Karnataka Weather Report: ದಟ್ಟವಾದ ಮಂಜು, ಮುಂದುವರಿದ ಚಳಿ

ಗುರುವಾರ ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ಹಿಮಾಚಲ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಹಿಮ ಅಥವಾ ಮಳೆಯಾಗುವ ಸಾಧ್ಯತೆಯಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Karnataka Weather Report 1 Feb 2022: ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಚಳಿಯ (Cold) ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಇತ್ತ ಮಧ್ಯಾಹ್ನ ಆಗುತ್ತಿದ್ದಂತೆ ಸೂರ್ಯನ ಪ್ರಖರತೆ ಹೆಚ್ಚಾಗುತ್ತಿದೆ. ಮಲೆನಾಡು ಮತ್ತು ದಕ್ಷಿಣ ಒಳನಾಡು ಭಾಗಳಲ್ಲಿ ಮಾತ್ರ ಬೆಳಗ್ಗೆ ದಟ್ಟವಾದ ಮಂಜು ಆವರಿಸಿಕೊಂಡ ವಾತಾವರಣ ನಿರ್ಮಾಣವಾಗಿದೆ. ಇನ್ನು ಉತ್ತರ ಕರ್ನಾಟಕದ (North Karnataka) ಎಲ್ಲ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಗಡಿ ದಾಟುವ ಮೂಲಕ ಬೇಸಿಗೆ (Summer) ಆರಂಭದ ಸುಳಿವು ನೀಡುತ್ತಿದೆ. ರಾಜ್ಯದಲ್ಲಿ ಚಳಿಯ ವಾತಾವರಣ (Cold Weather) ಮುಂದುವರಿದಿದ್ದು, ಬೆಳಗಿನ ಜಾವ ದಟ್ಟವಾದ ಮಂಜು ಆವರಿಸಲಿದೆ. ಸಂಜೆಯಿಂದಲೇ ಬೀಸುವ ಸುಳಿಗಾಳಿ (Cold Wave) ಚಳಿಯ ಪ್ರಮಾಣವನ್ನು ಮತ್ತಷ್ಟು ಹೆಚ್ಚು ಮಾಡತೊಡಗಿದೆ. ಇತ್ತ ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡ ಮುಸುಕಿದ ವಾತಾವರಣದ ಜೊತೆ ಇಬ್ಬನಿ ಬೀಳುತ್ತಿದೆ.

ರಾಜಧಾನಿ ಬೆಂಗಳೂರಿನಲ್ಲಿ (Bengaluru Weather) ಕನಿಷ್ಠ ತಾಪಮಾನ ಕಳೆದ ನಾಲ್ಕೈದು ದಿನಗಳಿಂದ 15 ರಿಂದ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತಿದೆ. ಹಿಮಾಚಲ ಪ್ರದೇಶ, ಜಾರ್ಖಂಡ್, ಉತ್ತರಾಖಂಡ್, ಜಮ್ಮು ಕಾಶ್ಮೀರ ಭಾಗಗಳಲ್ಲಿ ಹಿಮಪಾತ ಆಗುತ್ತಿರುವ ವರದಿಗಳು ಬರುತ್ತಿವೆ.

ಇದನ್ನೂ ಓದಿ:  Madikeri: ಫಾರಿನ್ ವೆಹಿಕಲ್ ಅಲ್ಲ ಕಣ್ರೀ, ಇದು ಕೊಡಗಿನ ಹುಡುಗನ ದೇಸಿ ಬೈಕ್!

ಹಿಮಪಾತ, ಮಳೆ ಸಾಧ್ಯತೆ

ಅರುಣಾಚಲ ಪ್ರದೇಶದ ಮೇಲೆ ಚದುರಿದ ಮಳೆ/ಹಿಮ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಸಿಕ್ಕಿಂ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಪ್ರತ್ಯೇಕ ಮಳೆ/ಹಿಮ ಸಾಧ್ಯತೆ ಇದೆ. ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಗುರುವಾರ ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ಹಿಮಾಚಲ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಹಿಮ ಅಥವಾ ಮಳೆಯಾಗುವ ಸಾಧ್ಯತೆಯಿದೆ.

ಬುಧವಾರ ಮತ್ತು ಗುರುವಾರ ಮಳೆ ಸಾಧ್ಯತೆ

ಬಂಗಾಳ ಕೊಲ್ಲಿಯಿಂದ ಆಗ್ನೇಯ ಮಾರುತಗಳ ಪರಿಣಾಮ ಬುಧವಾರ ಮತ್ತು ಗುರುವಾರ ಉತ್ತರ ಭಾರತದ ಬಯಲು ಪ್ರದೇಶಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಫೆಬ್ರವರಿಯಿಂದ ದೆಹಲಿ, ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

ರಾಜ್ಯದ ಜಲಾಶಯಗಳು ಭರ್ತಿ

ಕಳೆದ ವರ್ಷ ರಾಜ್ಯದ ಬಹುತೇಕ ಕಡೆ ಮುಂಗಾರು ಮಳೆಯ ಅಬ್ಬರವಿತ್ತು. ಅಲ್ಲದೆ, ಹೆಚ್ಚು ಸೈಕ್ಲೋನ್‌ಗಳು, ಹವಾಮಾನ ಬದಲಾವಣೆ ಮುಂತಾದ ಕಾರಣಗಳಿಂದ ಸುರಿದ ಅಕಾಲಿಕ ಮಳೆಯಿಂದ ಎಲ್ಲೆಡೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಬೆಂಗಳೂರಿಗರ ಜೀವನವಂತೂ ತೀರಾ ಶೋಚನೀಯವಾಗಿತ್ತು.

ಇದನ್ನೂ ಓದಿ:  Karnataka Politics: ಸಿದ್ದರಾಮಯ್ಯ ನೀವೊಬ್ಬರೇನಾ ಗಂಡಸು? ಯಾಕೆ ಆ ಕ್ಷೇತ್ರದಲ್ಲಿ ಯಾರು ಗಂಡಸರು ಇಲ್ಲವಾ.?: H Vishwanath ಹೇಳಿಕೆ

ಅಲ್ಲದೆ, ಎಡೆಬಿಡದೆ ಸುರಿದ ಮಳೆಯಿಂದಾಗಿ ರಾಜ್ಯದ ಪ್ರಮುಖ ಜಲಾಶಯಗಳು ಬಹುತೇಕ ಭರ್ತಿಯಾಗಿದ್ದವು. ಪ್ರಸ್ತುತ ಚಳಿ, ಮೋಡ ಕವಿದ ವಾತಾವರಣವಿದ್ದರೂ ಜಲಾಶಯಗಳ ಪ್ರಮಾಣ ಕಡಿಮೆಯಾಗುತ್ತಿದೆ. ಇನ್ನೊಂದೆಡೆ, ಬೇಸಿಗೆ ಸಹ ಬೇಗನೆ ಆರಂಭವಾಗುವ ಲಕ್ಷಣಗಳಿದ್ದು, ಜಲಾಶಯಗಳ ಪ್ರಮಾಣ ಮತ್ತಷ್ಟು ಕಡಿಮೆಯಾಗಲಿದೆ ಎಂದು ಹೇಳಲಾಗಿದೆ. ಸದ್ಯ, ಹಲವು ಜಲಾಶಯಗಳ ಒಳಹರಿವು ಬಹುತೇಕ ನಿಂತುಹೋಗಿದೆ

ಅಕಾಲಿಕ ಮಳೆಯಿಂದಾಗಿ ತರಕಾರಿ ಬೆಲೆ ಏರಿಕೆ

ಅಕಾಲಿಕ ಮಳೆಯ (Unseasonal Rain)ಕಾರಣದಿಂದಾಗಿ ಕಳೆದ ಕೆಲ ದಿನಗಳಿಂದ ತರಕಾರಿ ಬೆಲೆ(Vegetables Price) ಗಗನಕ್ಕೇರುತ್ತಿದ್ದು, ಗ್ರಾಹಕರ(Customers) ಜೇಬು ಸುಡುತ್ತಿದೆ. ಮಳೆಯಿಂದಾಗಿ ತರಕಾರಿಗಳು ಜಮೀನಿನಲ್ಲೇ ಕೊಳೆಯುತ್ತಿದ್ದು, ರೈತರು ಹಾಗೂ ಗ್ರಾಹಕರನ್ನು ಕಂಗೆಡಿಸಿದೆ. ಬೆಳೆದ ರೈತನಿಗೆ ಫಲ ಕೈಗೆ ಸಿಕ್ಕಿಲ್ಲ ಎಂಬ ಚಿಂತೆಯಾದರೆ, ಗ್ರಾಹಕನಿಗೆ ದುಪ್ಪಟ್ಟು ಹಣ ಕೊಟ್ಟು ಕೊಂಡುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ.
Published by:Mahmadrafik K
First published: