ಸದ್ಯ ಕೆಲವೆಡೆ ಕೊರೋನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಕರ್ನಾಟಕ-ತಮಿಳುನಾಡು ರಾಜ್ಯಗಳಲ್ಲಿಯೂ ಕೊರೋನಾ ಪ್ರಕರಣಗಳು ಕುಸಿಯುತ್ತಿವೆ. ಹೀಗಾಗಿ ಕರ್ನಾಟಕ ಸರ್ಕಾರ ತಮಿಳುನಾಡಿಗೆ ಬಸ್ ಸಂಚಾರ ಪ್ರಾರಂಭಿಸಲು ನಿರ್ಧರಿಸಿದೆ. ಇಂದಿನಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ-ಕೆಎಸ್ಆರ್ಟಿಸಿ ಬಸ್ಗಳು ತಮಿಳುನಾಡಿಗೆ ಸಂಚರಿಸಲಿವೆ. ಸುಮಾರು 250 ಬಸ್ಗಳು ನೆರೆಯ ರಾಜ್ಯ ತಮಿಳುನಾಡಿನ ವಿವಿಧ ಸ್ಥಳಗಳಿಗೆ ಸಂಚರಿಸಲಿವೆ.
ಕೋವಿಡ್ ನಿರ್ಬಂಧಗಳಿಂದಾಗಿ ಇದೇ ವರ್ಷ ಏಪ್ರಿಲ್ 27ರಿಂದ ಕರ್ನಾಟಕದಿಂದ ತಮಿಳುನಾಡಿಗೆ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಇತ್ತೀಚೆಗೆ ಕರ್ನಾಟಕದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡಿದ್ದರಿಂದ, ಲಾಕ್ಡೌನ್ ಸಡಿಲಿಕೆ ಮಾಡಲಾಗಿದೆ. ಹೀಗಾಗಿ ಅಂತರರಾಜ್ಯ ಬಸ್ ಸೇವೆಯನ್ನು ಪುನಃ ಪ್ರಾರಂಭಿಸಲಾಗಿದೆ. ಕೋವಿಡ್ ಮಾರ್ಗಸೂಚಿ ಅನ್ವಯ ಜೂನ್ 22ರಿಂದ ಶೇ.50ರಷ್ಟು ಸೀಟಿಂಗ್ ಸಾಮರ್ಥ್ಯದೊಂದಿಗೆ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಕೆಎಸ್ಆರ್ಟಿಸಿ ಬಸ್ ಸಂಚಾರವನ್ನು ಪ್ರಾರಂಭಿಸಲಾಗಿದೆ.
ಇದನ್ನೂ ಓದಿ:Afghanistan Crisis: ಇಂದು ಅಫ್ಘಾನಿಸ್ತಾನದಿಂದ ಭಾರತಕ್ಕೆ ಬಂದಿಳಿದ 145 ಮಂದಿ; ಈವರೆಗೆ 537 ಜನರ ಆಗಮನ
ಇಷ್ಟೇ ಅಲ್ಲದೇ ನೆರೆಯ ಕೇರಳ ರಾಜ್ಯಕ್ಕೂ ಕೆಎಸ್ಆರ್ಟಿಸಿ ಬಸ್ ಸೇವೆ ಆರಂಭವಾಗಿದೆ. ಕೇರಳದಲ್ಲಿ ಹೆಚ್ಚಿನ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದವು. ಹೀಗಾಗಿ ಕೆಲವು ಮಿತಿಗಳೊಂದಿಗೆ ಕೇರಳಕ್ಕೆ ಅಂತರರಾಜ್ಯ ಬಸ್ ಸಂಚಾರ ಪ್ರಾರಂಭಿಸಲಾಗಿದೆ. ಕೋಜಿಕೊಡೆ-ಕಾಸರಗೋಡು ಮಾರ್ಗವಾಗಿ ಪ್ರಯಾಣಿಕರ ಸಂಖ್ಯೆಗನುಗುಣವಾಗಿ ಬಸ್ಗಳು ಸಂಚರಿಸುತ್ತಿವೆ. ಕೋವಿಡ್ ಮಾರ್ಗಸೂಚಿ ಹಾಗೂ ಸುರಕ್ಷತಾ ಕ್ರಮಗಳೊಂದಿಗೆ ಕೆಎಸ್ಆರ್ಟಿಸಿ ಬಸ್ಗಳನ್ನು ಬಿಡಲಾಗಿದೆ.
ಕೇರಳ ಸೇರಿದಂತೆ ವಿವಿಧ ರಾಜ್ಯಗಳಿಗೆ ಜೂನ್ 21ರಿಂದ ಸುಮಾರು 3 ಸಾವಿರ ಕೆಎಸ್ಆರ್ಟಿಸಿ ಬಸ್ಗಳು ಕಾರ್ಯಾಚರಣೆ ಪ್ರಾರಂಭಿಸಿವೆ.
ರಾಜ್ಯದಲ್ಲಿ ಇತ್ತೀಚೆಗೆ ದಿನೇ ದಿನೇ ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಕೆ ಕಾಣುತ್ತಿದೆ. ಹೀಗಾಗಿ ಲಾಕ್ಡೌನ್ ನಿಯಮಗಳನ್ನು ಸಡಿಲಗೊಳಿಸಲಾಗಿದೆ. ಕೊರೋನಾ 3ನೇ ಅಲೆ ಆತಂಕದ ನಡುವೆಯೇ ಇಂದಿನಿಂದ ಕರ್ನಾಟಕದಲ್ಲಿ 9,10,11 ಮತ್ತು 12ನೇ ತರಗತಿಗಳು ಆರಂಭವಾಗಿವೆ. ಜೊತೆಗೆ ಅನೇಕ ಚಟುವಟಿಕೆಗಳಿಗೆ ಇದ್ದ ನಿರ್ಬಂಧವನ್ನು ಸಡಿಲಗೊಳಿಸಲಾಗಿದೆ.
ಇದನ್ನೂ ಓದಿ:Morning Digest: ಇಂದಿನಿಂದ ಶಾಲೆಗಳು ಶುರು, ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ಕೂಟದಲ್ಲಿ ಭಾರತಕ್ಕೆ ಬೆಳ್ಳಿ; ಇಂದಿನ ಪ್ರಮುಖ ಸುದ್ದಿಗಳಿವು
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು. ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ