Cabinet Meeting: ವಿಶ್ವ ಹೂಡಿಕೆದಾರರ ಸಮಾವೇಶ ಸೇರಿ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾದ ಇತರೆ ನಿರ್ಣಯಗಳು

ದಿನದಿಂದ ದಿನಕ್ಕೆ ಏರುತ್ತಿರುವ ಪೆಟ್ರೋಲ್, ಡೀಸೆಲ್ ಬೆಲೆಯಿಂದಾಗಿ ಜನ ಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಹೀಗಾಗಿ ರಾಜ್ಯದಲ್ಲೂ ತಮಿಳುನಾಡು ಮಾದರಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ಇಳಿಕೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಸಂಬಂಧ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ವಿಧಾನಸೌಧ

ವಿಧಾನಸೌಧ

 • Share this:
  ಬೆಂಗಳೂರು: ಕೃಷಿ‌ ಇಲಾಖೆ (Agriculture Department) ಬೀಜ ನಿಗಮಕ್ಕೆ ಸಾಲ ಪಡೆಯಲು ಶೂರಿಟಿ ನೀಡಲಾಗಿದೆ. 10 ಕೋಟಿ ಇದ್ದದ್ದನ್ನ 20 ಕೋಟಿ ಹೆಚ್ಚಳಕ್ಕೆ ಸಮ್ಮತಿಸಲಾಗಿದೆ. 20 ಕೋಟಿ ಸಾಲ ಪಡೆಯಲು ಸರ್ಕಾರದ ಸಮ್ಮತಿ ನೀಡಿದೆ. (Global Investors Summit) ವಿಶ್ವ ಹೂಡಿಕೆದಾರರ ಸಮಾವೇಶಕ್ಕೆ ಒಪ್ಪಿಗೆ ನೀಡಲಾಗಿದೆ. ಕಳೆದ ವರ್ಷ ಕೋವಿಡ್​ನಿಂದಾಗಿ ವಿಶ್ವ ಹೂಡಿಕೆದಾರರ ಸಮಾವೇಶ ನಡೆದಿರಲಿಲ್ಲ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ (Law Minister Madhuswamy) ಹೇಳಿದರು.

  ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಧುಸ್ವಾಮಿ ಅವರು, ಮೈಸೂರು ಅರಮನೆಗೆ ಸಂಬಂಧಿಸಿದಂತೆ ಒಟ್ಟು 7 ಕೇಸ್ ಗಳು ಲೋಕಾಯುಕ್ತದಲ್ಲಿದ್ದವು. ಗಂಭೀರವಾಗಿರದ ಪೇಂಟ್, ವಿಡಿಯೋ ಚಿತ್ರೀಕರಣ ಎರಡು ಪ್ರಕರಣ ಕೈ ಬಿಡಲಾಗಿದೆ. ಈ ಮೊದಲು ಮೈಸೂರು ಅರಮನೆಯ ಒಳಗೆ ಪೋಟೋ ತೆಗೆಯಬಾರದೆಂಬ ನಿಯಮವಿತ್ತು. ಫೋಟೋ ಸೆಶನ ಮಾಡಲಾಗಿತ್ತು. ಇದೀಗ ಛಾಯಾಚಿತ್ರ ತೆಗೆಯಲು ಅವಕಾಶವಿದೆ ಎಂದರು. ಹಾಗೆಯೇ ಭದ್ರಾ ಮೇಲ್ದಂಡೆ ಯೋಜನೆ ಸಂಬಂಧ ಭೂ‌ ಸ್ವಾಧೀನಕ್ಕೆ ಸಂಬಂಧಿಸಿದ ಪ್ರಕರಣಗಳು ನ್ಯಾಯಾಲಯದಲ್ಲಿದ್ದವು. ಇದೀಗ ಪ್ರಕರಣ ಇತ್ಯರ್ಥಕ್ಕೆ ಅವಕಾಶ ಮಾಡಿಕೊಟ್ಟಿದ್ದೇವೆ. ಪೊಲೀಸ್ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಆನ್ ಲೈನ್ ಗ್ಯಾಂಬ್ಲಿಂಗ್ ನಿಷೇಧಿಸುತ್ತೇವೆ. ಬರುವ ಅಧಿವೇಶನದಲ್ಲಿ ಈ ಕಾಯ್ದೆ ಸದನದ ಮುಂದಿಡುತ್ತೇವೆ. ಅಧಿವೇಶನದಲ್ಲಿ ಈ ಕಾಯ್ದೆ ಜಾರಿಗೆ ತರುತ್ತೇವೆ. ಎಲ್ಲಾ ಆನ್ ಲೈನ್ ಜೂಜಾಟ ರಾಜ್ಯದಲ್ಲಿ ನಿಷೇಧವಾಗಲಿದೆ ಎಂದು ಹೇಳಿದರು.

  ಸಂಪುಟ ಸಭೆಯಲ್ಲಿ ಕೋವಿಡ್ ವಿಚಾರ ಚರ್ಚೆ ಮಾಡಲಾಗಿದೆ. ತಜ್ಞರ ವರದಿಯನ್ನು ಅಳವಡಿಸಿಕೊಳ್ಳಲಾಗುವುದು. ವೀಕೆಂಡ್ ಕರ್ಫ್ಯೂ ತೆಗೆಯಲು ಚಿಂತನೆ ಮಾಡಲಾಗಿದೆ. ಅದನ್ನ ತೆಗೆದರೆ ಗಣೇಶ ಹಬ್ಬ ಯಾವ ರೀತಿ ಆಚರಿಸಬೇಕು ಅಂತಲೂ ಚರ್ಚೆ ಮಾಡಲಾಗಿದೆ. ಕೋವಿಡ್​ ನಿಯಮಗಳಾದ, ಸಾಮಾಜಿಕ ಅಂತರ ಕಾಯ್ದುಕೊಂಡು ಮದುವೆ, ಸಮಾರಂಭ ಮಾಡಬಹುದು. ಆದರೆ,  ಯಾರೂ ನಿಯಮ ಪಾಲಿಸ್ತಿಲ್ಲ. ಹೀಗಾಗಿ ನಿರ್ಬಂಧ ಹೇರಲಾಗಿದೆ ಎಂದರು.

  ಪೆಟ್ರೋಲ್, ಡೀಸೆಲ್ ಸೆಸ್ ಇಳಿಕೆಗೆ ಚಿಂತನೆ?

  ದಿನದಿಂದ ದಿನಕ್ಕೆ ಏರುತ್ತಿರುವ ಪೆಟ್ರೋಲ್, ಡೀಸೆಲ್ ಬೆಲೆಯಿಂದಾಗಿ ಜನ ಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಹೀಗಾಗಿ ರಾಜ್ಯದಲ್ಲೂ ತಮಿಳುನಾಡು ಮಾದರಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ಇಳಿಕೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಸಂಬಂಧ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

  ಇದನ್ನು ಓದಿ: Y Break Yoga App; ಕೆಲಸ ವೇಳೆ 5 ನಿಮಿಷ ಬಿಡುವು ತೆಗೆದುಕೊಂಡು ಯೋಗ ಮಾಡಿ ಎಂದು ಎಲ್ಲ ಸಿಬ್ಬಂದಿಗೆ ಆದೇಶಿಸಿದ ಸರ್ಕಾರ!

  ಸಂಪುಟ ಸಭೆಯಲ್ಲಿ ಸೆಸ್ ಕಡಿಮೆ ಮಾಡುವ ವಿಚಾರವನ್ನು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಅವರು ಪ್ರಸ್ತಾಪ ಮಾಡಿದರು. ಪೆಟ್ರೋಲ್, ಡೀಸೆಲ್ ಬೆಲೆಯಿಂದ ಜನ ಸಾಮಾನ್ಯರಿಗೆ ತೊಂದರೆ ಆಗುತ್ತಿದೆ. ಸಿಎಂ ದೊಡ್ಡ ಮನಸು ಮಾಡಿ ನೆರವಿಗೆ ನಿಲ್ಲುವಂತೆ ಮನವಿ ಮಾಡಿದರು. ಬೈರತಿ ಬಸವರಾಜ ಮನವಿಗೆ ಕೆಲ ಸಚಿವರು ಸಹ ಸಹಮತ ವ್ಯಕ್ತಪಡಿಸಿದರು. ಅದಕ್ಕೆ ಸಿಎಂ ಬೊಮ್ಮಾಯಿ ಅವರು, ಈ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎನ್ನುವ ಮೂಲಕ ರಾಜ್ಯದಲ್ಲೂ ಸೆಸ್ ಕಡಿಮೆ ಮಾಡುವ ಸುಳಿವು ಕೊಟ್ಟಿದ್ದಾರೆ.

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಅನಗತ್ಯವಾಗಿ ಯಾರೂ ಮನೆಯಿಂದ ಹೊರಗೆ ಬಾರದೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕಿದೆ. ಹಾಗೂ ಗುಂಪುಗೂಡುವುದನ್ನು ಆದಷ್ಟು ನಿಯಂತ್ರಿಸಬೇಕಿದೆ. ಸರ್ಕಾರ ಕಾಲಕಾಲಕ್ಕೆ ಹೊರಡಿಸುತ್ತಿರುವ ಕೊರೋನಾ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾಲಿಸಬೇಕಿದೆ.
  Published by:HR Ramesh
  First published: