• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Transport Strike: ನಾಳೆಯಿಂದ ಸಾರಿಗೆ ನೌಕರರರು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ಸಜ್ಜು

Transport Strike: ನಾಳೆಯಿಂದ ಸಾರಿಗೆ ನೌಕರರರು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ಸಜ್ಜು

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ತಮ್ಮ ಬೇಡಿಕೆಗಳನ್ನ ಈಡೇರಿಸುವಂತೆ ಸಾರಿಗೆ ಸಿಬ್ಬಂದಿ ಅಧ್ಯಕ್ಷ ಜಗದೀಶ್ ಹೆಚ್ ಆರ್ ನೇತೃತ್ವದಲ್ಲಿ ಹೋರಾಟ ನಡೆಸಲು ನಿರ್ಧರಿಸಲಾಗಿದೆ.

  • Share this:

ಬೆಂಗಳೂರು: ಚುನಾವಣೆ (Election) ಸಮಯದಲ್ಲಿ ರಾಜ್ಯ ಸರ್ಕಾರದ (State Government) ವಿರುದ್ಧ ಅನಿರ್ದಿಷ್ಟಾವಧಿ ಧರಣಿ ನಡೆಸಲು ಸಾರಿಗೆ ನೌಕರರು (Transport Employees) ಮುಂದಾಗಿದ್ದಾರೆ. ತಮ್ಮ ಬೇಡಿಕೆಗಳನ್ನ ಈಡೇರಿಸುವಂತೆ ಸಾರಿಗೆ ಸಿಬ್ಬಂದಿ ಅಧ್ಯಕ್ಷ ಜಗದೀಶ್ ಹೆಚ್ ಆರ್ ನೇತೃತ್ವದಲ್ಲಿ ಹೋರಾಟ ನಡೆಸಲು ನಿರ್ಧರಿಸಲಾಗಿದೆ. ಬೆಳಗಾವಿ ಚಳಿಗಾಲದ ಅಧಿವೇಶನದ (Winter Session) ಸಂದರ್ಭದಲ್ಲಿಯೂ ಸಾರಿಗೆ ನೌಕರರು ಪ್ರತಿಭಟನೆ ನಡೆಸಿದ್ದರು. ಇದೀಗ ಮತ್ತೆ ಸಾರಿಗೆ ಇಲಾಖೆ ನಾಲ್ಕು ನಿಗಮಗಳ ನೌಕರರು ಪ್ರತಿಭಟನೆಗೆ ಮುಂದಾಗಿದ್ದಾರೆ. ನಾಳೆ ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಸಾವಿರಾರು ನೌಕರರು ಭಾಗಿಯಾಗುವ ಸಾಧ್ಯತೆಗಳಿವೆ.


ಇನ್ನು ಪ್ರತಿಭಟನೆ ಯಾವ ಪ್ರಮಾಣದಲ್ಲಿರುತ್ತೆ ಎಂಬುದರ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಬೇಕಿದೆ. ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಗಳು ಕ್ಷೀಣವಾಗಿವೆ.


ಸಾರಿಗೆ ನೌಕರರ ಬೇಡಿಕೆಗಳೇನು?


*ದಿನಾಂಕ 01-01-2020ರಿಂದ ಸಾರಿಗೆ ನೌಕರರಿಗೆ ವೇತನ ಹೆಚ್ಚಳ ಬಾಕಿ ಇದ್ದು, ಕೂಡಲೇ ವೇತನ ಹೆಚ್ಚಳ ಮಾಡುವುದು.


*ಮುಷ್ಕರದ ಸಮಯದಲ್ಲಿ ವಜಾಗೊಂಡಿರುವ ನಾಲ್ಕು ನಿಗಮಗಳ ನೌಕರರನ್ನು ಯಾವುದೇ ಷರತ್ತುಗಳಿಲ್ಲದೇ ಮರು ನೇಮಕಾತಿ ಮಾಡಿಕೊಳ್ಳುವುದು.


*ಮುಷ್ಕರದ ಸಮಯದಲ್ಲಿ ಸಾರಿಗೆ ನೌಕರರು ಮತ್ತು ಅವರ ಕುಟುಂಬಸ್ಥರ ಮೇಲೆ ದಾಖಲಾಗಿರುವ ಎಲ್ಲಾ ಪೊಲೀಸ್ ಪ್ರಕರಣಗಳನ್ನು ಹಿಂಪಡೆದುಕೊಳ್ಳುವುದು.


*ಸಾರಿಗೆ ಸಂಸ್ಥೆಯಲ್ಲಿ ನಿವೃತ್ತಿಗೊಂಡಿರುವ ನೌಕರರಿಗೆ ನೀಡಬೇಕಾಗಿರುವ ಬಾಕಿ ಹಣವನ್ನು ಕೂಡಲೇ ನೀಡುವುದು ಮತ್ತು ಅವರಿಗೆ ಸರಿಯಾದ ರೀತಿ ಪಿಂಚಣಿ ಸೌಲಭ್ಯವನ್ನು ಒದಗಿಸುವುದು.


Karnataka Transport employees call off strike tomorrow mrq
ಸಾಂದರ್ಭಿಕ ಚಿತ್ರ


*ಸಾರಿಗೆ ಸಂಸ್ಥೆಯ ನೌಕರರಿಗೆ ನಗದುರಹಿತ ಉತ್ತಮವಾದ ಆರೋಗ್ಯ ಯೋಜನೆಗಳನ್ನು ಒದಗಿಸುವುದು.


ಸಾರಿಗೆ ನೌಕರರ ಸುದೀರ್ಘ ಹೋರಾಟ


ಕಳೆದ ಬಾರಿ ಸಾರಿಗೆ ನೌಕರರು ಸುದೀರ್ಘ ಹೋರಾಟ ನಡೆಸಿದ್ದ ಕಾರಣ ಸರ್ಕಾರಿ ಸಾರಿಗೆಯನ್ನೇ ಅವಲಂಬಿಸಿದ್ದ ಸಾರ್ವಜನಿಕರು ತೀವ್ರ ತೊಂದರೆಗೆ ಸಿಲುಕಿದ್ದರು. ಆದರೆ ಈ ಬಾರಿ ಪ್ರತಿಭಟನೆ ಒಂದು ಅಥವಾ ಎರಡು ದಿನಕ್ಕೆ ಸೀಮಿತವಾಗುತ್ತಾ ಅಥವಾ ಕಳೆದ ಬಾರಿಯಂತೆ ವಾರಗಟ್ಟಲೇ ಬಸ್ ಸಂಚಾರ (Bus Bandh) ಆಗುತ್ತಾ ಎಂಬುವುದು ತಿಳಿದು ಬಂದಿಲ್ಲ.
ಈ ಹಿಂದೆಯೂ ಸುದೀರ್ಘ ಕಾಲ ಮುಷ್ಕರ ನಡೆಸಿದ್ದ ಸಾರಿಗೆ ನೌಕರರು


ಸಾರಿಗೆ ನೌಕರರು ಈ ಹಿಂದೆಯೂ ಎರಡು ಬಾರಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡಿದ್ದರು. ಆದರೆ ದೀರ್ಘ ಕಾಲ ಮುಷ್ಕರ ನಡೆಸಿದರೂ ಕೂಡ ರಾಜ್ಯ ಸರ್ಕಾರ ಭರವಸೆಗಳನ್ನು ಮಾತ್ರ ನೀಡಿ ಸುಮ್ಮನಾಗಿದೆ. ಆದರೆ ಈವರೆಗೂ ನಮ್ಮ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ಸಾರಿಗೆ ನೌಕರರ ಸಂಘದ ಮುಖಂಡರು ಅಸಮಾಧಾನ ಹೊರಹಾಕಿದ್ದಾರೆ.


ಕಳೆದ ಬಾರಿ ಅಂದರೇ, 2020ರ ಡಿಸೆಂಬರ್ 11 ರಿಂದ 14 ರವರೆಗೂ ಬರೋಬ್ಬರಿ ನಾಲ್ಕು ದಿನಗಳ ಕಾಲ ಮುಷ್ಕರ ನಡೆಸಿದ್ದರು. ಆ ಬಳಿಕ 2021ರ ಏಪ್ರಿಲ್​ 7 ರಿಂದ 21ರ ವರೆಗೂ ಅಂದರೇ ಸುದೀರ್ಘ 15 ದಿನಗಳ ಕಾಲ ಪ್ರತಿಭಟನೆ ನಡೆಸಿದ್ದರು.


ಇದನ್ನೂ ಓದಿ:  Hubballi Eidgah Ground: ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಿಸಿದ ನಾಯಕನ ತಲೆದಂಡ


ಸರ್ಕಾರದ ಬೊಕ್ಕಸಕ್ಕೆ ಕೋಟಿ ಕೋಟಿ ಹಣ


ಟ್ರಾಫಿಕ್​ ನಿಯಮಗಳ ಉಲ್ಲಂಘನೆ (Traffic Rules Violation) ಪ್ರಕರಣಗಳ ಬಾಕಿ ದಂಡ ಮೊತ್ತ ಪಾವತಿಸಲು ರಾಜ್ಯ ಸರ್ಕಾರ ಶೇಕಡಾ 50 ರಷ್ಟು ರಿಯಾಯಿತಿ ನೀಡಿರುವ ಹಿನ್ನೆಲೆಯಲ್ಲಿ ಬೊಕ್ಕಸಕ್ಕೆ ಕೋಟಿ ಕೋಟಿ ರೂಪಾಯಿ ಹರಿದು ಬರುತ್ತಿದೆ.


ಡಿಸ್ಕೌಂಟ್​ ನೀಡಿದ ಮೊದಲ ದಿನ ನಿನ್ನೆ ಬರೋಬ್ಬರಿ 5 ಕೋಟಿ ರೂಪಾಯಿ ಸಂಗ್ರಹವಾಗಿತ್ತು. ಶನಿವಾರ ಈ ದಾಖಲೆ ಪುಡಿಯಾಗಿದ್ದು, ಬರೋಬ್ಬರಿ 6 ಕೋಟಿ ರೂಪಾಯಿ ದಂಡ ಸಂಗ್ರಹವಾಗಿದೆ.

Published by:Mahmadrafik K
First published: