ರಾಜ್ಯದಲ್ಲಿ ಬೈ ಎಲೆಕ್ಷನ್ ಬಿಸಿ; ಕುಂದಗೋಳ, ಚಿಂಚೋಳಿ ಕ್ಷೇತ್ರದಲ್ಲಿ ಗೆಲ್ಲುವ ಅಭ್ಯರ್ಥಿಗಳಿಗಾಗಿ ಕೈ ಕಮಲ ನಾಯಕರಿಂದ ತಲಾಶ್​!

ಸಿಎಸ್​ ಶಿವಳ್ಳಿ ಅವರ ಅಕಾಲಿಕ ಮರಣದಿಂದ ತೆರವಾದ ಕುಂದಗೋಳ ಹಾಗೂ ಮಾಜಿ ಶಾಸಕ ಉಮೇಶ್ ಜಾಧವ್ ರಾಜೀನಾಮೆಯಿಂದ ತೆರವಾದ ಚಿಂಚೋಳಿ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕಿದೆ. ಆದರೆ, ಚುನಾವಣೆಗೆ ದಿನಾಂಕ ನಿಗದಿಯಾಗುವ ಮುನ್ನವೇ ಕಾಂಗ್ರೆಸ್ ಹಾಗೂ ಕಮಲ ಪಾಳಯ ಗೆಲ್ಲುವ ಅಭ್ಯರ್ಥಿಗಳ ತಲಾಶ್​ಗೆ ಇಳಿದಿದೆ.

MAshok Kumar | news18
Updated:April 25, 2019, 3:41 PM IST
ರಾಜ್ಯದಲ್ಲಿ ಬೈ ಎಲೆಕ್ಷನ್ ಬಿಸಿ; ಕುಂದಗೋಳ, ಚಿಂಚೋಳಿ ಕ್ಷೇತ್ರದಲ್ಲಿ ಗೆಲ್ಲುವ ಅಭ್ಯರ್ಥಿಗಳಿಗಾಗಿ ಕೈ ಕಮಲ ನಾಯಕರಿಂದ ತಲಾಶ್​!
ಸಾಂದರ್ಭಿಕ ಚಿತ್ರ.
MAshok Kumar | news18
Updated: April 25, 2019, 3:41 PM IST
ಒಂದೆಡೆ ಲೋಕಸಭಾ ಚುನಾವಣೆ ಮುಗಿದು ಇನ್ನೇನು ಎಲ್ಲವೂ ತಣ್ಣಗಾಗಿದೆ ಎಂಬ ವಾತಾವರಣ ನಿರ್ಮಾಣವಾಗುವುದರೊಳಗೆ ರಾಜ್ಯ ರಾಜಕೀಯ ವಠಾರದಲ್ಲಿ ವಿಧಾನಸಭೆ ಉಪ-ಚುನಾವಣೆ ಸದ್ದು ಮಾಡುತ್ತಿದೆ.

ಸಿಎಸ್​ ಶಿವಳ್ಳಿ ಅವರ ಅಕಾಲಿಕ ಮರಣದಿಂದ ತೆರವಾದ ಕುಂದಗೋಳ ಹಾಗೂ ಮಾಜಿ ಶಾಸಕ ಉಮೇಶ್ ಜಾಧವ್ ರಾಜೀನಾಮೆಯಿಂದ ತೆರವಾದ ಚಿಂಚೋಳಿ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕಿದೆ. ಆದರೆ, ಚುನಾವಣೆಗೆ ದಿನಾಂಕ ನಿಗದಿಯಾದ ಬೆನ್ನಿಗೆ ಕಾಂಗ್ರೆಸ್ ಹಾಗೂ ಕಮಲ ಪಾಳಯ ಗೆಲ್ಲುವ ಅಭ್ಯರ್ಥಿಗಳ ತಲಾಶ್​ಗೆ ಇಳಿದಿದೆ.

ಇದನ್ನೂ ಓದಿ : ಮಗ ನಿಖಿಲ್ ಗೆಲುವಿನ ಹರಕೆಗೆ 'ಕುರಿಬಲಿ' ಕೊಡಲು ಮುಂದಾದ ದೊಡ್ಡ ಗೌಡರ ಮತ್ತೋರ್ವ ಸೊಸೆ ಸೌಮ್ಯ ರಮೇಶ್!

ಕುಂದಗೋಳ ಹಾಗೂ ಚಿಂಚೋಳಿ ಕ್ಷೇತ್ರಗಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಸೂಕ್ತ ಅಭ್ಯರ್ಥಿಗಳ ಆಯ್ಕೆಗೆ ಮುಂದಾಗಿರುವ ಕೆಪಿಸಿಸಿ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಇಂದು ಪ್ರಮುಖ ನಾಯಕರ ಸಭೆ ಕರೆದಿದ್ದಾರೆ. ಕೆಪಿಸಿಸಿ ಕಚೇರಿಯಲ್ಲೇ ನಡೆಯಲಿರುವ ಸಭೆಯಲ್ಲಿ ಪ್ರಮುಖ ನಾಯಕರು ಭಾಗಿಯಾಗಲಿದ್ದು, ಸೂಕ್ತ ಅಭ್ಯರ್ಥಿಯನ್ನು ಇಂದೇ ಆಯ್ಕೆ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಬಿಜೆಪಿಯಲ್ಲೂ ಟಿಕೆಟ್​ಗೆ ಲಾಭಿ :  ಈ ಎರಡೂ ಕ್ಷೇತ್ರಗಳ ಉಪಚುನಾವಣೆಗಾಗಿ ಸೂಕ್ತ ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿಯಲ್ಲೂ ತಲಾಶ್ ನಡೆಯುತ್ತಿದೆ. ಅದಕ್ಕಾಗಿ ಕೋರ್ ಕಮಿಟಿ ಸಭೆಗೂ ವ್ಯವಸ್ಥೆ ಮಾಡಲಾಗಿದೆ. ಆದರೆ, ಕೋರ್ ಕಮಿಟಿ ಸಭೆಗಿಂತ ಮೊದಲೇ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರ ಜೊತೆ ಮಾತನಾಡಿರುವ ಉತ್ತರದ ನಾಯಕರಾದ ಮಾಲಿಕಯ್ಯ ಗುತ್ತೇದಾರ್ ಹಾಗೂ ಸುಭಾಷ್ ಗುತ್ತೇದಾರ್ ಚಿಂಚೋಳಿ ಕ್ಷೇತ್ರದಲ್ಲಿ ಲಂಬಾಣಿ ಸಮುದಾಯ ಹೆಚ್ಚಿದ್ದು, ಆ ಸಮುದಾಯದವರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಸಚಿವ ಡಿಕೆಶಿಗೆ ಮತ್ತೆ ಐಟಿ ಬಿಸಿ: ತಾಯಿ ಹೆಸರಲ್ಲಿ ಹೊಂದಿದ್ದ 20 ಎಕರೆ ಆಸ್ತಿ ಪತ್ತೆ; ತಾತ್ಕಾಲಿಕ ಮುಟ್ಟುಗೋಲು ಆದೇಶ
Loading...

ಅಲ್ಲದೆ ಚಿಂಚೋಳಿ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಘೋಷಿಸುವುದಕ್ಕೆ ಮುನ್ನ ಉಮೇಶ್ ಜಾಧವ್ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ ಎಂದೂ ಸೂಚಿಸಿದ್ದಾರೆ. ಉಮೇಶ್ ಜಾಧವ್ ಅವರ ಸಹೋದರ ರಾಮಚಂದ್ರ ಜಾಧವ್ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದು, ಮಾಲಿಕಯ್ಯ ಗುತ್ತೇದಾರ್ ಹಾಗೂ ಸುಭಾಷ್ ಗುತ್ತೇದಾರ್ ಅವರ ಒಲವು ಇವರ ಪರವೇ ಇದೆ ಎನ್ನಲಾಗುತ್ತಿದೆ. ಆದರೆ, ಬಿಜೆಪಿಯಲ್ಲಿ ಟಿಕೆಟ್​ ಆಕಾಂಕ್ಷಿಗಳ ಪಟ್ಟಿಯೂ ದೊಡ್ಡದಿರುವುದು ರಾಜ್ಯ ಬಿಜೆಪಿ ನಾಯಕರಿಗೆ ತಲೆ ನೋವಾಗಿ ಪರಿಣಮಿಸಿದೆ.

ಕುಂದಗೋಳ ಹಾಗೂ ಚಿಂಚೋಳಿ ವಿಧಾನಸಭಾ ಕ್ಷೇತ್ರಗಳಿಗೆ ಮೇ 19 ರಂದು ಚುನಾವಣೆ ನಡೆಯಲಿದ್ದು, ಮೇ 23ರಂದು ಲೋಕಸಭಾ ಚುನಾವಣಾ ಫಲಿತಾಂಶದ ಜೊತೆಗೆ ಈ ಕ್ಷೇತ್ರಗಳ ಫಲಿತಾಂಶವನ್ನು ಘೋಷಿಸಲಾಗುವುದು ಎಂದು ಭಾರತೀಯ ಚುನಾವಣಾ ಪ್ರಾಧಿಕಾರ ತಿಳಿಸಿದೆ.

First published:April 25, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...
  • I agree to receive emails from NW18

  • I promise to vote in this year's elections no matter what the odds are.

    Please check above checkbox.

  • SUBMIT

Thank you for
taking the pledge

Vote responsibly as each vote
counts and makes a difference

Click your email to know more

Disclaimer:

Issued in public interest by HDFC Life. HDFC Life Insurance Company Limited (Formerly HDFC Standard Life Insurance Company Limited) (“HDFC Life”). CIN: L65110MH2000PLC128245, IRDAI Reg. No. 101 . The name/letters "HDFC" in the name/logo of the company belongs to Housing Development Finance Corporation Limited ("HDFC Limited") and is used by HDFC Life under an agreement entered into with HDFC Limited. ARN EU/04/19/13618
T&C Apply. ARN EU/04/19/13626