ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ (Mysuru) ಈ ಹಿಂದೆ ಜಿಲ್ಲಾಧಿಕಾರಿಯಾಗಿ (DC) ಕಾರ್ಯ ನಿರ್ವಹಿಸಿದ್ದ ಐಎಎಸ್ ಅಧಿಕಾರಿ (IAS Officer) ರೋಹಿಣಿ ಸಿಂಧೂರಿ (Rohini Sindhuri) ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ರೋಹಿಣಿ ಸಿಂಧೂರಿ ವಿರುದ್ಧ ಕೇಳಿ ಬಂದಿದ್ದ ಆರೋಪಗಳ ಕುರಿತಂತೆ ತನಿಖೆ (Enquiry) ನಡೆಸುವಂತೆ ರಾಜ್ಯ ಸರ್ಕಾರ (State Government) ಆದೇಶ ನೀಡಿದೆ. ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ (Bag) ಖರೀದಿ ಹಗರಣದ ಆರೋಪ, ಜಿಲ್ಲಾಧಿಕಾರಿ ಸರ್ಕಾರಿ ನಿವಾಸದಲ್ಲಿ ಸ್ವಿಮ್ಮಿಂಗ್ ಪೂಲ್ (Swimming Pool) ಹಾಗೂ ಜಿಮ್ (Gym) ನಿರ್ಮಾಣ ವಿವಾದ, ಪಾರಂಪರಿಕ ಕಟ್ಟಡಕ್ಕೆ ಹಾನಿ ಆರೋಪ, ಕೊರೋನ (Corona) ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯನ್ನು ಮುಚ್ಚಿಟ್ಟ ಆರೋಪ ಸೇರಿದಂತೆ ನಾಲ್ಕು ಪ್ರಕರಣದ ಪ್ರಾಥಮಿಕ ತನಿಖೆ ನಡೆಸಿ 30 ದಿನಗಳಲ್ಲಿ ವರದಿ ನೀಡುವಂತೆ ಸರ್ಕಾರ ಆದೇಶಿಸಿದೆ. ಇದಕ್ಕಾಗಿ ಅಧೀನ ಕ್ರಾಯದರ್ಶಿ ಜಯರಾಂರವರನ್ನು ಸರ್ಕಾರ ನೇಮಿಸಿದೆ. ಶಾಸಕ ಸಾರಾ ಮಹೇಶ್ (MLA Sara Mahesh) ಅವರು ರೋಹಿಣಿ ಸಿಂಧೂರಿ ವಿರುದ್ಧ ಗಂಭೀರ ಆರೋಪ ಮಾಡಿದ್ದರು.
ರೋಹಿಣಿ ಸಿಂಧೂರಿ ವಿರುದ್ಧ ಆರೋಪಿಸಿದ್ದ ಸಾರಾ ಮಹೇಶ್
ಮೈಸೂರಿನ ಕೆಆರ್ ನಗರ ಶಾಸಕ ಸಾರಾ ಮಹೇಶ್ ಅವರು ಐಎಎಸ್ ಅಧಿಕಾರಿ, ಆಗಿನ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಹಗರಣ ನಡೆದಿದೆ ಎಂಬ ಆರೋಪ, ಜಿಲ್ಲಾಧಿಕಾರಿಗಳ ಸರ್ಕಾರಿ ನಿವಾಸದಲ್ಲಿ 50 ಲಕ್ಷ ವೆಚ್ಚದಲ್ಲಿ ಅನಧಿಕೃತವಾಗಿ ಸ್ವಿಮ್ಮಿಂಗ್ ಪೂಲ್ ಹಾಗೂ ಜಿಮ್ ನಿರ್ಮಾಣ ಮಾಡಿ ಪಾರಂಪರಿಕ ಕಟ್ಟಡಕ್ಕೆ ಹಾನಿ ಮಾಡಿರುವುದು, ಕರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಮುಚ್ಚಿಟ್ಟಿರುವುದು ಹಾಗೂ ಚಾಮರಾಜನಗರ ಆಕ್ಸಿಜನ ದುರಂತ ಪ್ರಕರಣಕ್ಕೆ ನಿರ್ಲಕ್ಷ್ಯವೇ ಕಾರಣ ಎಂಬ ಆರೋಪಗಳನ್ನು ಸಿಂಧೂರಿ ವಿರುದ್ಧ ಮಾಡಲಾಗಿತ್ತು.
ಏನಿದು ಪರಿಸರ ಸ್ನೇಹಿ ಬ್ಯಾಗ್ ಖರೀದಿ ಹಗರಣ?
ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ರೋಹಿಣಿ ಸಿಂಧೂರಿ ಅವರು ಮಹಾನಗರ ಪಾಲಿಕೆ, ನಗರಸಭೆ, ಪುರಸಭೆಗಳ ಪೂರ್ವಾನುಮತಿ ಇಲ್ಲದೆ 14.71 ಲಕ್ಷ ಪರಿಸರ ಸ್ನೇಹಿ ಬಟ್ಟೆ ಬ್ಯಾಗ್‌ಗಳನ್ನು 14 ಕೋಟಿ ರೂ.ಗೆ ಖರೀದಿ ಮಾಡಿದ್ದರು ಅಂತ ಆರೋಪಿಸಲಾಗಿತ್ತು. ಚಿಲ್ಲರೆ ಮಾರುಕಟ್ಟೆಯಲ್ಲಿ 10ರಿಂದ 13 ರೂ.ಗೆ ಸಿಗುವ ಪ್ರತಿ ಬ್ಯಾಗ್‌ಗೆ 52 ರೂ. ಕೊಡಲಾಗಿದೆ. ಸಾರ್ವಜನಿಕರ ತೆರಿಗೆ ಹಣವನ್ನು ರೋಹಿಣಿ ಸಿಂಧೂರಿ ದುಂದು ವೆಚ್ಚ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದ ಶಾಸಕ ಸಾ.ರಾ.ಮಹೇಶ್, ತನಿಖೆಗೆ ಆಗ್ರಹಿಸಿದ್ದರು.
ಇದನ್ನೂ ಓದಿ: Bomb Threat Call: ಕೆಂಪೇಗೌಡ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ ಕರೆ! "ಏನ್ ಮಾಡ್ಕೋತೀರಿ" ಎಂದ ಅಪರಿಚಿತ ಯಾರು?
14 ಕೋಟಿ ಅವ್ಯವಹಾರ ನಡೆದಿರುವ ಬಗ್ಗೆ ಆರೋಪ
ಕೈ ಮಗ್ಗ ನಿಗಮ ಬಿಟ್ಟು ಖಾಸಗಿ ವ್ಯಕ್ತಿಗೆ ಟೆಂಡರ್ ನೀಡಿ ರೋಹಿಣಿ ಸಿಂಧೂರಿ ಕಿಕ್ ಬ್ಯಾಕ್ ಪಡೆದಿದ್ದಾರೆ ಅಂತ ಆರೋಪಿಸಲಾಗಿತ್ತು. ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ನೆಪದಲ್ಲಿ ಒಟ್ಟು 14 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಸಾ.ರಾ. ಮಹೇಶ್ ಆರೋಪಿಸಿ ತನಿಖೆಗೆ ಆಗ್ರಹಿಸಿದ್ದರು.
ಪಾರಂಪರಿಕ ಕಟ್ಟಡಕ್ಕೆ ಧಕ್ಕೆ ತಂದ ಆರೋಪ
ಮೈಸೂರು ಜಿಲ್ಲಾಧಿಕಾರಿಗಳ ಸರ್ಕಾರಿ ನಿವಾಸ ಪಾರಂಪರಿಕ ಕಟ್ಟಡವಾಗಿದೆ. ಯಾವುದೇ ಹೊಸ ಕಟ್ಟಡ ಕಾಮಗಾರಿಯನ್ನು ಅಲ್ಲಿ ಮಾಡುವಂತಿಲ್ಲ. ಆದರೆ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ಈಜುಕೊಳ, ಜಿಮ್ ನಿರ್ಮಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.
ಇದನ್ನೂ ಓದಿ: Kodagu: ಸಾಯಿ ಶಂಕರ ಶಾಲೆಯಲ್ಲಿ ಮುಸ್ಲಿಂ ಮಕ್ಕಳ ಓದಿಸದಂತೆ ದುಬೈನಿಂದ ಬರ್ತಿದೆ ಒತ್ತಡ! ಹಿಂದೆ ಇರೋದ್ಯಾರು?
ಸರ್ಕಾರಕ್ಕೆ ಉತ್ತರ ನೀಡಿದ್ದ ರೋಹಿಣಿ ಸಿಂಧೂರಿ
ತಮ್ಮ ಮೇಲೆ ಬಂದಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಈ ಹಿಂದೆಯೇ ರೋಹಿಣಿ ಸಿಂಧೂರಿ ಸ್ಪಷ್ಟನೆ ನೀಡಿದ್ದರು. “ಜಿಲ್ಲಾಧಿಕಾರಿ ವಸತಿ ಕಚೇರಿ ಆವರಣದಲ್ಲಿ ಈಜುಕೊಳ ನಿರ್ಮಿಸಬೇಕೆಂಬುದು 5 ವರ್ಷಗಳ ಹಿಂದಿನ ಯೋಜನೆಯಾಗಿದೆ. ಹೊಸ ತಂತ್ರಜ್ಞಾನ ಬಳಸಿ ನಿರ್ಮಾಣ ಕಾರ್ಯ ನಡೆಸಲು ನಿರ್ಮಿತಿ ಕೇಂದ್ರ ನಿರ್ಧರಿಸಿತ್ತು. ಅದರ ಪ್ರಾಯೋಗಿಕ ಯೋಜನೆಯಾಗಿ ಈಜುಕೊಳ ನಿರ್ಮಾಣವಾಗಿದೆ” ಎಂದು ಸ್ಪಷ್ಟನೆ ನೀಡಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ