Weather Report: ಸೆಪ್ಟೆಂಬರ್ 1 ರ ವರೆಗೆ ರಾಜ್ಯದಲ್ಲಿ ಭಾರೀ ಮಳೆ, ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

Heavy Rainfall: ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದ್ದು,  ಕರಾವಳಿ ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲಿ ವರುಣನ ಅಬ್ಬರ ಮುಂದುವರೆದಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ರಾಜ್ಯದಲ್ಲಿ ನಿನ್ನೆಯಿಂದ ಭಾರಿ ಮಳೆ ಆರಂಭವಾಗಿದ್ದು, ಇನ್ನು ಹೆಚ್ಚಿನ ದಿನಗಳ ಕಾಲ ಮುಂದುವರೆಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕರಾವಳಿ(Coastal), ಮಲೆನಾಡು, ದಕ್ಷಿಣ ಒಳನಾಡು,  ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಾಗುತ್ತಿದ್ದು, ಇಂದು ಸಹ ಭಾರೀ ಮಳೆಯಾಗುವ ಸಾಧ್ಯತೆ ಇದೆ.

 ಆಂಧ್ರ ಕರಾವಳಿ ಮತ್ತು ಓರಿಸ್ಸಾ ಭಾಗಗಳ ಕಡಿಮೆ ಒತ್ತಡ ಮತ್ತು ವಾಯುಭಾರ ಕುಸಿತ  ರಾಜ್ಯದ ಮೇಲೆ ಪರಿಣಾಮ ಬೀರಿದ್ದು, ದಕ್ಷಿಣ ಕನ್ನಡ ಮುಖ್ಯವಾಗಿ ಸುಬ್ರಹ್ಮಣ್ಯ, ಮಂಗಳೂರು, ಬಂಟ್ವಾಳ ತಾಲೂಕುಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಇದು ಸೆಪ್ಟೆಂಬರ್ 1 ರ ವರೆಗೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದ್ದು,  ಕರಾವಳಿ ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲಿ ವರುಣನ ಅಬ್ಬರ ಮುಂದುವರೆದಿದೆ. ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯ ನಿರೀಕ್ಷೆ ಇದೆ.

ಕರ್ನಾಟಕ ಮತ್ತು ಕೇರಳ ಕರಾವಳಿ ಭಾಗದಲ್ಲಿ ಕಡಿಮೆ ಒತ್ತಡದ ಕಾರಣದಿಂದ ಎರಡು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ. ಶಿವಮೊಗ್ಗ, ಉತ್ತರ ಕನ್ನಡ, ಹಾಸನ, ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ಕಳೆದ 2 ವಾರಗಳಿಂದ ಭಾರೀ ಮಳೆಯಾಗುತ್ತಿದ್ದು, ಆಗಸ್ಟ್ 29 ರಂದು ಆರೇಂಜ್ ಆಲರ್ಟ್ ಘೋಷಣೆ ಮಾಡಲಾಗಿದೆ. ಮತ್ತು ಆಗಸ್ಟ್ 30ರಂದು ಯೆಲ್ಲೋ ಆಲರ್ಟ್ ಘೋಷಿಸಲಾಗಿದೆ. ಸಿಲಿಕಾನ್ ಸಿಟಿಯಲ್ಲಿ ಕೂಡ ಕಳೆದ 2 ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಇಂದು ಸಹ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಧಾರವಾಡ ಸೆಂಟ್ರಲ್​​ ಜೈಲಿನಲ್ಲಿ ಕೈದಿಗಳ ಭೇಟಿಗೆ ಹೊಸ‌ ತಂತ್ರಜ್ಞಾನ

ಬೀದರ್, ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕೂಡ ಆಗಸ್ಟ್ 29 ರಿಂದ ಸೆಪ್ಟೆಂಬರ್ 1 ರ ವರೆಗೆ ಭಾರೀ ಮಳೆಯ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಾತ್ರವಲ್ಲದೇ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲೂ ಇಂದು ಮಳೆ ಸುರಿಯಲಿದೆ. ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯಪುರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ  ಕಳೆದ ಎರಡು ದಿನಗಳಿಂದ ಮೋಡ ಕವಿದ ವಾತಾವರಣವಿತ್ತು, ಆದರೆ ಇಂದು ಮಳೆಯಾಗುವ ಸಾಧ್ಯತೆ ಇದೆ.

ಕೆಲ ನಗರಗಳ ಇಂದಿನ ಹವಾಮಾನ ಹೀಗಿದೆ

ಬೆಂಗಳೂರು: 27-20
ಮಂಗಳೂರು: 26-23
ಶಿವಮೊಗ್ಗ: 24-20
ಬೆಳಗಾವಿ: 26-16
ಮೈಸೂರು: 26-19

ಮಡಿಕೇರಿ: 20-17
ಹಾಸನ: 24-19

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ತಮ್ಮ ತಮ್ಮ ಸರದಿ ಬಂದಾಗ ತಪ್ಪದೇ ಲಸಿಕೆ ಪಡೆಯಬೇಕು. ಈಗಿನ ಪರಿಸ್ಥಿತಿಯಲ್ಲಿ ಲಸಿಕೆ ಒಂದೇ ಸೋಂಕಿನ ವಿರುದ್ಧ ಹೋರಾಡುವ ಮಾರ್ಗವಾಗಿದೆ. ಅತ್ಯಗತ್ಯವಿದ್ದರೆ ಮಾತ್ರವೇ ಮನೆಯಿಂದ ಹೊರಗೆ ಹೋಗುವ ಅಭ್ಯಾಸ ರೂಢಿಸಿಕೊಳ್ಳಬೇಕು.

 
Published by:Sandhya M
First published: