Karnataka Weather Report: ಚಳಿ ಜೊತೆ ತುಂತುರು ಮಳೆ, ರಾಜ್ಯದಲ್ಲಿ ಮೋಡ ಕವಿದ ವಾತಾವರಣ

. ಬಂಗಾಳ ಕೊಲ್ಲಿಯಲ್ಲಿ (Bay of Bengal) ವಾಯುಭಾರ ಕುಸಿತ ಹಿನ್ನೆಲೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru Rain) ಬುಧವಾರದವರೆಗೆ ಮಳೆಯಾಗಲಿದೆ. ನಗರದಲ್ಲಿ  ಮಳೆ ಜೊತೆ ಚಳಿ (Cold Weather) ಪ್ರಮಾಣ ಸಹ ಏರಿಕೆಯಾಗುತ್ತಿದೆ.

ಮಳೆ

ಮಳೆ

  • Share this:
ಇಂದು ಸಹ ರಾಜಧಾನಿ ಬೆಂಗಳೂರು (Bengaluru) ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಚಳಿ ಜೊತೆ ತುಂತುರು ಮಳೆ (Rainfall)ಯಾಗಲಿದೆ. ಬೆಂಗಳೂರು, ಮಂಡ್ಯ, ಮೈಸೂರು, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಭಾಗದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ(Rain)ಯಾಗುವ ಸಾಧ್ಯತೆಗಳಿವೆ. ಉತ್ತರ ಕರ್ನಾಟಕ (North Karnataka) ಭಾಗದಲ್ಲಿಯೂ ಮೋಡ ಕವಿದ ವಾತಾವರಣ (Cloudy Weather) ನಿರ್ಮಾಣವಾಗಿದ್ದು, ಚದುರಿದ ಮಳೆಯಾಗುವ ಸಾಧ್ಯತೆಗಳಿವೆ. ಶನಿವಾರ ಬಾಗಲಕೋಟೆ, ವಿಜಯಪುರ, ಯಾದಗಿರಿ, ಕೊಪ್ಪಳ ಜಿಲ್ಲೆಯ ಕೆಲವು ಭಾಗಗಳಲ್ಲಿ ಮಳೆಯಾಗಿರುವ ವರದಿಗಳು ಬಂದಿವೆ. ಬಂಗಾಳ ಕೊಲ್ಲಿಯಲ್ಲಿ (Bay of Bengal) ವಾಯುಭಾರ ಕುಸಿತ ಹಿನ್ನೆಲೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru Rain) ಬುಧವಾರದವರೆಗೆ ಮಳೆಯಾಗಲಿದೆ. ನಗರದಲ್ಲಿ  ಮಳೆ ಜೊತೆ ಚಳಿ (Cold Weather) ಪ್ರಮಾಣ ಸಹ ಏರಿಕೆಯಾಗುತ್ತಿದೆ.

ಆಗ್ನೇಯ ಬಂಗಾಳಕೊಲ್ಲಿಯಲ್ಲಿನ (Bay of Bengal) ಮೇಲ್ಮೈ ಸುಳಿಗಾಳಿ ಪ್ರಬಲವಾಗಿ ರೂಪಗೊಂಡ ಪರಿಣಾಮ ಮಳೆಯಾಗುತ್ತಿದೆ. ನವೆಂಬರ್ 11 ರಿಂದಲೇ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಇಂದು ಸಹ ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ,ರಾಮನಗರ, ಕೋಲಾರ, ಕೊಡಗು, ಚಿಕ್ಕಬಳ್ಳಾಪುರ ಮತ್ತು ಹಾಸನದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ತಮಿಳುನಾಡಿನಲ್ಲಿ ಗುಡಗು ಸಹಿತ ಮಳೆ

ತಮಿಳುನಾಡಿನ ಕನ್ಯಾಕುಮಾರಿ, ರಾಮನಾಥಪುರಂ, ಶಿವಗಂಗೈ, ಥೆಂಕಾಸಿ, ಕೊಯಂಬತ್ತೂರ್ ಮತ್ತು ವಿರುಧನಗರ ಜಿಲ್ಲೆಗಳಲ್ಲಿ ಮೂರು ದಿನ ಗುಡುಗು ಸಹಿತ ಮಳೆಯಾಗಲಿದೆ. ಹಾಗಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಶಾಲೆ ಆರಂಭದ ಕುರಿತು ಜಿಲ್ಲಾಡಳಿತ ಆದೇಶ ಪ್ರಕಟಿಸಲಿದೆ ಎಂದು ತಮಿಳುನಾಡು ಸರ್ಕಾರ ಹೇಳಿಕೆ ಬಿಡುಗಡೆ ಮಾಡಿದೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಎನ್.ಡಿ .ಆರ್.ಎಫ್ ಮತ್ತು ಎಸ್.ಡಿ.ಆರ್.ಎಫ್. ತಂಡಗಳು ರಕ್ಷಣಾ ಕಾರ್ಯಚರಣೆಯಲ್ಲ ತೊಡಗಿಕೊಂಡಿವೆ.

ಇದನ್ನೂ ಓದಿ:  Astrology : ಭಾನುವಾರದ ಈ ದಿನ ಮಿಥುನ ರಾಶಿಯವರಿಗೆ ಶುಭ; ಕುಂಭರಾಶಿಗೆ ಹೇಗಿರಲಿದೆ ದಿನ

ಆಸ್ಪತ್ರೆಗಳಿಗೆ ಬಿಬಿಎಂಪಿ ಖಡಕ್ ಸೂಚನೆ

ಬೆಂಗಳೂರಿನ ವಾತಾವರಣ ಬದಲಾಗಿರುವ ಹಿನ್ನೆಲೆ ಸಾರ್ವಜನಿಕ ಆರೋಗ್ಯದಲ್ಲಿ ಏರುಪೇರಾಗುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲ ವ್ಯವಸ್ಥೆಗಳನ್ನು ಕಲ್ಪಿಸಿಕೊಳ್ಳುವಂತೆ 300 ಆಸ್ಪತ್ರೆಗಳಿಗೆ ಬಿಬಿಎಂಪಿ (BBMP) ಖಡಕ್ ಸೂಚನೆ ನೀಡಿದೆ. ಕೊರೋನಾ ಜೊತೆ ಇತರೆ ರೋಗದ ಬಗ್ಗೆಯೂ ಎಚ್ಚರವಹಿಸುವಂತೆ ಸೂಚನೆ ನೀಡಿದೆ . ಹವಾಮಾನ ವೈಪರೀತ್ಯದಿಂದ ಉಂಟಾಗುವ ಕೆಮ್ಮು‌ ಶೀತ ಜ್ವರ ಬಂದರೂ ಕೊರೋನಾ ಪರೀಕ್ಷೆ ಕಡ್ಡಾಯ ಮಾಡುವಂತೆ ಬಿಬಿಎಂಪಿ ಹೇಳಿದೆ.

ಕರ್ನಾಟಕದ ಡ್ಯಾಂಗಳು ಭರ್ತಿ

ರಾಜ್ಯದಲ್ಲಿ ಹಲವು ದಿನಗಳಿಂದ ನಿರಂತರವಾಗಿ ಮಳೆ (Rainfall) ಯಾಗುತ್ತಿದೆ. ಇಂದು ಸಹ ರಾಜ್ಯದ ಹಲವೆಡೆ ಮಳೆ ಮುಂದುವರಿಯುವ ನಿರೀಕ್ಷೆ ಇದೆ. ಭಾರಿ ಮಳೆಗೆ ರಾಜ್ಯದಲ್ಲಿ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ. ಬಹುತೇಕ ಡ್ಯಾಂ (Karnataka dams)ಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ.  ಈ ಹಿನ್ನೆಲೆ ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಕೆಆರ್ ಎಸ್ ಕಾವೇರಿ ನದಿ ಪಾತ್ರದ ಜನರಿಗೆ ಎಚ್ಚರಿಕೆಯ ಸೂಚನೆ ನೀಡಿತ್ತು.

ಇದನ್ನೂ ಓದಿ:  JDS ಆಫರ್ ತಿರಸ್ಕರಿಸಿ, ದಳಪತಿಗಳಿಗೆ ಟಾಂಗ್ ಕೊಟ್ಟ GT Devegowda

ದೆಹಲಿ ವಾಯು ಮಾಲಿನ್ಯ

ದೀಪಾವಳಿಯಂದು ಪಟಾಕಿಗಳ ನಿಷೇಧವನ್ನು ವ್ಯಾಪಕವಾಗಿ ಉಲ್ಲಂಘಿನೆ ಬಳಿಕ ದೆಹಲಿ ಮತ್ತು ಸುತ್ತಲಿನ ನಗರಗಳಲ್ಲಿ ಗಾಳಿಯ ಗುಣಮಟ್ಟವು ಕಳೆದ ವಾರದಿಂದ ಸಂಪೂರ್ಣ ಹದಗೆಟ್ಟಿದೆ. ಪಂಜಾಬ್ ಮತ್ತು ಹರಿಯಾಣದಲ್ಲಿ ದಹನವು ಕೂಡ ವಾಯುಗುಣದ ಮಟ್ಟದ ತೀವ್ರ ಕುಸಿತಕ್ಕೆ ಕಾರಣವಾಗಿದೆ

ಲಾಕ್ಡೌನ್ಹೊರತ ಪರಿಹಾರದ ಬಗ್ಗೆ ಕೂಡ ಚಿಂತನೆ

ಅಗತ್ಯ ಇದ್ದರೆ ಎರಡು ದಿನಗಳ ಲಾಕ್‌ಡೌನ್ ಮಾಡಿ ಎಂದು ತಿಳಿಸಿರುವ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿಯುತ್ತಿರುವುದರಿಂದ ಜನ ಉಸಿರಾಡುವುದೇ ಕಷ್ಟವಾಗಿದೆ. ಆದುದರಿಂದ ಜನರು ಹೇಗೆ ಬದುಕಿಸಬೇಕೆಂದು ಯೋಚನೆ ಮಾಡಿ.

ಲಾಕ್ಡೌನ್ ಹೊರತುಪಡಿಸಿ ಬೇರೆ ಪರಿಹಾರೋಪಾಯಗಳ ಬಗ್ಗೆಯೂ ಚಿಂತನೆ ನಡೆಸಿ ಎಂದು ಹೇಳಿದೆ. ಈ ಬಗ್ಗೆ ನಿರ್ಧಾರ ಮಾಡುವ ಉದ್ದೇಶದಿಂದ ದೆಹಲಿ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಸರ್ಕಾರಗಳ ಜೊತೆ ತುರ್ತು ಸಭೆ (Urgent Meeting) ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.‌ ಬಳಿಕ ಸೋಮವಾರಕ್ಕೆ ಮತ್ತೆ ವಿಚಾರಣೆ ಮುಂದೂಡಿದೆ
Published by:Mahmadrafik K
First published: