Midday Meal: ಮಕ್ಕಳಲ್ಲಿ ಹೆಚ್ಚಿದ ಅಪೌಷ್ಟಿಕತೆ, 7 ಜಿಲ್ಲೆಗಳಲ್ಲಿ ಮೊಟ್ಟೆ & ಬಾಳೆಹಣ್ಣು ವಿತರಣೆಗೆ ಸರ್ಕಾರ ನಿರ್ಧಾರ

Egg and banana :ಉತ್ತರ ಕರ್ನಾಟಕ ಭಾಗದ ಯಾದಗಿರಿ, ಕಲಬುರಗಿ, ಬಳ್ಳಾರಿ, ಕೊಪ್ಪಳ, ರಾಯಚೂರು, ಬೀದರ್, ವಿಜಯಪುರ ಜಿಲ್ಲೆಯ ಮಕ್ಕಳಲ್ಲಿ ಅಪೌಷ್ಟಿಕತೆ ಹಾಗೂ ರಕ್ತಹೀನತೆ ಸಮಸ್ಯೆ ಕಂಡುಬಂದಿದೆ.

ಮಕ್ಕಳು

ಮಕ್ಕಳು

 • Share this:
  ಶಾಲಾ ಮಕ್ಕಳು (School Children)ಅಪೌಷ್ಟಿಕತೆಯಿಂದ (Poor Nutrition)ಹಾಗೂ ಹಸಿವಿನಿಂದ (Hunger)ಬಳಲಬಾರದು ಎಂಬ ಕಾರಣಕ್ಕೆ ಈಗಾಗಲೇ ಸರ್ಕಾರ ರಾಜ್ಯಾದ್ಯಂತ ಬಿಸಿಯೂಟ (Midday meal )ಯೋಜನೆಯನ್ನು ನಡೆಸುತ್ತಿದೆ.. ಆದ್ರೂ ಸಹ ಮಕ್ಕಳಲ್ಲಿ ಅಪೌಷ್ಟಿಕತೆಯ ಕೊರತೆ ಹೆಚ್ಚಾಗಿದೆ.. ಹೀಗಾಗಿ ಮಕ್ಕಳಲ್ಲಿನ ಅಪೌಷ್ಟಿಕತೆ ಕೊರತೆಯನ್ನು ನೀಗಿಸಲು ಮುಂದಾಗಿದೆ. ಇನ್ನೂ ರಾಜ್ಯ ಸರ್ಕಾರ(State Government) ಈ ಹಿಂದೆ ಬಿಸಿಯೂಟದಲ್ಲಿ ಮೊಟ್ಟೆಯನ್ನ(Egg) ಮಕ್ಕಳಿಗೆ ನೀಡಲಾಗುತ್ತಿತ್ತು..ಆದರೆ ಕೆಲವು ಕಾರಣಗಳಿಂದ ಮೊಟ್ಟೆ ವಿತರಣೆ ಸ್ಥಗಿತಗೊಳಿಸಲಾಗಿತ್ತು.. ಆದ್ರೀಗ ಅಪೌಷ್ಟಿಕತೆಯಿಂದ ಬಳಲುತ್ತಿರುವ 7 ಜಿಲ್ಲೆಗಳ(District) ಮಕ್ಕಳಿಗೆ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಲ್ಲಿ ಮೊಟ್ಟೆ ಹಾಗೂ ಬಾಳೆಹಣ್ಣು(Banana) ವಿತರಣೆ ಮಾಡುವ ನಿರ್ಧಾರಕ್ಕೆ ರಾಜ್ಯ ಸರ್ಕಾರ ಬಂದಿದೆ.. ಈ ಮೂಲಕ ಮಕ್ಕಳಲ್ಲಿ ಕಾಡುತ್ತಿರುವ ಅಪೌಷ್ಟಿಕತೆ ಹಾಗೂ ರಕ್ತಹೀನ ಸಮಸ್ಯೆ ನಿವಾರಣೆ ಮಾಡಲು ರಾಜ್ಯ ಸರ್ಕಾರ ಹೆಜ್ಜೆಯಿಟ್ಟಿದೆ.

  7 ಜಿಲ್ಲೆಗಳ ಮಕ್ಕಳಿಗೆ ಮೊಟ್ಟೆ ಹಾಗೂ ಬಾಳೆ ಹಣ್ಣು ವಿತರಣೆ

  ಕಳೆದ ಆಗಸ್ಟ್‌ನಿಂದ ಹಂತ ಹಂತವಾಗಿ 1ರಿಂದ 12ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿಗಳು ಆರಂಭಗೊಂಡಿದ್ರೆ, ರಾಜ್ಯದಲ್ಲಿ ನ. 8ರಿಂದ ಎಲ್ಲಾ ಅಂಗನವಾಡಿ ಕೇಂದ್ರಗಳು ಹಾಗೂ ಪೂರ್ವ ಪ್ರಾಥಮಿಕ ತರಗತಿಗಳು ಹಂತಹಂತವಾಗಿ ಆರಂಭವಾಗಿವೆ.  ಉತ್ತರ ಕರ್ನಾಟಕ ಭಾಗದ ಯಾದಗಿರಿ, ಕಲಬುರಗಿ, ಬಳ್ಳಾರಿ, ಕೊಪ್ಪಳ, ರಾಯಚೂರು, ಬೀದರ್, ವಿಜಯಪುರ ಜಿಲ್ಲೆಯ ಮಕ್ಕಳಲ್ಲಿ ಅಪೌಷ್ಟಿಕತೆ ಹಾಗೂ ರಕ್ತಹೀನತೆ ಸಮಸ್ಯೆ ಕಂಡುಬಂದಿದೆ.

  ಇದನ್ನೂ ಓದಿ :ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದ ರಾಜ್ಯ ಸರ್ಕಾರ

  ಹೀಗಾಗಿ ಮಕ್ಕಳಲ್ಲಿ ಅಪೌಷ್ಟಿಕತೆ ಸಮಸ್ಯೆ ನಿವಾರಣೆ ಮಾಡಿ ರಕ್ತ ಹೆಚ್ಚಳ ಮಾಡಲು ಡಿಸೆಂಬರ್ ನಿಂದ ಮಾರ್ಚ್ ಅಂತ್ಯದವರೆಗೆ ಮಧ್ಯಾಹ್ನದ ಬಿಸಿಯೂಟ ಯೋಜನೆ ಅಡಿಯಲ್ಲಿ ಮಕ್ಕಳಲ್ಲಿ ಹೆಚ್ಚು ಅಪೌಷ್ಟಿಕತೆ ಕಂಡುಬಂದಿರುವ ಈ ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರ 6 ರಿಂದ 15 ವರ್ಷ ವಯಸ್ಸಿನೊಳಗಿನ ಮಕ್ಕಳಿಗೆ ದೇಹಕ್ಕೆ ಪ್ರೊಟೀನ್ ಹಾಗೂ ಪೌಷ್ಟಿಕಾಂಶ ಒದಗಿಸುವ ಮೊಟ್ಟೆ ಅಥವಾ ಬಾಳೆಹಣ್ಣು ನೀಡಲು ಆದೇಶ ನೀಡಿದೆ..

  ಶಾಲಾ ಶಿಕ್ಷಕರ ಜವಾಬ್ದಾರಿ

  ಇನ್ನು ಮೊಟ್ಟೆ ಹಾಗೂ ಬಾಳೆಹಣ್ಣು ಸಂಗ್ರಹಕ್ಕೆ ಬೇಕಾಗಿರುವ ಎಗ್ ಹಾಗೂ ಫ್ರೂಟ್ ಟ್ರೇ ಖರೀದಿಗೆ ಶಾಲಾ ಅಡುಗೆ ಅನುದಾನಿತ ಸಂಚಿತ ನಿಧಿಯಿಂದ ಹಣ ಬಿಡುಗಡೆ ಮಾಡಿಕೊಂಡು ಖರೀದಿ ಮಾಡುವಂತೆ ಸರ್ಕಾರ ಸೂಚನೆ ನೀಡಿದೆ..ಇನ್ನು ಮಕ್ಕಳಿಗೆ ಬೇಯಿಸಿದ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಿಸುವ ಸಂಪೂರ್ಣ ಜವಾಬ್ದಾರಿ ಆಯಾ ಶಾಲೆಗಳ ಮುಖ್ಯ ಶಿಕ್ಷಕರು ಹಾಗೂ, ಅಡುಗೆ ಸಿಬ್ಬಂದಿ ಅವರದಾಗಿದ್ದು, ಎಚ್ಚರಿಕೆಯಿಂದ ಮಕ್ಕಳಿಗೆ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಣೆ ಮಾಡುವಂತೆ ಸೂಚಿಸಲಾಗಿದೆ..

  ಇದನ್ನೂ ಓದಿ :ಕಷ್ಟಕ್ಕೆ ನೆರವಾದ ‘ಕೋಟಿಗೊಬ್ಬ’.. ಹಾಸನದ ಬಡ ವಿದ್ಯಾರ್ಥಿಯ ಸಂಕಷ್ಟಕ್ಕೆ ಮಿಡಿದ ನಟ Kiccha Sudeep

  ಯಾದಗಿರಿ ಜಿಲ್ಲೆಯಲ್ಲಿ ಹೆಚ್ಚು ಅಪೌಷ್ಟಿಕತೆಯಿಂದ ಕೂಡಿದ ಮಕ್ಕಳು

  ಯಾದಗಿರಿ ಜಿಲ್ಲೆಯಲ್ಲಿ ಶೇಕಡಾ 74, ಕಲಬುರಗಿ ಜಿಲ್ಲೆಯಲ್ಲಿ ಶೇಕಡಾ 72.4, ಬಳ್ಳಾರಿ ಜಿಲ್ಲೆಯಲ್ಲಿ ಶೇಕಡಾ 72.3, ಕೊಪ್ಪಳ ಜಿಲ್ಲೆಯಲ್ಲಿ ಶೇಕಡಾ 70.7, ರಾಯಚೂರು ಜಿಲ್ಲೆಯಲ್ಲಿ ಶೇಕಡಾ 70.6, ಬೀದರ್ ಜಿಲ್ಲೆಯಲ್ಲಿ ಶೇಕಡಾ 69.1, ವಿಜಯಪುರ ಜಿಲ್ಲೆಯಲ್ಲಿ ಶೇಕಡಾ 68 ಮಕ್ಕಳಿಗೆ ಅಪೌಷ್ಟಿಕತೆ ಸಮಸ್ಯೆ ಕಂಡುಬಂದಿದೆ.ಹೀಗಾಗಿ ಒಟ್ಟು 14,44,322 ಮಕ್ಕಳಲ್ಲಿ ಅಪೌಷ್ಟಿಕತೆ ಹಾಗೂ ರಕ್ತಹೀನತೆ ಸಮಸ್ಯೆಯನ್ನು ಬಗೆಹರಿಸಲು ಅನುದಾನ ಬಿಡುಗಡೆ ಮಾಡಲಾಗಿದ್ದು, ಮೊಟ್ಟೆ ಸೇವಿಸುವ ಮಕ್ಕಳಿಗೆ ಮೊಟ್ಟೆ, ಮೊಟ್ಟೆ ಸೇವಿಸದ ಮಕ್ಕಳಿಗೆ ಬಾಳೆಹಣ್ಣು ವಿತರಣೆ ಮಾಡಲಾಗುವುದು..

  ಸರ್ಕಾರ ಬಿಡುಗಡೆ ಮಾಡಿದ ಅನುದಾನವೆಷ್ಟು?

  ಸದ್ಯ ಒಬ್ಬ ವಿದ್ಯಾರ್ಥಿಗೆ ಒಂದು ಮೊಟ್ಟೆ ಖರೀದಿಸಲು 6 ರೂಪಾಯಿಯಂತೆ ಒಟ್ಟು ಏಳು ಜಿಲ್ಲೆಗಳಿಗೆ 39.86 ಕೋಟಿ   ಅನುದಾನವನ್ನು ಸರಕಾರ ಬಿಡುಗಡೆ ಮಾಡಿದ್ದು, SDMC ಅಧ್ಯಕ್ಷರು ಹಾಗೂ ಶಾಲಾ ಮುಖ್ಯ ಶಿಕ್ಷಕರ ಸಮ್ಮುಖದಲ್ಲಿ ಮೊಟ್ಟೆ ಖರೀದಿ ಮಾಡುವಂತೆ ಸೂಚನೆ ನೀಡಲಾಗಿದೆ.
  Published by:ranjumbkgowda1 ranjumbkgowda1
  First published: