HOME » NEWS » State » KARNATAKA WEATHER CYCLONE TAUKTAE TO HIT KARNATAKA KERALA GOA MAHARASHTRA ON MAY 16 KARNATAKA RAINS SCT

Karnataka Weather: ಕರ್ನಾಟಕದಲ್ಲಿ ಇನ್ನು 4 ದಿನ ಭಾರೀ ಮಳೆ; ಮೇ 16ಕ್ಕೆ ಅಪ್ಪಳಿಸಲಿದೆ ವರ್ಷದ ಮೊದಲ ಚಂಡಮಾರುತ

Cyclone Tauktae: ಇನ್ನೂ 4 ದಿನಗಳ ಕಾಲ ಮಲೆನಾಡು, ಕರಾವಳಿ, ಕೊಡಗು, ಬೆಂಗಳೂರಿನಲ್ಲಿ ಮಳೆ ಹೆಚ್ಚಳವಾಗುವ ಸಾಧ್ಯತೆಯಿದೆ. ಮೇ 16ರಂದು ಕರ್ನಾಟಕಕ್ಕೆ ತೌಕ್ತೆ ಚಂಡಮಾರುತ ಅಪ್ಪಳಿಸಲಿದೆ.

Sushma Chakre | news18-kannada
Updated:May 12, 2021, 4:19 PM IST
Karnataka Weather: ಕರ್ನಾಟಕದಲ್ಲಿ ಇನ್ನು 4 ದಿನ ಭಾರೀ ಮಳೆ; ಮೇ 16ಕ್ಕೆ ಅಪ್ಪಳಿಸಲಿದೆ ವರ್ಷದ ಮೊದಲ ಚಂಡಮಾರುತ
ಚಂಡಮಾರುತ
  • Share this:
Karnataka Rains: ಬೆಂಗಳೂರು (ಮೇ 12): ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಳೆದೊಂದು ವಾರಗಳಿಂದ ಮಳೆಯಾಗುತ್ತಿದೆ. ಉತ್ತರ ಕರ್ನಾಟಕ ಭಾಗದಲ್ಲೂ ಮಳೆಯ ಆರ್ಭಟ ಜೋರಾಗಿದ್ದು, ನಿನ್ನೆ ಸಿಡಿಲು ಬಡಿದು ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಇನ್ನೂ 4 ದಿನಗಳ ಕಾಲ ಮಲೆನಾಡು, ಕರಾವಳಿ, ಕೊಡಗು, ಬೆಂಗಳೂರಿನಲ್ಲಿ ಮಳೆ ಹೆಚ್ಚಳವಾಗುವ ಸಾಧ್ಯತೆಯಿದೆ. ಮೇ 16ರಂದು ಕರ್ನಾಟಕಕ್ಕೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 1ರಿಂದ ಕೇರಳಕ್ಕೆ ಮಾನ್ಸೂನ್ ಆಗಮನವಾಗಲಿದೆ. ಮೇ 16ರಂದು ಅರಬ್ಬಿ ಸಮುದ್ರದಲ್ಲಿ ಈ ವರ್ಷದ ಮೊದಲ ಚಂಡಮಾರುತ ಅಪ್ಪಳಿಸಲಿದ್ದು, ಇದಕ್ಕೆ ತೌಕ್ತೆ ಚಂಡಮಾರುತ ಎಂದು ಹೆಸರಿಡಲಾಗಿದೆ. ಕರ್ನಾಟಕ, ಕೇರಳ, ತಮಿಳುನಾಡು ಸೇರಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಚಂಡಮಾರುತ ಅಬ್ಬರಿಸಲಿದೆ. ಹೀಗಾಗಿ, ಮುಂದಿನ 1 ವಾರಗಳ ಕಾಲ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಮೇ 15ರಂದು ಮಹಾರಾಷ್ಟ್ರ ಮತ್ತು ಗೋವಾದಲ್ಲಿಯೂ ಚಂಡಮಾರುತ ಅಬ್ಬರ ಹೆಚ್ಚಾಗಲಿದೆ. ಕರ್ನಾಟಕದಲ್ಲಿ ಮೇ 16ರಂದು ಗಂಟೆಗೆ 40ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ.
ಅರಬ್ಬಿ ಸಮುದ್ರದ ವಾಯುವ್ಯ ಭಾಗದಲ್ಲಿ ವಾಯುಭಾರ ಕುಸಿಯುವ ಹಿನ್ನೆಲೆಯಲ್ಲಿ ಮೇ 16ರಂದು ಕರ್ನಾಟಕಕ್ಕೆ ಚಂಡಮಾರುತ ಅಪ್ಪಳಿಸಲಿದೆ. ತೌಕ್ತೆ ಚಂಡಮಾರುತ ಎಂಬುದು ಮಯನ್ಮಾರ್ ಹೆಸರಾಗಿದೆ. ಲಕ್ಷದ್ವೀಪ, ಕೇರಳ, ಕರ್ನಾಟಕ, ಗೋವಾ, ಮಹಾರಾಷ್ಟ್ರದ ಕರಾವಳಿ ಭಾಗದಲ್ಲಿ ತೌಕ್ತೆ ಚಂಡಮಾರುತದ ಅಬ್ಬರ ಹೆಚ್ಚಾಗಿರಲಿದೆ.ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 2 ದಿನಗಳಿಂದ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಕರಾವಳಿಯ ಉಡುಪಿ, ದಕ್ಷಿಣ ಕನ್ನಡದಲ್ಲಿ ಜೋರಾಗಿ ಮಳೆಯಾಗಿದ್ದು, ಕೊಡಗು, ಬೆಂಗಳೂರಿನಲ್ಲಿಯೂ ಮಳೆ ಸುರಿದಿದೆ. ಇಂದು ಕೂಡ ಈ ಭಾಗಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಹೆಚ್ಚಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಉತ್ತರ ಕನ್ನಡ, ಚಿತ್ರದುರ್ಗದಲ್ಲಿ ಇಂದು ಮತ್ತು ನಾಳೆ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಕರ್ನಾಟಕ ಮಾತ್ರವಲ್ಲದೆ ನೆರೆಯ ರಾಜ್ಯವಾದ ಕೇರಳ, ಅಸ್ಸಾಂ, ಸಿಕ್ಕಿಂ, ಪಶ್ಚಿಮ ಬಂಗಾಳ, ಮೇಘಾಲಯದಲ್ಲೂ ಇಂದು ಮಳೆ ಹೆಚ್ಚಾಗಲಿದೆ. ಜೂನ್ 1ರಂದು ಕೇರಳಕ್ಕೆ ಮಾನ್ಸೂನ್ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Youtube Video

ಮೇ 15ರವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಬೆಂಗಳೂರಿನಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ಮೇ 16ರಂದು ಚಂಡಮಾರುತ ಉಂಟಾಗಲಿದೆ.
Published by: Sushma Chakre
First published: May 12, 2021, 4:19 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories