ ಅನುದಾನ ಹಾಗೂ ಇಂಧನ ಇಲಾಖೆ – 12,655 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಿದ್ದಾರೆ.

 ಇದನ್ನೂ ಓದಿ: Karnataka Budget 2022: ಪ್ರೋತ್ಸಾಹ ಧನ, ರೈತರ ಆದಾಯ ಹೆಚ್ಚಳಕ್ಕೆ ಆದ್ಯತೆ: ಕೃಷಿ ವಲಯಕ್ಕೆ ಬಂಪರ್ ಕೊಡುಗೆ

ಗ್ರಾಮಗಳ ಅಭಿವೃದ್ಧಿಗೆ 17,325 ಕೋಟಿ ರೂಪಾಯಿ ಅನುದಾನ

ಸಿಎಂ ಬಸವರಾಜ ಬೊಮ್ಮಾಯಿ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಈ ಬಾರಿ 17,325 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ 1,600 ಕೋಟಿ ಮೀಸಲಿಡಲಾಗಿದೆ. ಮಳೆಗಾಲದಲ್ಲಿ ಹಾನಿಯಾದ ರಸ್ತೆಗಳನ್ನು ಅಭಿವೃದ್ಧಿಗೊಳಿಸಲು 300 ಕೋಟಿ ರೂ. ಮೀಸಲಿಡಲಾಗಿದೆ

ಗ್ರಾಮೀಣ ರೈತರ ಆರೋಗ್ಯ ಸುಧಾರಣೆಗೆ ಕ್ರಮ

ಗ್ರಾಮೀಣ ರೈತರಿಗೆ ಆರೋಗ್ಯ ಸೇವೆ ಒದಗಿಸಲು ಪರಿಷ್ಕೃತ ರೂಪದಲ್ಲಿ ಯಶಸ್ವಿನಿ ಯೋಜನೆ ಸರ್ಕಾರದಿಂದ 300 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಇನ್ನು ಗಂಗಾ ಕಲ್ಯಾಣ ಯೋಜನೆಯಲ್ಲಿ ಸುಧಾರಣೆ; ಬೋರ್ ವೆಲ್ ಕೊರೆಯಲು ಡಿ.ಬಿ.ಟಿ. ಮೂಲಕ ಹಣ ವರ್ಗಾವಣೆ; ವಿದ್ಯುದೀಕರಣ ಶುಲ್ಕ‌ ಸರ್ಕಾರದಿಂದ ಪಾವತಿ. 1115 ಕೋಟಿ ವೆಚ್ಚದಲ್ಲಿ ಅನುಷ್ಟಾನ ನೀಡವಾಗಿದೆ.

ಇನ್ನು ಗ್ರಾಮಾಂತರ ಪ್ರದೇಶಗಳಲ್ಲಿ ಆನೆ ಹಾವಳಿ ತಡೆಗಟ್ಟಲು 100 ಕೋಟಿ ಅನುದಾನ ನೀಡಲಾಗಿದ್ದು, ಈ ಅನುದಾನದಲ್ಲಿ ರೈಲು‌ಹಳಿ ತಡೆಗೋಡೆ ನಿರ್ಮಾಣಕ್ಕೆ ಒತ್ತು ನೀಡಲಾಗುತ್ತದೆ.

ಗ್ರಾಮ ಸಹಾಯಕರಿಗೆ ಬಂಪರ್

ಈ ಬಾರಿ ಗ್ರಾಮ ಸಹಾಯಕರಿಗೆ ಸಿಎಂ ಬಂಪರ್ ಕೊಡುಗೆ ನೀಡಿದ್ದಾರೆ, ಗ್ರಾಮ ಸಹಾಯಕರ ಮಾಸಿಕ ಗೌರ ಧನವನ್ನು 1 ಸಾವಿರ ರೂಪಾಯಿಗೆ ಹೆಚ್ಚಳ ಮಾಡಲಾಗಿದೆ.

ಗೋ ದತ್ತು ಪಡೆಯಲು ಕ್ರಮ

ಗೋಶಾಲೆ ಗೋವು ದತ್ತು ಪಡೆಯಲು ನೂತನ 'ಪುಣ್ಯಕೋಟಿ ದತ್ತು ಯೋಜನೆ' ಜಾರಿಗೆ ತರಲಾಗಿದೆ. ಇದಕ್ಕಾಗಿ ವಾರ್ಷಿಕ 11 ಸಾವಿರ ರೂಪಾಯಿ ಪಾವತಿಸಿ ದತ್ತು ಪಡೆಯಲು ಅವಕಾಶ ನೀಡಲಾಗಿದೆ. ಇನ್ನು ರಾಜ್ಯದಲ್ಲಿನ ಗೋಶಾಲೆಗಳನ್ನು 31 ರಿಂದ 100ಕ್ಕೆ ಹೆಚ್ಚಳ ಮಾಡಲಾಗಿದೆ.

ಸಮಾಜ ಕಲ್ಯಾಣ ಇಲಾಖೆಗೆ 9389 ಕೋಟಿ ಅನುದಾನ

ಈ ಬಾರಿ ಬಜೆಚ್‌ನಲ್ಲಿ ಎಸ್‌ಸಿ, ಎಸ್‌ಟಿ, ಇತರೇ ವರ್ಗಗಳ ಜನರ ಅಭಿವೃದ್ಧಿಗಾಗಿ ಸಮಾಜ ಕಲ್ಯಾಣ ಇಲಾಖೆಗೆ 9389 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ರಾಜ್ಯದಲ್ಲಿ ಮೊಹಲ್ಲಾ ಕ್ಲಿನಿಕ್.ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ 100 ವಸತಿ ನಿಲಯ ಘೋಷಣೆ ಮಾಡಲಾಗಿದೆ. ದುರ್ಬಲ ವರ್ಗಗಳ ಸಬಲೀಕರಣಕ್ಕಾಗಿ ಸಮಾಜ ಇಲಾಖೆಯ ಕಲ್ಯಾಣ ಮತ್ತು ಪರಿಶಿಷ್ಟ ಪಂಗಡಗಳ ವ್ಯಾಪ್ತಿಗೆ ಬರುವ ಯೋಜನೆಗಳಿಗೆ 800 ಕೋಟಿ ರೂ ನೀಡಲಾಗಿದೆ.

ದೀನದಯಾಳ್ ಉಪಾಧ್ಯಾಯ ಹಾಸ್ಟೆಲ್‌ಗಳ ಸ್ಥಾಪನೆ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತ ಮತ್ತು ಇತರೆ ವರ್ಗದ ಮಕ್ಕಳಿಗಾಗಿ 250 ಕೋಟಿ ರೂ. ವೆಚ್ಚದಲ್ಲಿ ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು ಮತ್ತು ಮೈಸೂರಿನಲ್ಲಿ ತಲಾ 1000 ಸಾಮರ್ಥ್ಯದ ಬಹುಮಹಡಿಯ ದೀನ್‌ದಯಾಳ್ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿ ನಿಲಯ ಸಮುಚ್ಛಯ ನಿರ್ಮಾಣ.

ಅಬ್ದುಲ್‌ ಕಲಾಂ ಹೆಸರಲ್ಲಿ ವಸತಿ ಶಾಲೆ

ಪ್ರತಿ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಒಂದು ಶಾಲೆಯನ್ನು ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಯಾಗಿ ಮರುನಾಮಕರಣ ಪದವಿ ಪೂರ್ವ ತರಗತಿ ಪ್ರಾರಂಭ; ಸಿಬಿಎಸ್‌ಇ ಮಾನ್ಯತೆ ಪಡೆಯಲು ಕ್ರಮ, 25 ಕೋಟಿ ರೂ. ಅನುದಾನ ನೀಡಲಾಗಿದೆ.

ನಾರಾಯಣ ಗುರುಗಳ ಹೆಸರಲ್ಲಿ ವಸತಿ ಶಾಲೆ

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದು ಶ್ರೀ ನಾರಾಯಣ ಗುರು ವಸತಿ ಶಾಲೆ ಪ್ರಾರಂಭಿಸುವುದಾಗಿ ಸಿಎಂ ಘೋಷಿಸಿದ್ದಾರೆ. ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳ ಅಡಿಯಲ್ಲಿರುವ ಎಲ್ಲಾ ಅಭಿವೃದ್ಧಿ ನಿಗಮಗಳ ಸ್ವಯಂ ಉದ್ಯೋಗ ಮತ್ತು ಇತರೆ ಕಾರ್ಯಕ್ರಮಗಳ ಗುರಿಯಲ್ಲಿ ಶೇ.25ರಷ್ಟು ಮಹಿಳೆಯರಿಗೆ ಮೀಸಲು ಇಡಲಾಗಿದೆ. .

ಇದನ್ನೂ ಓದಿ: Karnataka Budget 2022: 5 ಲಕ್ಷ ಮನೆ ನಿರ್ಮಾಣ ಗುರಿ: ಅಂಗನವಾಡಿ, ಬಿಸಿಯೂಟ ಸಿಬ್ಬಂದಿಯ ಗೌರವ ಧನ ಹೆಚ್ಚಳ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿವಿಧ ಸಮುದಾಯಗಳ ನಿಗಮಗಳಡಿ 400 ಕೋಟಿ ರೂ. ಅಭಿವೃದ್ಧಿ ಯೋಜನೆ, ದೇವರಾಜ ಅರಸು ಅಭಿವೃದ್ಧಿ ನಿಗಮದಡಿ ಬರುವ ಇತರ ಹಿಂದುಳಿದ ಸಮುದಾಯಗಳಿಗೆ 400 ಕೋಟಿ ರೂ. ಯೋಜನೆ ಜಾರಿ ಮಾಡಲಾಗಿದೆ.

165 ಕೋಟಿ ರೂ. ವೆಚ್ಚದಲ್ಲಿ ಬಾಡಿಗೆ ಕಟ್ಟಡಗಳಲ್ಲಿರುವ ಹಿಂದುಳಿದ ವರ್ಗಗಳ 50 “ಕನಕದಾಸ” ವಿದ್ಯಾರ್ಥಿನಿಲಯಗಳಿಗೆ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ. ಪರಿಶಿಷ್ಟ ಜಾತಿ ಮತ್ತು ಗುಂಪುಗಳಿಗೆ ಮಹಿಳೆಯರಿಗೆ ಅನುಕೂಲ ಮಾಡಿಕೊಡಲು ಯೋಜನೆ ರೂಪಿಸಲಾಗಿದೆ.
Published by:Annappa Achari
First published: