ಮಂಗಳೂರು(ಮಾ.09): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವೂ ರಾಜ್ಯ ಪತ್ರಕರ್ತರ ಸಮ್ಮೇಳನ ಆಯೋಜಿಸಿತ್ತು. ಎರಡು ದಿನಗಳ ಕಾಲ ಮಂಗಳೂರಿನಲ್ಲಿ ಆಯೋಜಿಸಲಾಗಿದ್ದ ಈ ಸಮ್ಮೇಳನದ ಸಮಾರೋಪದಲ್ಲಿ ಟೆಲಿಫೋನ್ ಕದ್ದಾಲಿಕೆ ಹಗರಣ ರಾಜಕೀಯ ವಿಸ್ತ್ರತ ತನಿಖಾ ವರದಿಗೆ ನ್ಯೂಸ್ 18 ಕನ್ನಡದ ರಾಜಕೀಯ ವಿಭಾಗದ ಮುಖ್ಯಸ್ಥ ಚಿದಾನಂದ ಪಟೇಲ್ ಅವರಿಗೆ ಅತ್ಯುತ್ತಮ ತನಿಖಾ ವರದಿ ವಿಭಾಗದಲ್ಲಿ ಪ್ರಶಸ್ತಿ ಲಭಿಸಿತು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ವೃತ್ತಿ/ ಸೇವೆ ಸಾಧನೆಗಾಗಿ ಮತ್ತು ಅತ್ಯುತ್ತಮ ವರದಿಗಳಿಗಾಗಿ ಪತ್ರಕರ್ತರಿಗೆ ನೀಡುವ 2018ನೇ ಸಾಲಿನ ವಾರ್ಷಿಕ ಪ್ರಶಸ್ತಿ ಇದಾಗಿದೆ. ಅತ್ಯುತ್ತಮ ತನಿಖಾ ವರದಿ ವಿಭಾಗದಲ್ಲಿ (ಟೆಲಿಫೋನ್ ಕದ್ದಾಲಿಕೆ ಪ್ರಕರಣ) ನ್ಯೂಸ್ 18 ಕನ್ನಡಕ್ಕೆ ಪ್ರಶಸ್ತಿ ಸಂದಿರುವುದು ಹೆಮ್ಮೆಯ ವಿಚಾರವಾಗಿದೆ.
ಕಳೆದ ಒಂದು ದಶಕದಿಂದ ಮಾಧ್ಯಮ ಕ್ಷೇತ್ರದಲ್ಲಿ ಚಿದಾನಂದ ಪಟೇಲ್ ಅವರು ಸೇವೆ ಸಲ್ಲಿಸುತ್ತಿದ್ದಾರೆ. ಇದನ್ನು ಕರ್ನಾಟಕ ಪತ್ರಕರ್ತರ ಸಂಘ ಈ ಪ್ರಶಸ್ತಿ ನೀಡಿದೆ. ಖುದ್ದು ಡಿಸಿಎಂ ಗೋವಿಂದ ಕಾರಜೋಳ ಅವರೇ ಪ್ರಶಸ್ತಿ ಪ್ರಧಾನ ಮಾಡಿದ್ದಾರೆ.
ಇದನ್ನೂ ಓದಿ: ನ್ಯೂಸ್ 18 ಕನ್ನಡಕ್ಕೆ ಮತ್ತೊಂದು ಗರಿ; ಅತ್ಯುತ್ತಮ ತನಿಖಾ ವರದಿಗೆ ಕಾರ್ಯನಿರತ ಪತ್ರಕರ್ತ ಸಂಘದ ವಾರ್ಷಿಕ ಪ್ರಶಸ್ತಿ
ಇನ್ನು, ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಕಾರ್ಯಕ್ರಮ ನಡೆದಿದೆ. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ರಾಜಕೀಯ ಗಣ್ಯರು ಉಪಸ್ಥಿತರಿದ್ದರು.
ಡಿಸಿಎಂ ಗೋವಿಂದ ಕಾರಜೋಳರಿಂದ ಪ್ರಶಸ್ತಿ ಪಡೆದ ಮಾತಾಡಿದ ಚಿದಾನಂದ ಪಟೇಲ್, ಪ್ರಶಸ್ತಿ ಸಿಗಲು ಕಾರಣವಾದ ಸಂಸ್ಥೆ ಹಾಗೂ ಸಹೋದ್ಯೋಗಿಗಳಿಗೆ ಕೃತಜ್ಞತೆ ಸಲ್ಲಿಸಿದರು. ಹಾಗೆಯೇ ಮುಂದಿನ ದಿನಗಳಲ್ಲಿ ಇನ್ನಷ್ಟು ಮಾಧ್ಯಮ ಕ್ಷೇತ್ರಕ್ಕೆ ಕೊಡುಗೆ ನೀಡುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ