Karnataka Weather Today: ರಾಜ್ಯದಲ್ಲಿ ಮುಂದುವರೆದ ವರುಣನ ಆರ್ಭಟ- ಸೆಪ್ಟೆಂಬರ್​ 15ರ ತನಕ ಯೆಲ್ಲೋ ಅಲರ್ಟ್

ಮುಂದಿನ 24 ಗಂಟೆಗಳಲ್ಲಿ, ಪಂಜಾಬ್, ಹರಿಯಾಣ, ದೆಹಲಿ, ಉತ್ತರ ಪ್ರದೇಶ, ಉತ್ತರಾಖಂಡ, ಒಡಿಶಾ, ಛತ್ತೀಸ್‌ಗಢ್, ಮಧ್ಯ ಪ್ರದೇಶ, ಪೂರ್ವ ರಾಜಸ್ಥಾನ, ಪೂರ್ವ ಗುಜರಾತ್ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Karnataka Rains Today( ಸೆ.12)ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆ(Heavy rainfall) ಸುರಿಯುತ್ತಿದ್ದು, ಈ ಮಳೆ  ಸೆಪ್ಟೆಂಬರ್ 15ರವರೆಗೂ ಮುಂದುವರೆಯಲಿದೆ ಎಂದು ಭಾರತೀಯ  ಹವಾಮಾನ ಇಲಾಖೆ(IMD) ಘೋಷಣೆ ಮಾಡಿದೆ. ಇನ್ನು ಭಾರೀ ಮಳೆ ನಿರೀಕ್ಷೆಯ ಕಾರಣದಿಂದ ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್(Yellow Alert) ಘೋಷಣೆ ಮಾಡಲಾಗಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಹಾಗೆಯೇ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲೂ ಹೆಚ್ಚು ಮಳೆಯಾಗಲಿದ್ದು,  ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಹಲವೆಡೆ ಇದೇ 15ರವರೆಗೂ ಮಳೆಯ ಅಬ್ಬರ ಮುಂದುವರೆಯಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಶಿವಮೊಗ್ಗ, ಮಂಗಳೂರು, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇದೆ 15ರವರೆಗೂ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಪ್ಪಳ, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಬೆಳಗಾವಿ, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದಲೂ ಮಳೆಯಾಗುತ್ತಿದೆ ಎಂದು ಇಲಾಖೆ ತಿಳಿಸಿದೆ.

ಇದನ್ನೂ ಓದಿ: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಇಂತಿದೆ..!

ಮುಂದಿನ 24 ಗಂಟೆಗಳಲ್ಲಿ, ಪಂಜಾಬ್, ಹರಿಯಾಣ, ದೆಹಲಿ, ಉತ್ತರ ಪ್ರದೇಶ, ಉತ್ತರಾಖಂಡ, ಒಡಿಶಾ, ಛತ್ತೀಸ್‌ಗಢ್, ಮಧ್ಯ ಪ್ರದೇಶ, ಪೂರ್ವ ರಾಜಸ್ಥಾನ, ಪೂರ್ವ ಗುಜರಾತ್ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಪಶ್ಚಿಮ ರಾಜಸ್ಥಾನ, ಸೌರಾಷ್ಟ್ರ ಮತ್ತು ಕಚ್, ಮರಾಠವಾಡ, ಕರಾವಳಿ ಆಂಧ್ರಪ್ರದೇಶ ಮತ್ತು ತೆಲಂಗಾಣದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ದೇಶದ ಮಧ್ಯ ಭಾಗದಲ್ಲಿ ವಾರದಿಂದಲೂ ಅತಿ ಹೆಚ್ಚಿನ ಮಳೆಯಾಗುತ್ತಿದ್ದು, ಗುಜರಾತ್‌ನಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವುದಾಗಿ ತಿಳಿಸಿದೆ.

ಉತ್ತರ ಕೊಂಕಣ, ದಕ್ಷಿಣ ಗುಜರಾತ್, ಒಡಿಶಾ, ಛತ್ತೀಸ್‌ಗಡದಲ್ಲಿ ಸೆಪ್ಟೆಂಬರ್ 12 ಹಾಗೂ 13ರಂದು ಭಾರೀ ಮಳೆಯಾಗುವುದಾಗಿ ಸೂಚನೆ ನೀಡಿದೆ.. ಛತ್ತೀಸ್‌ಗಡ, ಕೊಂಕಣ ಹಾಗೂ ಗೋವಾದಲ್ಲಿ ಸೆಪ್ಟೆಂಬರ್ 11ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಸೆಪ್ಟೆಂಬರ್ 13ರವರೆಗೂ ಒಡಿಶಾ ಹಾಗೂ ಕೊಂಕಣ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಸೆಪ್ಟೆಂಬರ್ 14ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಸೆಪ್ಟೆಂಬರ್ 11ರಿಂದ 14ರವೆಗೂ ಗುಜರಾತ್‌ನಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು,  ಕರಾವಳಿ ಕರ್ನಾಟಕ, ತೆಲಂಗಾಣ, ಕೇರಳ, ಉತ್ತರ ಪ್ರದೇಶ, ಜಮ್ಮು- ಕಾಶ್ಮೀರ, ಲಡಾಖ್, ಹರಿಯಾಣ, ದೆಹಲಿ, ಪಂಜಾಬ್, ಜಾರ್ಖಂಡ್, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ, ವಿದರ್ಭ, ಕೊಂಕಣ ಮತ್ತು ಗೋವಾದಲ್ಲಿ ಶನಿವಾರ ಭಾರೀ ಮಳೆಯಾಗಿದೆ.

ಇದನ್ನೂ ಓದಿ: ಕರಾವಳಿ, ಮಲೆನಾಡು ಸೇರಿ ರಾಜ್ಯದ ಹಲವೆಡೆ ಸೆಪ್ಟೆಂಬರ್ 13 ರ ತನಕ ಭಾರೀ ಮಳೆ- ಹವಾಮಾನ ಇಲಾಖೆ ಮುನ್ಸೂಚನೆ

ಇದರ ನಡುವೆ  ರಾಜ್ಯದಲ್ಲಿ   ಜೂನ್ ತಿಂಗಳಿನಲ್ಲಿ ಶೇ 10ರಷ್ಟು ಅಧಿಕ ಮಳೆ ದಾಖಲಾಗಿತ್ತು. ಆದರೆ ಜುಲೈ ಹಾಗೂ ಆಗಸ್ಟ್‌ ತಿಂಗಳಿನಲ್ಲಿ ಮಳೆ ಕೊರತೆ ಕಂಡುಬಂದಿದ್ದು, ಅದನ್ನು ಸೆಪ್ಟೆಂಬರ್ ತಿಂಗಳ ಮಳೆ ಸರಿ ಮಾಡಲಿದೆ ಎಂದು ಹಲವಾಮಾನ ಇಲಾಖೆ ತಿಳಿಸಿದೆ. ಇನ್ನು  ಜುಲೈ ತಿಂಗಳಿನಲ್ಲಿ ವಾಡಿಕೆಗಿಂತ 7% ಮಳೆ ಕಡಿಮೆಯಾಗಿದ್ದರೆ, ಆಗಸ್ಟ್‌ ತಿಂಗಳಿನಲ್ಲಿ 24% ಕಡಿಮೆ ಮಳೆ ದಾಖಲಾಗಿದೆ. ಆಗಸ್ಟ್‌ ತಿಂಗಳಿಗೆ ಹೋಲಿಸಿದರೆ ಸೆಪ್ಟೆಂಬರ್‌ನಲ್ಲಿ ಹೆಚ್ಚಿನ ಮಳೆ ದಾಖಲಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ  ಭಾರೀ ಮಳೆ ಮುಂದುವರೆದರೆ ಸೋಯಾಬೀನ್, ಕಡಲೆ, ಭತ್ತ, ಜೋಳ, ಹತ್ತಿ ಬೆಳೆಗಳಿಗೆ ಹಾನಿಯಾಗಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
Published by:Sandhya M
First published: