• ಹೋಂ
 • »
 • ನ್ಯೂಸ್
 • »
 • ರಾಜ್ಯ
 • »
 • Transport: ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ ಸಾರಿಗೆ ನೌಕರರು; ಬಸ್ ಸಂಚಾರದಲ್ಲಿ ವ್ಯತ್ಯಯ

Transport: ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ ಸಾರಿಗೆ ನೌಕರರು; ಬಸ್ ಸಂಚಾರದಲ್ಲಿ ವ್ಯತ್ಯಯ

ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ (ಸಾಂದರ್ಭಿಕ ಚಿತ್ರ)

ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ (ಸಾಂದರ್ಭಿಕ ಚಿತ್ರ)

2021ರಲ್ಲಿ ಪ್ರತಿಭಟನೆ ನಡೆಸಿದಾಗ ಅಂದಿನ ಸಾರಿಗೆ ಸಚಿವರು ಲಿಖಿತ ಭರವಸೆಯನ್ನು ನೀಡಿದ್ದರು. ಆದರೆ ಆ ಎಲ್ಲಾ ಭರವಸೆಗಳು ಕೇವಲ ಕಾಗದದಲ್ಲಿಯೇ ಉಳಿದುಕೊಂಡಿವೆ. ಇದರಿಂದ ನೌಕರರು ಆರ್ಥಿಕವಾಗಿ ಸಂಕಷ್ಟದಲ್ಲಿ ಸಿಲುಕುತ್ತಿದ್ದಾರೆ ಎಂದು ಸರ್ಕಾರ ವಿರುದ್ಧ ಚಂದ್ರಶೇಖರ್ ಆಕ್ರೋಶ ಹೊರಹಾಕಿದರು.

ಮುಂದೆ ಓದಿ ...
 • News18 Kannada
 • 2-MIN READ
 • Last Updated :
 • Karnataka, India
 • Share this:

ಬೆಂಗಳೂರು: ಸರ್ಕಾರಿ ನೌಕರರ (Govt Employees) ಬಳಿಕ ಸಾರಿಗೆ ಸಿಬ್ಬಂದಿ (Transport Employees) ಅನಿರ್ದಿಷ್ಟಾವಧಿ ಮುಷ್ಕರಕ್ಕೆ (Strike) ಕರೆ ಕೊಟ್ಟಿದ್ದಾರೆ. ಮಾರ್ಚ್ 24ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ನಿರ್ಧರಿಸಿದ್ದಾರೆ. ಸಾರಿಗೆ ನೌಕರರ ಪ್ರತಿಭಟನೆ ಹಿನ್ನೆಲೆ ಮಾರ್ಚ್ 24ರಿಂದ ಸಾರಿಗೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಪ್ರತಿಭಟನೆಯಲ್ಲಿ ಬಿಎಂಟಿಸಿ (BMTC), ಕೆಎಸ್​ಆರ್​ಟಿಸಿ (KSRTC), ಎನ್​ಡಬ್ಲ್ಯೂಕೆಆರ್​ಟಿಸಿ (NWKRTC) ಮತ್ತು ಕೆಕೆಆರ್​ಟಿಸಿ (KKRTC) ಸಿಬ್ಬಂದಿ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ವೇತನ ಹೆಚ್ಚಳದ ಕುರಿತು ಸರ್ಕಾರ ಸಕಾರಾತ್ಮವಾಗಿ ಸ್ಪಂದಿಸದ ಹಿನ್ನೆಲೆ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಸಾರಿಗೆ ಸಂಸ್ಥೆ ಸಿಬ್ಬಂದಿ ಹೇಳಿದ್ದಾರೆ.


ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸಾರಿಗೆ ನೌಕರರ ಒಕ್ಕೂಟದ ಅಧ್ಯಕ್ಷ ಆರ್.ಚಂದ್ರಶೇಖರ್, ಕಳೆದ ಕೆಲವು ದಿನಗಳಿಂದ ಸರ್ಕಾರ ಗಮನ ಸೆಳೆಯಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗಿದೆ. 2016ರಿಂದ ನಮ್ಮ ನೌಕರರ ಸಂಬಳ ಏರಿಕೆಯಾಗಿಲ್ಲ ಎಂದು ಅಸಮಾಧಾನ ಹೊರ ಹಾಕಿದರು.


ಲಿಖಿತ ಭರವಸೆಗಳು ಕಾಗದಲ್ಲಿಯೇ ಉಳಿದಿವೆ


2021ರಲ್ಲಿ ಪ್ರತಿಭಟನೆ ನಡೆಸಿದಾಗ ಅಂದಿನ ಸಾರಿಗೆ ಸಚಿವರು ಲಿಖಿತ ಭರವಸೆಯನ್ನು ನೀಡಿದ್ದರು. ಆದರೆ ಆ ಎಲ್ಲಾ ಭರವಸೆಗಳು ಕೇವಲ ಕಾಗದದಲ್ಲಿಯೇ ಉಳಿದುಕೊಂಡಿವೆ. ಇದರಿಂದ ನೌಕರರು ಆರ್ಥಿಕವಾಗಿ ಸಂಕಷ್ಟದಲ್ಲಿ ಸಿಲುಕುತ್ತಿದ್ದಾರೆ ಎಂದು ಸರ್ಕಾರ ವಿರುದ್ಧ ಚಂದ್ರಶೇಖರ್ ಆಕ್ರೋಶ ಹೊರಹಾಕಿದರು.


Karnataka transport employees call for strike form march 24 2023 mrq
ಸಾಂದರ್ಭಿಕ ಚಿತ್ರ


ಪ್ರಯಾಣಿಕರಿಗೆ ತೊಂದೆಯನ್ನುಂಟು ಮಾಡಬಾರದು ಎಂಬ ಉದ್ದೇಶದಿಂದ ಇಷ್ಟು ದಿನ ಮುಷ್ಕರಕ್ಕೆ ಕರೆ ನೀಡಿರಲಿಲ್ಲ. ಈಗ ಅನಿವಾರ್ಯವಾಗಿ ಪ್ರತಿಭಟನೆ ಮಾಡಬೇಕಿದೆ ಎಂದು ಹೇಳಿದರು.


ಮಾರ್ಚ್​ 1 ರಂದು ಕೆಎಸ್​​ಆರ್​ಟಿಸಿ ಎಂಡಿ ಅನ್ಬುಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಮುಷ್ಕರ ನಡೆಸುತ್ತೇವೆ ಎಂದು ಹೇಳಿದ್ದೇವೆ. ಆದ್ರೆ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಸೋಮವಾರ ಕಾರ್ಮಿಕ ಆಯುಕ್ತರಿಗೆ 14 ದಿನಗಳ ಪ್ರತಿಭಟನೆಯ ನೋಟಿಸ್ ನೀಡುತ್ತವೆ ಎಂದು ಚಂದ್ರಶೇಖರ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು.


ಮಾರ್ಚ್ 24ರಿಂದ ಕೆಲಸಕ್ಕೆ ಹಾಜರಾಗಲ್ಲ


ಮಾರ್ಚ್ 24ರಿಂದ ನಾವ್ಯಾರು ಸೇವೆಗೆ ಹಾಜರಾಗಲ್ಲ. ಕೂಡಲೇ ನಮ್ಮ ವೇತನ ಹೆಚ್ಚಳ ಮಾಡಬೇಕು. 2021ರಲ್ಲಿ ವಜಾಗೊಂಡಿರುವ ನೌಕರರನ್ನು ಮರು ನೇಮಿಸಿಕೊಳ್ಳಬೇಕು. ಇದರ ಜೊತೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದವರ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿತ್ತು. ಈ ಎಲ್ಲಾ ಎಫ್​ಐಆರ್​​ಗಳನ್ನು ಹಿಂಪಡೆದುಕೊಳ್ಳಬೇಕು ಎಂದು ಚಂದ್ರಶೇಖರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.


Karnataka transport employees call for strike form march 24 2023 mrq
ಸಾಂದರ್ಭಿಕ ಚಿತ್ರ


ಇದನ್ನೂ ಓದಿ:  Traffic Fine: 50 ಪರ್ಸೆಂಟ್ ಆಫರ್ ಪಡೆದು 33 ಲಕ್ಷ ದಂಡ ಪಾವತಿಸಿದ ಬಿಎಂಟಿಸಿ; 12 ಸಾವಿರ ಸಿಗ್ನಲ್ ಜಂಪ್


ಬೆಂಗಳೂರು: ಪಬ್​ನಲ್ಲಿ ಲೇಟ್​ನೈಟ್ ಪಾರ್ಟಿ


ಪಬ್​ನಲ್ಲಿ ತಡರಾತ್ರಿವರೆಗೆ ಪಾರ್ಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಕಾರ್ಮಿಕರ ಪರಿಷತ್ ಎಂಬ ಸಂಘಟನೆ ಕಾರ್ಯಕರ್ತರು ಡೋಲು ಬಡಿದುಕೊಂಡು ಪಬ್​ಗೆ ನುಗ್ಗಲು ಯತ್ನಿಸಿದ್ದಾರೆ. ಬ್ರಿಗೇಡ್ ರಸ್ತೆಯಲ್ಲಿರುವ ಪಬ್ ಮೇಲೆ ದಾಳಿಗೆ ಯತ್ನಿಸಿದ ಕಾರ್ಯಕರ್ತರು ಹಾಗೂ ಪಬ್ ಬೌನ್ಸರ್​ಗಳ ನಡುವೆ ಹೊಡೆದಾಟ ನಡೆದಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಶೋಕ್ ನಗರ ಠಾಣೆ ಪೊಲೀಸರು, ಪರಿಶೀಲನೆ ನಡೆಸುತ್ತಿದ್ದಾರೆ.
ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ


ವಿಜಯಪುರದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ (Nandi Sugar Factory) ಬಾಯ್ಲರ್ ಸ್ಪೋಟವಾಗಿದೆ. ಬಲೇಶ್ವರ ತಾಲೂಕಿನ ಕೃಷ್ಣಾ ನಗರದಲ್ಲಿರೋ ಕಾರ್ಖಾನೆಯಲ್ಲಿ ಸ್ಥಾಪಿಸಿದ್ದ ನೂತನ ಬಾಯ್ಲರ್ ಪ್ರಾಯೋಗಿಕ ಪರೀಕ್ಷೆ ವೇಳೆ ಅವಘಡ ಸಂಭವಿಸಿದೆ.


ಘಟನೆಯಲ್ಲಿ ಬಿಹಾರ ಮೂಲದ ಐವರು ಕಾರ್ಮಿಕರಿಗೆ ಗಂಭೀರ ಗಾಯವಾಗಿದೆ, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.. ಗಾಯಾಳುಗಳಿಗೆ ವಿಜಯಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

Published by:Mahmadrafik K
First published: