• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Teachers Exam: ಇಂದು ಶಿಕ್ಷಕರ ನೇಮಕಾತಿ ಪರೀಕ್ಷೆ! ಪರೀಕ್ಷೆ ಕೇಂದ್ರಗಳಲ್ಲಿ ಸಂಪೂರ್ಣ ಭದ್ರತೆ

Teachers Exam: ಇಂದು ಶಿಕ್ಷಕರ ನೇಮಕಾತಿ ಪರೀಕ್ಷೆ! ಪರೀಕ್ಷೆ ಕೇಂದ್ರಗಳಲ್ಲಿ ಸಂಪೂರ್ಣ ಭದ್ರತೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಯಾದಗಿರಿ ಜಿಲ್ಲೆಯಲ್ಲಿ ಕೂಡ ಸರಕಾರದ ಸೂಚನೆಯಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮವಹಿಸಲಾಗಿದೆ. ಯಾದಗಿರಿ ಜಿಲ್ಲೆಯಲ್ಲಿ 28 ಪರೀಕ್ಷೆ ಕೇಂದ್ರಗಳಲ್ಲಿ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಅಗತ್ಯ ಕ್ರಮವಹಿಸಲಾಗಿದೆ.

  • Share this:

    ಯಾದಗಿರಿ(ಮೇ.21): ರಾಜ್ಯದಲ್ಲಿ ನಡೆದ ಪಿಎಸ್ ಐ (PSI) ನೇಮಕಾತಿ ಪರೀಕ್ಷೆ (Recruitment Exam) ಅಕ್ರಮ ಪ್ರಕರಣವು  ಭಾರಿ ಕೊಲಾಹಲ ಉಂಟಾಗಿ ಅಕ್ರಮದಲ್ಲಿ ಭಾಗಿಯಾದವರು ಉಪ್ಪು ತಿಂದವರು ನೀರು ಕುಡಿಯಬೇಕು ಎನ್ನುವಂತೆ ತಪ್ಪು ಮಾಡಿದವರು ಜೈಲು ಸೇರಿದ್ದಾರೆ.ಪಿಎಸ್ ಐ ನೇಮಕಾತಿ (PSI Recruitment) ಪ್ರಕರಣದ ನಂತರ ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಶಿಕ್ಷಕರ ನೇಮಕಾತಿ ಪರೀಕ್ಷೆ ನಡೆಸಲು ಮುಂದಾಗಿದ್ದು,ನಾಳೆಯಿಂದ ಎರಡು ದಿನಗಳ  ಕಾಲ ಶಿಕ್ಷಕರ ನೇಮಕಾತಿ ಪರೀಕ್ಷೆ ನಡೆಯಲಿವೆ. ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣ ಬೆಳಕಿಗೆ ಬಂದ ನಂತರ ಪಾರದರ್ಶಕವಾಗಿ ಪರೀಕ್ಷೆ (Exam) ನಡೆಸಲು ಸರಕಾರ ಕಟ್ಟುನಿಟ್ಟಿನ ಎಚ್ಚರಿಕೆ ಹೆಜ್ಜೆ ಇಟ್ಟಿದೆ. ರಾಷ್ಟ್ರೀಯ ಅರ್ಹತೆ ಪರೀಕ್ಷೆಯ ಮಾದರಿಯಲ್ಲಿ ಪರೀಕ್ಷೆ ನಡೆಸಲು ಸರಕಾರ ಕಟ್ಟುನಿಟ್ಟಿನ ಕ್ರಮವಹಿಸಿದ್ದು ಅದರಂತೆ ಪರೀಕ್ಷೆ ಕೇಂದ್ರಗಳಲ್ಲಿ ಹಾಗೂ ಪ್ರಶ್ನೆ ಪತ್ರಿಕೆ ಸಾಗಾಟ ಬಗ್ಗೆ ಅಗತ್ಯ ಎಚ್ಚರಿಕೆ ವಹಿಸಲಾಗಿದೆ.


    ಯಾದಗಿರಿ ಜಿಲ್ಲೆಯಲ್ಲಿ ಕೂಡ ಸರಕಾರದ ಸೂಚನೆಯಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮವಹಿಸಲಾಗಿದೆ. ಯಾದಗಿರಿ ಜಿಲ್ಲೆಯಲ್ಲಿ 28 ಪರೀಕ್ಷೆ ಕೇಂದ್ರಗಳಲ್ಲಿ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಅಗತ್ಯ ಕ್ರಮವಹಿಸಲಾಗಿದೆ.


    ಯಾದಗಿರಿ ಜಿಲ್ಲೆಯ 28 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು,863 ಹುದ್ದೆಗಳಿಗೆ ಪರೀಕ್ಷೆ ನಡೆಯುತ್ತಿದ್ದು 6625 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ.


    ಪರೀಕ್ಷೆ ಕೇಂದ್ರಕ್ಕೆ ಡಿಡಿಪಿಐ ಭೇಟಿ


    ನಾಳೆಯಿಂದ ಮೇ 22 ರ ವರಗೆ ಎರಡು ದಿನಗಳ ಪರೀಕ್ಷೆ ನಡೆಯುತ್ತಿದ್ದು. ಇಂದು ಪರೀಕ್ಷೆ ಕೇಂದ್ರಕ್ಕೆ ಯಾದಗಿರಿ ಡಿಡಿಪಿಐ ಶಾಂತಗೌಡ ಪಾಟೀಲ ಅವರು ಭೇಟಿ ನೀಡಿ ಪರಿಶೀಲನೆ ಮಾಡಿದರು.ಪರೀಕ್ಷೆ ಕೇಂದ್ರಗಳ ಅಗತ್ಯ ಸಿದ್ದತ್ತೆ ಪರಿಶೀಲನೆ ಮಾಡಿದರು.


    ಇದನ್ನೂ ಓದಿ: Karnataka Rain Updates: ಕರ್ನಾಟಕದಲ್ಲಿ ಅತಿ ಹೆಚ್ಚು ಮಳೆ ಬಿದ್ದ ಊರು ಯಾವುದು? ಲೇಟೆಸ್ಟ್ ಉತ್ತರ ಇಲ್ಲಿದೆ


    ಈ ಬಗ್ಗೆ ನ್ಯೂಸ್ 18 ಕನ್ನಡಕ್ಕೆ ಡಿಡಿಪಿಐ ಶಾಂತಗೌಡ ಪಾಟೀಲ ಅವರು ಮಾತನಾಡಿ,ಜಿಲ್ಲೆಯ 28 ಪರೀಕ್ಷೆ ಕೇಂದ್ರಗಳಲ್ಲಿ  ಪರೀಕ್ಷೆ ನಡೆಯಲಿದ್ದು ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಸಿದ್ದತ್ತೆ ಮಾಡಿಕೊಂಡಿದ್ದು ಎಲ್ಲಾ ಪರೀಕ್ಷೆ ಕೇಂದ್ರಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದೆ‌ ಎಂದರು.


    ಸರಕಾರಿ ಶಿಕ್ಷಕರ ಮಾತ್ರ ನಿಯೋಜನೆ


    ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ಕರ್ತವ್ಯಕ್ಕೆ ಸರಕಾರಿ ಶಿಕ್ಷಕರನ್ನು ಮಾತ್ರ ನಿಯೋಜಿಸಲಾಗಿದೆ.ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ಅಕ್ರಮ ತಡೆಯಲು ಎಲ್ಲಾ ಕೇಂದ್ರದ ಕೋಣೆಯಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದೆ.ಅಕ್ರಮ ನಡೆಯದಂತೆ ಕಟ್ಟುನಿಟ್ಟಿನ ಕ್ರಮವಹಿಸಲಾಗಿದೆ.


    ಇದನ್ನೂ ಓದಿ: Bengaluru: ಬಾಂಗ್ಲಾ ಯುವತಿ ಮೇಲೆ ಗ್ಯಾಂಗ್ ರೇಪ್ ಕೇಸ್: 7 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


    ಈ ಕುರಿತು ನ್ಯೂಸ್ 18 ಕನ್ನಡಕ್ಕೆ  ಯಾದಗಿರಿ ಜಿಲ್ಲಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ್ವರ ನಾಯಕ ಅವರು ಮಾತನಾಡಿ, ಜಿಲ್ಲೆಯಲ್ಲಿ ನಡೆಯಲಿರುವ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ಹಿನ್ನಲೆ ಜಿಲ್ಲೆಯ 28 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು ಯಾವುದೇ ಅಕ್ರಮ ನಡೆಯದಂತೆ ಕಟ್ಟೆಚ್ಚರವಹಿಸಲಾಗಿದ್ದು,ಪರೀಕ್ಷೆ ಕೇಂದ್ರದಲ್ಲಿ ಸರಕಾರಿ ಶಿಕ್ಷಕರನ್ನು ಮಾತ್ರ ಪರೀಕ್ಷೆ ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದರು.

    Published by:Divya D
    First published: