HOME » NEWS » State » KARNATAKA WEATHER FORECAST HEAVIEST RAINFALL PREDICTED FROM TODAY RED AND ORANGE ALERT ANNOUNCED GNR

Karnataka Weather: ಇನ್ನೊಂದು ವಾರ ಕರ್ನಾಟಕದಲ್ಲಿ ಭಾರೀ ಮಳೆ - ಕರಾವಳಿ ಮತ್ತು ಮಲೆನಾಡಿನಲ್ಲಿ ರೆಡ್, ಆರೆಂಜ್ ಅಲರ್ಟ್

Weather Forecast: ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಉತ್ತಮ ಮಳೆಯಾಗಲಿದೆ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿಕೆ ತಿಳಿಸಿದ್ದಾರೆ. ಕರಾವಳಿ ಜಿಲ್ಲೆಗಳಲ್ಲಿ ಮೀನುಗಾರರಿಗೆ ಎಚ್ಚರಿಕೆ ನೀಡಿದ್ದು, ಗಾಳಿಯ ವೇಗ 45-55 ಕಿ.ಮೀ ವೇಗದಲ್ಲಿದ್ದು ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆಯ ಎಚ್ಚರಿಕೆ ನೀಡಿದೆ.

news18-kannada
Updated:September 21, 2020, 9:15 AM IST
Karnataka Weather: ಇನ್ನೊಂದು ವಾರ ಕರ್ನಾಟಕದಲ್ಲಿ ಭಾರೀ ಮಳೆ - ಕರಾವಳಿ ಮತ್ತು ಮಲೆನಾಡಿನಲ್ಲಿ ರೆಡ್, ಆರೆಂಜ್ ಅಲರ್ಟ್
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು(ಸೆ.20): ಬಂಗಾಲ ಉಪಸಾಗರದ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದೆ. ಕರಾವಳಿ, ಮಲೆನಾಡಿನಲ್ಲಿ ರೈನ್ ಅಲರ್ಟ್ ಘೋಷಣೆ ಮಾಡಿರುವ ಭಾರತೀಯ ಹವಾಮಾನ ಇಲಾಖೆ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ನಾಳೆಯೂ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಹೇಳಿದೆ.‌ ಹವಾಮಾನ ಇಲಾಖೆಯ ನಿರ್ದೇಶಕ ಸಿ ಎಸ್ ಪಾಟೀಲ್ ಮಾಹಿತಿ ನೀಡಿದೆ. ಮುಂದಿನ ಮೂರು ದಿನಗಳ ಕಾಲ ಅಂದರೆ ಸೆ.20ರಿಂದ 23ರ ವರೆಗೆ ವ್ಯಾಪಕ ಮಳೆಯಾಗಲಿದೆ. ಇನ್ನೂ ಮೂರು ದಿನ ರಾಜ್ಯದ ಬಹುತೇಕ ಕಡೆ ಭಾರೀ ಮಳೆಯಾಗಲಿದೆ. ಇಂದು ಮತ್ತು ನಾಳೆ ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರೀ ಹಾಗೂ ಅತಿ ಭಾರೀ ಮಳೆ ಬರುವ ಸಾಧ್ಯತೆಯಿದೆ. ಈ ಭಾಗದ ಹಲವೆಡೆ 20 ಸೆಂಟಿ ಮೀಟರ್​​ಗಿಂತಲೂ ಹೆಚ್ಚು ಮಳೆಯಾಗಲಿದೆ ಎಂದು ತಿಳಿಸಿದ್ದಾರೆ.

ಇಂದು ಮತ್ತು ನಾಳೆ ಕರಾವಳಿ ಹಾಗೂ ಮಲೆನಾಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ, ಮಲೆನಾಡ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಿದೆ. ಸೆ.22ರಂದು ಕರಾವಳಿ‌ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆಯನ್ನು ಹವಾಮಾನ ಇಲಾಖೆ ಮಾಡಿದೆ.

ಇನ್ನು ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ 22ರವರೆಗೆ ವ್ಯಾಪಕ ಮಳೆಯಾಗಲಿದ್ದು, ಬೆಳಗಾವಿ, ಧಾರವಾಡ, ಬಾಗಲಕೋಟೆ, ಕೊಪ್ಪಳ, ಗದಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಸೆ.21ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ಸೆ. 22-23 ರಾಜ್ಯದ ಒಳನಾಡಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಸೆಪ್ಟೆಂಬರ್ 26ರಂದು ಆರೆಂಜ್ ಅಲರ್ಟ್ ಮಾಡಿದೆ.


ಇದನ್ನೂ ಓದಿ:
Published by: Ganesh Nachikethu
First published: September 20, 2020, 6:57 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories