Karnataka Weather: ನಿವಾರ್ ಚಂಡಮಾರುತದ ಎಫೆಕ್ಟ್; ಇನ್ನೆರಡು ದಿನ ಬೆಂಗಳೂರಿನಲ್ಲಿ ಭಾರೀ ಮಳೆ
Karnataka Weather: ಇಂದು ಮತ್ತು ನಾಳೆ ಬೆಂಗಳೂರು, ಕರಾವಳಿ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
news18-kannada Updated:November 25, 2020, 9:06 AM IST

ನಿವಾರ್ ಚಂಡಮಾರುತ
- News18 Kannada
- Last Updated: November 25, 2020, 9:06 AM IST
ಬೆಂಗಳೂರು (ನ. 25): ಬಂಗಾಳ ಕೊಲ್ಲಿಯ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರಿಂದ ತಮಿಳುನಾಡಿನ ಕರಾವಳಿಯಲ್ಲಿ ನಿವಾರ್ ಚಂಡಮಾರುತ ಅಪ್ಪಳಿಸಲಿದೆ. ಇದರ ಪರಿಣಾಮವಾಗಿ ಕರ್ನಾಟಕದ ಬೆಂಗಳೂರು, ಕರಾವಳಿ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಮೋಡ ಮುಸುಕಿದ ವಾತಾವರಣ ಇರಲಿದ್ದು, ಸಂಜೆಯ ಬಳಿಕ ಮಳೆಯಾಗಲಿದೆ. ನಾಳೆ ಭಾರೀ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪುದುಚೆರಿ ಮತ್ತು ತಮಿಳುನಾಡಿನ ಸಮುದ್ರ ತೀರದ ಊರುಗಳಲ್ಲಿ ನಿವಾರ್ ಚಂಡಮಾರುತದಿಂದ ಭೂ ಕುಸಿತವೂ ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿವಾರ್ ಚಂಡಮಾರುತದ ಪರಿಣಾಮದಿಂದ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇಂದು ಮತ್ತು ನಾಳೆ ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಇಂದಿನಿಂದ ಎರಡು ದಿನ ರಾಜ್ಯದ ಎಲ್ಲಾ ಭಾಗದಲ್ಲೂ ಮಳೆಯಾಗುವ ಸಾಧ್ಯತೆಯಿದೆ. ಇಂದಿನಿಂದ ಎರಡು ದಿನ ರಾಜ್ಯದ ಎಲ್ಲಾ ಭಾಗದಲ್ಲೂ ಮಳೆಯಾಗಲಿದ್ದು, ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ, ಚಾಮರಾಜನಗರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಅಹಮದ್ ಪಟೇಲ್ ನಿಧನ; ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ, ಸೋನಿಯಾ ಗಾಂಧಿ ಸೇರಿ ಹಿರಿಯ ನಾಯಕರ ಸಂತಾಪ
ಹೀಗಾಗಿ, ಈ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ಮತ್ತು ನಾಳೆ ಕರ್ನಾಟಕದ ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇಂದು ತಮಿಳುನಾಡಿನ ಕಾರೈಕಾಲ್ ಮತ್ತು ಮಾಮಲ್ಲಪುರಂ ನಡುವೆ ವಾಯುವ್ಯ ದಿಕ್ಕಿನಲ್ಲಿ ಚಲಿಸಲಿದೆ. ಭಾರತದ ಪೂರ್ವ ಕರಾವಳಿಯನ್ನು ತಲುಪುವ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ, ತಮಿಳುನಾಡು ಮತ್ತು ಈಶಾನ್ಯ ಶ್ರೀಲಂಕಾಗಳಲ್ಲೂ ವಾಯುಭಾರ ಕುಸಿತವಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್ನಲ್ಲಿ ಇಂದು ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನೆರಡು ದಿನ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ. ರಾಯಲಸೀಮಾ, ತೆಲಂಗಾಣ, ದಕ್ಷಿಣ ಒಳನಾಡು ಕರ್ನಾಟಕ ಮತ್ತು ಕರಾವಳಿ ಆಂಧ್ರ ಪ್ರದೇಶದಲ್ಲಿ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಗಂಟೆಗೆ 150 ಕಿಮೀ ವೇಗದಲ್ಲಿ ನಿವಾರ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭೀಕರ ನಿವಾರ್ ಚಂಡಮಾರುತದ ಪರಿಣಾಮದಿಂದ ತಮಿಳುನಾಡಿನಲ್ಲಿ ಇಂದು ಸರ್ಕಾರಿ ರಜೆ ಘೋಷಿಸಲಾಗಿದೆ. ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶದಲ್ಲಿ ನಿವಾರ್ ಚಂಡಮಾರುತದ ಪ್ರಭಾವ ಹೆಚ್ಚಾಗಿರಲಿದೆ ಎನ್ನಲಾಗಿದೆ.
ಪುದುಚೆರಿ ಮತ್ತು ತಮಿಳುನಾಡಿನ ಸಮುದ್ರ ತೀರದ ಊರುಗಳಲ್ಲಿ ನಿವಾರ್ ಚಂಡಮಾರುತದಿಂದ ಭೂ ಕುಸಿತವೂ ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿವಾರ್ ಚಂಡಮಾರುತದ ಪರಿಣಾಮದಿಂದ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇಂದು ಮತ್ತು ನಾಳೆ ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಇಂದಿನಿಂದ ಎರಡು ದಿನ ರಾಜ್ಯದ ಎಲ್ಲಾ ಭಾಗದಲ್ಲೂ ಮಳೆಯಾಗುವ ಸಾಧ್ಯತೆಯಿದೆ. ಇಂದಿನಿಂದ ಎರಡು ದಿನ ರಾಜ್ಯದ ಎಲ್ಲಾ ಭಾಗದಲ್ಲೂ ಮಳೆಯಾಗಲಿದ್ದು, ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ, ಚಾಮರಾಜನಗರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.