HOME » NEWS » State » KARNATAKA VIDHAN PARISHAD ELECTION ANNOUNCED JDS WILL FINALISE COUNCIL CANDIDATE TODAY SCT

ಇಂದು ಜೆಡಿಎಸ್​ ಶಾಸಕಾಂಗ ಪಕ್ಷದ ಸಭೆ; ವಿಧಾನ ಪರಿಷತ್​ ಅಭ್ಯರ್ಥಿ ಹೆಸರು ಇಂದೇ ಅಂತಿಮ

ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಂಬಂಧ ಜೆಡಿಎಸ್​ ನಾಯಕರು ಇಂದು ಮಹತ್ವದ ಶಾಸಕಾಂಗ ಪಕ್ಷದ ಸಭೆ ನಡೆಸಲಿದ್ದಾರೆ. ಇಂದು ಮಧ್ಯಾಹ್ನ 12.30ಕ್ಕೆ ಪಕ್ಷದ ಪ್ರಧಾನ ಕಛೇರಿ ಜೆ.ಪಿ. ಭವನದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.

news18-kannada
Updated:June 15, 2020, 8:17 AM IST
ಇಂದು ಜೆಡಿಎಸ್​ ಶಾಸಕಾಂಗ ಪಕ್ಷದ ಸಭೆ; ವಿಧಾನ ಪರಿಷತ್​ ಅಭ್ಯರ್ಥಿ ಹೆಸರು ಇಂದೇ ಅಂತಿಮ
ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ
  • Share this:
ಬೆಂಗಳೂರು (ಜೂ. 15): ರಾಜ್ಯದ ರಾಜ್ಯಸಭಾ ಚುನಾವಣೆಯ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದೀಗ ಕರ್ನಾಟಕದಲ್ಲಿ ವಿಧಾನ ಪರಿಷತ್ ಚುನಾವಣೆಯ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಎಲ್ಲ ಪಕ್ಷಗಳ ನಾಯಕರೂ ತಮ್ಮ ಅಭ್ಯರ್ಥಿಯ ಆಯ್ಕೆ ಪ್ರಕ್ರಿಯೆಯಲ್ಲಿ ತೊಡಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಜೆಡಿಎಸ್​ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಇಂದು ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್​ ಅಭ್ಯರ್ಥಿಯ ಹೆಸರು ಅಂತಿಮವಾಗಲಿದೆ.

ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಂಬಂಧ ಜೆಡಿಎಸ್​ ನಾಯಕರು ಇಂದು ಮಹತ್ವದ ಶಾಸಕಾಂಗ ಪಕ್ಷದ ಸಭೆ ನಡೆಸಲಿದ್ದಾರೆ. ಪಕ್ಷದ ಪ್ರಧಾನ ಕಛೇರಿ ಜೆ.ಪಿ. ಭವನದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಇಂದು ಮಧ್ಯಾಹ್ನ 12.30ಕ್ಕೆ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ಕುಪೇಂದ್ರ ರೆಡ್ಡಿ, ಟಿ.ಎ. ಶರವಣ, ಕೋನರೆಡ್ಡಿ ನಡುವೆ ಜೆಡಿಎಸ್ ಟಿಕೆಟ್​ಗಾಗಿ ಲಾಬಿ ಶುರುವಾಗಿದೆ.

ಇದನ್ನೂ ಓದಿ: ಕೊರೋನಾ ತಡೆಗೆ ಪ್ರಧಾನಿ ನರೇಂದ್ರ ಮೋದಿ ಕೈಗೊಂಡ ಕ್ರಮಗಳು ನಿರ್ಣಾಯಕ - ಸಿಎಂ ಬಿ.ಎಸ್​​ ಯಡಿಯೂರಪ್ಪ

ಮೂಲಗಳ ಪ್ರಕಾರ, ಕುಪೇಂದ್ರ ರೆಡ್ಡಿಗೆ ಜೆಡಿಎಸ್ ವಿಧಾನ ಪರಿಷತ್ ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚಾಗಿದೆ. ರಾಜ್ಯಸಭಾ ಮಾಜಿ ಸದಸ್ಯ ಕುಪೇಂದ್ರ ರೆಡ್ಡಿಗೆ ಪರಿಷತ್ ಟಿಕೆಟ್ ಸಿಗುವುದು ಖಚಿತ ಎನ್ನುತ್ತಿವೆ ಜೆಡಿಎಸ್ ಮೂಲಗಳು. ಮರು ಆಯ್ಕೆ ಬಯಸಿರುವ ಟಿ. ಎ. ಶರವಣ ಕೂಡ ಕುಪೇಂದ್ರ ರೆಡ್ಡಿಗೆ ಪೈಪೋಟಿ ನೀಡಿ ಲಾಬಿ ನಡೆಸುತ್ತಿದ್ದಾರೆ. ದೇವೇಗೌಡರ ಜೊತೆಗೆ ಉತ್ತಮ ಬಾಂಧವ್ಯ ಹೊಂದಿರುವ ಶರವಣ ದೊಡ್ಡ ಗೌಡರ ಮೂಲಕವೇ ಲಾಬಿ ನಡೆಸುತ್ತಿದ್ದಾರೆ. ಆದರೆ, ದೇವೇಗೌಡರ ಒಲವು ಕುಪೇಂದ್ರ ರೆಡ್ಡಿ ಮೇಲೆ ಹೆಚ್ಚಾಗಿದೆ ಎನ್ನಲಾಗುತ್ತಿದೆ.

ಹೀಗಾಗಿ, ಜೆಡಿಎಸ್​ನಿಂದ ಅಂತಿಮವಾಗಿ ಯಾರಿಗೆ ವಿಧಾನ ಪರಿಷತ್ ಪ್ರವೇಶ ಭಾಗ್ಯ ದೊರಕಲಿದೆ ಎಂಬ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ. ಇಂದು ಜೆಡಿಎಸ್​ ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿ ಹೆಸರು ಅಂತಿಮವಾಗಲಿದೆ. ಇನ್ನೊಂದೆಡೆ ಬಿಜೆಪಿಯ ಪರಿಷತ್ ಚುನಾವಣೆ ಅಭ್ಯರ್ಥಿಯ ಹೆಸರು ಕೂಡ ಇಂದೇ ಅಂತಿಮವಾಗುವ ಸಾಧ್ಯತೆ ಹೆಚ್ಚಾಗಿದೆ.
First published: June 15, 2020, 8:17 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading