HOME » NEWS » State » KARNATAKA WEATHER BUREVI CYCLONE EFFECT RAIN EXPECTED IN BANGALORE KODAGU KARNATAKA RAIN TODAY SCT

Karnataka Weather: ಬುರೇವಿ ಚಂಡಮಾರುತದ ಎಫೆಕ್ಟ್​; ಕರ್ನಾಟಕದ ಈ ಭಾಗಗಳಲ್ಲಿ ಇಂದಿನಿಂದ 3 ದಿನ ಮಳೆ ಹೆಚ್ಚಳ

Karnataka Rain: ಬುರೇವಿ ಚಂಡಮಾರುತದ ಪರಿಣಾಮದಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ, ದಕ್ಷಿಣ ಕನ್ನಡ, ತುಮಕೂರು, ಮೈಸೂರು, ಶಿವಮೊಗ್ಗ, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ಕೊಡಗು, ರಾಮನಗರ ಜಿಲ್ಲೆಗಳಲ್ಲಿ ಇಂದಿನಿಂದ ಡಿ. 5ವರೆಗೆ ಮಳೆಯಾಗಲಿದೆ.

Sushma Chakre | news18-kannada
Updated:December 3, 2020, 9:00 AM IST
Karnataka Weather: ಬುರೇವಿ ಚಂಡಮಾರುತದ ಎಫೆಕ್ಟ್​; ಕರ್ನಾಟಕದ ಈ ಭಾಗಗಳಲ್ಲಿ ಇಂದಿನಿಂದ 3 ದಿನ ಮಳೆ ಹೆಚ್ಚಳ
ಮಳೆಯ ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು (ಡಿ.3): ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ನಿವಾರ್ ಚಂಡಮಾರುತ ದಕ್ಷಿಣ ಭಾರತವನ್ನು ಅಪ್ಪಳಿಸಿತ್ತು. ಇದೀಗ ಇಂದಿನಿಂದ ಬುರೇವಿ ಚಂಡಮಾರುತದ ಅಬ್ಬರ ಶುರುವಾಗಲಿದೆ. ಇಂದಿನಿಂದ ಕೇರಳಕ್ಕೆ ಬುರೇವಿ ಚಂಡಮಾರುತದ ಆಗಮನವಾಗಲಿದೆ. ಇದರ ಪರಿಣಾಮವಾಗಿ ಕೇರಳದ ನೆರೆಯ ರಾಜ್ಯಗಳಾದ ತಮಿಳುನಾಡು ಕರ್ನಾಟಕದಲ್ಲಿ ಕೂಡ ನಾಲ್ಕೈದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದರ ಬೆನ್ನಲ್ಲೇ ಬೆಂಗಳೂರು ಸೇರಿದಂತೆ ಕರ್ನಾಟಕದ ಅನೇಕ ಭಾಗಗಳಲ್ಲಿ ಇಂದು ಬೆಳಗ್ಗೆಯಿಂದ ಮಳೆ ಶುರುವಾಗಿದೆ. ಇನ್ನು ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದೆ.

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ, ದಕ್ಷಿಣ ಕನ್ನಡ, ತುಮಕೂರು, ಮೈಸೂರು, ಶಿವಮೊಗ್ಗ, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ಕೊಡಗು, ರಾಮನಗರ ಜಿಲ್ಲೆಗಳಲ್ಲಿ ಇಂದಿನಿಂದ ಡಿ. 5ವರೆಗೆ ಮಳೆಯಾಗಲಿದೆ.
ಕೇರಳದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯ ಆರ್ಭಟ ಭಾರೀ ಹೆಚ್ಚಾಗಲಿದೆ. ಹೀಗಾಗಿ, ರೆಡ್ ಅಲರ್ಟ್​ ಘೋಷಿಸಲಾಗಿದೆ. ಬುರೇವಿ ಚಂಡಮಾರುತವು ಇಂದು ಮಧ್ಯಾಹ್ನ 70-80 ಕಿ.ಮೀ. ವೇಗದಲ್ಲಿ ಕೇರಳಕ್ಕೆ ಆಗಮಿಸಲಿದೆ. ನಾಳೆ ತಮಿಳುನಾಡು ಕರಾವಳಿಯನ್ನು ದಾಟಿ ಹೋಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ತಮಿಳುನಾಡಿನ ಕನ್ಯಾಕುಮಾರಿ, ತಿರುನೆಲ್ವೇಲಿ, ತೂತುಕುಡಿ, ರಾಮನಾಥಪುರಂ, ಸಿವಗಂಗೈ ಮತ್ತು ಕೇರಳದ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ ಭಾಗದಲ್ಲಿ ಡಿಸೆಂಬರ್ 5ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.
Youtube Video
ಇದರ ಪರಿಣಾಮ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಮೇಲೂ ಆಗಲಿದೆ. ಡಿಸೆಂಬರ್ 5ರವರೆಗೆ ಬುರೇವಿ ಚಂಡಮಾರುತದಿಂದ ಕಡಲು ಹೆಚ್ಚು ಅಪಾಯಕಾರಿ ಆಗಿರುವುದರಿಂದ ಯಾರೂ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಹಲವೆಡೆ ರೆಡ್ ಅಲರ್ಟ್​ ಘೋಷಿಸಲಾಗಿದೆ.
Published by: Sushma Chakre
First published: December 3, 2020, 8:32 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories