TET Exam: ರಾಜ್ಯದಲ್ಲಿ ಅಕ್ಟೋಬರ್ 4 ರಂದು ಟಿಇಟಿ ಪರೀಕ್ಷೆ; ಬಾಗಲಕೋಟೆಯಲ್ಲಿ ಸಕಲ ಸಿದ್ಧತೆ

ಕೋವಿಡ್-19 ಪಾಸಿಟಿವ್ ಆಗಿರುವ ಅಭ್ಯರ್ಥಿಗಳಿಗೂ ಪರೀಕ್ಷೆ ಬರೆಯಲು ಅವಕಾಶವಿದ್ದು, ಅಂತಹ ಅಭ್ಯರ್ಥಿಗಳಿದ್ದಲ್ಲಿ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ನಲ್ಲಿ ಎಲ್ಲ ರೀತಿಯ ವ್ಯವಸ್ಥೆ ಕ್ರಮವಹಿಸಬೇಕು.

news18-kannada
Updated:October 1, 2020, 9:26 AM IST
TET Exam: ರಾಜ್ಯದಲ್ಲಿ ಅಕ್ಟೋಬರ್ 4 ರಂದು ಟಿಇಟಿ ಪರೀಕ್ಷೆ; ಬಾಗಲಕೋಟೆಯಲ್ಲಿ ಸಕಲ ಸಿದ್ಧತೆ
ಸಾಂದರ್ಭಿಕ ಚಿತ್ರ
  • Share this:
ಬಾಗಲಕೋಟೆ (ಅ.01 ): ಕೋವಿಡ್-19 ಮಧ್ಯೆಯೂ  ರಾಜ್ಯಾದ್ಯಂತ  ಅಕ್ಟೋಬರ್ 4ರಂದು  ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ನಡೆಯಲಿದ್ದು, ಬಾಗಲಕೋಟೆ ಜಿಲ್ಲೆಯಲ್ಲೂ ಕೋವಿಡ್ ಹಿನ್ನೆಲೆಯಲ್ಲಿ ಎಸ್.ಓ.ಪಿ ಪ್ರಕಾರ ಎಲ್ಲ ರೀತಿಯ ಮುಂಜಾಗ್ರತಾ ಕ್ರಮದೊಂದಿಗೆ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ  ಟಿಇಟಿ  ಪರೀಕ್ಷೆಯ ಪೂರ್ವ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿದ ಜಿಲ್ಲಾಧಿಕಾರಿ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ಸೂಚಿಸಿದರು. ಟಿಇಟಿ ಪರೀಕ್ಷೆಗಳು ಎರಡು ಅವಧಿಯಲ್ಲಿ ನಡೆಯಲಿದ್ದು, ಬೆಳಗಿನ ಅವಧಿಯ ಪತ್ರಿಕೆ-1ಕ್ಕೆ 8 ಪರೀಕ್ಷಾ ಕೇಂದ್ರಗಳು, ಮಧ್ಯಾಹ್ನದ ಅವಧಿಯ ಪತ್ರಿಕೆ-2ಕ್ಕೆ 19 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಬೆಳಗಿನ ಅವಧಿಗೆ ಒಟ್ಟು 2795 ಅಭ್ಯರ್ಥಿಗಳು ಹಾಗೂ ಮಧ್ಯಾಹ್ನದ ಅವಧಿಗೆ 6364 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಮಾಹಿತಿ ನೀಡಿದರು.

ಸ್ಥಳೀಯ ಸಂಸ್ಥೆಗಳ ಸಹಕಾರದೊಂದಿಗೆ ಪರೀಕ್ಷಾ ಕೇಂದ್ರದ ಎಲ್ಲ ಕೊಠಡಿ, ಪೀಠೋಪಕರಣ ಹಾಗೂ ಶೌಚಾಲಯಗಳನ್ನು ಕಡ್ಡಾಯವಾಗಿ ಪರೀಕ್ಷೆ ಹಿಂದಿನ ದಿನ ಸೋಂಕು ನಿವಾರಕ ದ್ರಾವಣ ಸಿಂಪಡಿಸಬೇಕು. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಕನಿಷ್ಠ 1 ಹೆಚ್ಚುವರಿ ಪರೀಕ್ಷಾ ಕೊಠಡಿಯನ್ನು ಕಾಯ್ದಿರಿಸಬೇಕು. ಪರೀಕ್ಷಾ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಪರೀಕ್ಷೆಗೆ ಅರ್ಧ ಗಂಟೆ ಮುಂಚಿತವಾಗಿ ಹಾಜರಾಗಲು ತಿಳಿಸಿ ಆರೋಗ್ಯ ತಪಾಸಣೆಗೆ ಒಳಪಡಿಸಲು ಸೂಚಿಸಿದರು.

ಕೊತ್ತೂರು ಮಂಜುನಾಥ್ ಬೆಂಬಲಿಗರ ವಿರುದ್ದ ಕಿಡಿಕಾರಿದ ಅಬಕಾರಿ ಸಚಿವ ಎಚ್.​ ನಾಗೇಶ್

ಪ್ರತಿ ಪರೀಕ್ಷಾ ಕೇಂದ್ರಕ್ಕೆ ಆರೋಗ್ಯ ತಪಾಸಣಾ ಕೌಂಟರ್, ಪರೀಕ್ಷಾ ಕೇಂದ್ರದ ಮುಖ್ಯ ದ್ವಾರದಲ್ಲಿ ತೆರೆಯಬೇಕು. ಆರೋಗ್ಯ ಇಲಾಖೆಯಿಂದ ಇಬ್ಬರು ಅರೆ ವೈದ್ಯಕೀಯ ಸಿಬ್ಬಂದಿ ಅಥವಾ ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಬೇಕು. ಪರೀಕ್ಷೆಯ ಎರಡು ಅವಧಿಯಲ್ಲೂ ಅಭ್ಯರ್ಥಿಗಳ ಆರೋಗ್ಯ ತಪಾಸಣೆಗೆ ಒಳಪಡಿಸಬೇಕು. ಅಲ್ಲದೇ ಪರೀಕ್ಷಾ ಕಾರ್ಯದಲ್ಲಿ ತೊಡಗಿರುವ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಆರೋಗ್ಯ ತಪಾಸಣೆಯ ನಂತರ ಪರೀಕ್ಷಾ ಕೇಂದ್ರಕ್ಕೆ ತೆರಳಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಕೋವಿಡ್-19 ಪಾಸಿಟಿವ್ ಆಗಿರುವ ಅಭ್ಯರ್ಥಿಗಳಿಗೂ ಪರೀಕ್ಷೆ ಬರೆಯಲು ಅವಕಾಶವಿದ್ದು, ಅಂತಹ ಅಭ್ಯರ್ಥಿಗಳಿದ್ದಲ್ಲಿ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ನಲ್ಲಿ ಎಲ್ಲ ರೀತಿಯ ವ್ಯವಸ್ಥೆ ಕ್ರಮವಹಿಸಬೇಕು. ಅಭ್ಯರ್ಥಿಯು ತಾಲೂಕಾ ಕೋವಿಡ್ ಕೇರ್ ಸೆಂಟರನಲ್ಲಿದ್ದರೆ ಅವರನ್ನು ಜಿಲ್ಲಾ ಕೋವಿಡ್ ಕೇರ್ ಸೆಂಟರ್​​ಗೆ ಕರೆತರಲು ಆ್ಯಂಬುಲೆನ್ಸ್​​ ವ್ಯವಸ್ಥೆ ಮಾಡಬೇಕು. ಹೋಂ ಐಸೋಲೇಶನ್‍ನಲ್ಲಿರುವ ಕೋವಿಡ್ ಪಾಸಿಟಿವ್ ಅಭ್ಯರ್ಥಿಗಳಿದ್ದಲ್ಲಿ ಅಂತ ಅಭ್ಯರ್ಥಿಗಳು ಆರೋಗ್ಯದಲ್ಲಿ ಸುಸ್ಥಿತಿಯಲ್ಲಿರುವ ಬಗ್ಗೆ ವೈದ್ಯಾಧಿಕಾರಿಗಳಿಂದ ಪ್ರಮಾಣ ಪತ್ರ ಹಾಗೂ ಅಭ್ಯರ್ಥಿಯ ಪಾಲಕ, ಪೋಷಕರ ಅಪಾಯ ಒಪ್ಪಿಗೆ ಪತ್ರವನ್ನು ಪಡೆದು ಅವಕಾಶ ನೀಡಲು ತಿಳಿಸಿದರು.

ಪ್ರತಿ ಪರೀಕ್ಷಾ ಕೇಂದ್ರಕ್ಕೆ ಓರ್ವ ಮುಖ್ಯ ಅಧೀಕ್ಷಕ, ಸ್ಥಾನಿಕ ಜಾಗೃತ ದಳ ಅಧಿಕಾರಿಗಳನ್ನು ನೇಮಿಸಬೇಕು. ಅಲ್ಲದೇ 5 ಜನ ವೀಕ್ಷಕರನ್ನು ಸಹ ನೇಮಿಸಲಾಗುವುದು. ನೇಮಕಗೊಂಡ ಮಾರ್ಗಾಧಿಕಾರಿಗಳು ಸಮಯಕ್ಕೆ ಸರಿಯಾಗಿ ಪ್ರಶ್ನೆ ಪತ್ರಿಕೆಗಳನ್ನು ತಲುಪಿಸುವ ವ್ಯವಸ್ಥೆಯಾಗಬೇಕು. ಪರೀಕ್ಷೆಗೆ ಹಾಜರಾಗುವ ಪರೀಕ್ಷಾರ್ಥಿಗಳು  ಕುಡಿಯುವ ನೀರಿನ ಬಾಟಲ್  ತರಲು ತಿಳಿಸಬೇಕು ಎಂದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಡಿಡಿಪಿಐ ಎಸ್.ಎಸ್.ಬಿರಾದಾರ, ಪರೀಕ್ಷಾ ನೋಡಲ್ ಅಧಿಕಾರಿ ಎ.ಕೆ.ಬಸಣ್ಣವರ ಸೇರಿದಂತೆ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಉಪಸ್ಥಿತರಿದ್ದರು.
Published by: Latha CG
First published: October 1, 2020, 9:26 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading