Karnataka Weather Today: ಚಳಿಗಾಲ ಇದ್ರೂ ರಾಜ್ಯದಲ್ಲಿ ಮಳೆ; ಹಲವೆಡೆ ಮೋಡ ಕವಿದ ವಾತಾವರಣ

ಚಳಿಗಾಲ ಇದ್ರೂ ರಾಜ್ಯದ ಹಲವು ಕಡೆ ಮಳೆ(Rainfall)ಯಾಗುತ್ತಿದೆ. ಕೋಲಾರ (Kolar), ಚಿಕ್ಕಬಳ್ಳಾಪುರ (Chikkaballapur) ಸೇರಿದಂತೆ ದಕ್ಷಿಣ ಕರ್ನಾಟಕದ ಜಿಲ್ಲೆಯ ಪ್ರತ್ಯೇಕ ಕಡೆ ಮಳೆಯಾಗುತ್ತಿರುವ ವರದಿಗಳು ಆಗುತ್ತಿವೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Karnataka Weather Report: ಚಳಿಗಾಲ ಇದ್ರೂ ರಾಜ್ಯದ ಹಲವು ಕಡೆ ಮಳೆ(Rainfall)ಯಾಗುತ್ತಿದೆ. ಕೋಲಾರ (Kolar), ಚಿಕ್ಕಬಳ್ಳಾಪುರ (Chikkaballapur) ಸೇರಿದಂತೆ ದಕ್ಷಿಣ ಕರ್ನಾಟಕದ ಜಿಲ್ಲೆಯ ಪ್ರತ್ಯೇಕ ಕಡೆ ಮಳೆಯಾಗುತ್ತಿರುವ ವರದಿಗಳು ಆಗುತ್ತಿವೆ. ಈ ನಡುವೆ ಉತ್ತರ ಕರ್ನಾಟಕ (North Karnataka) ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ಸಹ ಎಂದಿನಂತೆ ಮುಂದುವರಿದಿದೆ. ಬೀದರ್, ಯಾದಗಿರಿ ಭಾಗದಲ್ಲಿ ಕನಿಷ್ಠ ತಾಪಮಾನ ದಾಖಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ (Bengaluru Weather) ಗರಿಷ್ಠ 28 ಮತ್ತು ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ರಾಜ್ಯದಲ್ಲಿಯ ಹವಾಮಾನ ದಿನದಿಂದ ದಿನಕ್ಕೆ ಬದಲಾಗುತ್ತಿದೆ. ಮಲೆನಾಡು ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ದಟ್ಟವಾದ ಮಂಜು, ಮೋಡ ಕವಿದ ವಾತಾವರಣದ ಜೊತೆ ಬೆಳಗಿನ ಜಾವ ಇಬ್ಬನಿ ಸಹ ಬೀಳುತ್ತಿದೆ.

ರಾಜ್ಯದ ಜಿಲ್ಲಾವಾರು ಹವಾಮಾನ ವರದಿ (ಗರಿಷ್ಠ ಮತ್ತು ಕನಿಷ್ಠ ಡಿಗ್ರಿ ಸೆಲ್ಸಿಯಸ್ ಗಳಲ್ಲಿ)

ಬೆಂಗಳೂರು 28-17, ಮೈಸೂರು 31-18, ಚಾಮರಾಜನಗರ 29-19, ರಾಮನಗರ 30-18, ಮಂಡ್ಯ 31-18, ಬೆಂಗಳೂರು ಗ್ರಾಮಾಂತರ 28-17, ಚಿಕ್ಕಬಳ್ಳಾಪುರ 27-16, ಕೋಲಾರ 27-17, ಹಾಸನ 29-17, ಚಿಕ್ಕಮಗಳೂರು 29-16, ದಾವಣಗೆರೆ 32-19, ಶಿವಮೊಗ್ಗ 32-19, ಕೊಡಗು 29-17, ತುಮಕೂರು 29-17

ಇದನ್ನೂ ಓದಿ:  Crime News: 3 ಮಕ್ಕಳ ತಾಯಿಗೆ ಪ್ರಿಯಕರನ ಕಾಟ.. ಹಬ್ಬದ ದಿನ ಸಿಕ್ಕವಳ ಮೇಲೆರಗಿ ರಕ್ತ ಚೆಲ್ಲಾಡಿದ ಪಾಪಿ!

ಉಡುಪಿ 32-23, ಮಂಗಳೂರು 32-23, ಉತ್ತರ ಕನ್ನಡ 32-19, ಧಾರವಾಡ 31-18, ಹಾವೇರಿ 31-18,  ಹುಬ್ಬಳ್ಳಿ 31-19, ಬೆಳಗಾವಿ 30-17, ಗದಗ 30-19,  ಕೊಪ್ಪಳ 30-19, ವಿಜಯಪುರ 30-18, ಬಾಗಲಕೋಟ 31-19,  ಕಲಬುರಗಿ 30-18, ಬೀದರ್ 27-16,  ಯಾದಗಿರಿ 30-18, ರಾಯಚೂರ 31-19, ಬಳ್ಳಾರಿ 30-19

ಅಕಾಲಿಕ ಮಳೆಗೆ ಬೆಳೆ ಹಾನಿ

ಇತ್ತ ಮೈಸೂರು ಭಾಗದಲ್ಲಿ ಶುಷ್ಕ ಹಮಾಮಾನದ ಜೊತೆ ಚಳಿ ಸಹ ಇರಲಿದೆ. ಬೆಳಗ್ಗೆ ಬೀಳುವ ಮಂಜು ಬೆಳೆಗಳ ಮೇಲೆ ಪರಿಣಾಮ ಬೀರುತ್ತಿದ್ದು, ಕಡಲೆ, ಜೋಳ ಹಳದಿ ರೋಗಕ್ಕೆ ತುತ್ತಾಗುವ ಆತಂಕ ಎದುರಾಗಿದೆ. ಮತ್ತೊಂದೆಡೆ ಕೊರೋನಾ, ಓಮೈಕ್ರಾನ್ (Corona Virus And Omicron Variant) ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಕಾರಣ ಸಣ್ಣ ನೆಗಡಿಗೂ ಜನರು ಹೆದರುವಂತಾಗಿದೆ.

ಉತ್ತರ ಕರ್ನಾಟಕದ (North Karnataka) ಎಲ್ಲ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಗಡಿ ದಾಟುವ ಮೂಲಕ ಬೇಸಿಗೆ (Summer) ಆರಂಭದ ಸುಳಿವು ನೀಡುತ್ತಿದೆ. ಈ ಬಾರಿ ನವೆಂಬರ್ ಮತ್ತು ಡಿಸೆಂಬರ್ ನಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ವಾತಾವರಣದಲ್ಲಿ ವೈಪರೀತ್ಯ ಉಂಟಾಗಿದೆ.

ವಾಡಿಕೆಗಿಂತ ಹೆಚ್ಚಿನ ಮಳೆ

ಭಾರತೀಯ ಹವಾಮಾನ ಇಲಾಖೆ (IMD), ಕರಾವಳಿ ಆಂಧ್ರಪ್ರದೇಶ, ರಾಯಲಸೀಮಾ, ಕರ್ನಾಟಕದ ದಕ್ಷಿಣ ಒಳನಾಡು, ಪುದುಚೇರಿ ಮತ್ತು ಕೇರಳದಲ್ಲಿ ಡಿಸೆಂಬರ್‌ನಿಂದ ಫೆಬ್ರುವರಿ ವರೆಗೆ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಇದನ್ನೂ ಓದಿ:  ಎರಡನೇ ವಾರದ Weekend Curfew ; ಬೆಂಗಳೂರಿನಲ್ಲಿ ಮಾರುಕಟ್ಟೆ ಸ್ಥಳಾಂತರದ ಮಾಹಿತಿ ಇಲ್ಲಿದೆ

ರಾಜ್ಯದ ಜಲಾಶಯಗಳು ಭರ್ತಿ

ಇಂದು ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ. ಇನ್ನೂ 3 ದಿನ ಕರ್ನಾಟಕದ ಉತ್ತರ ಒಳನಾಡು(NIK) ಮತ್ತು ದಕ್ಷಿಣ ಒಳನಾಡಿನಲ್ಲಿ(SIK) ಮಳೆಯಾಗಲಿದೆ. ಅದರಲ್ಲೂ ಇಂದು ಮತ್ತು ನಾಳೆ ಸಿಲಿಕಾನ್​ ಸಿಟಿ ಬೆಂಗಳೂರು(Bengaluru) ಸೇರಿದಂತೆ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು IMD ಹೇಳಿದೆ.

ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಬಳ್ಳಾಪುರ, ರಾಯಚೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರದಲ್ಲಿಯೂ ಮಳೆಯ(Rainfall) ಪ್ರಮಾಣ ಹೆಚ್ಚಾಗಲಿದೆ ಎಂದು ತಿಳಿದು ಬಂದಿದೆ. ಅಕಾಲಿಕ ಮಳೆಗೆ ರಾಜ್ಯದ ಪ್ರಮುಖ ಜಲಾಶಯಗಳು ಬಹುತೇಕ ಭರ್ತಿಯಾಗಿವೆ.

ಲಘು ಮಳೆಯೊಂದಿಗೆ ಹಿಮಪಾತ

ಹವಾಮಾನ ಇಲಾಖೆ (IMD) ಪ್ರಕಾರ ವಾಯುವ್ಯ ಭಾರತದ ಬಯಲು ಪ್ರದೇಶದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ಅದೇ ಸಮಯದಲ್ಲಿ, ಪಶ್ಚಿಮ ಹಿಮಾಲಯ ಪ್ರದೇಶಗಳಲ್ಲಿ ಲಘು ಮಳೆಯೊಂದಿಗೆ ಹಿಮಪಾತದಿಂದಾಗಿ ತಾಪಮಾನದಲ್ಲಿ ಗಣನೀಯ ಇಳಿಕೆಯಾಗುವ ಸಾಧ್ಯತೆಯಿದೆ.

ಪಂಜಾಬ್, ಉತ್ತರ ಪ್ರದೇಶದಲ್ಲಿ ದಟ್ಟವಾದ ಮಂಜು

ಹವಾಮಾನ ಮುನ್ಸೂಚನೆ ಸಂಸ್ಥೆ ಸ್ಕೈಮೆಟ್ ಪ್ರಕಾರ, ಬಂಗಾಳಕೊಲ್ಲಿಯ ನೈಋತ್ಯದಲ್ಲಿ ಚಂಡಮಾರುತದ ಪರಿಚಲನೆ ಉಳಿದಿದೆ. ಅದೇ ಸಮಯದಲ್ಲಿ, ಜಮ್ಮು ಮತ್ತು ಕಾಶ್ಮೀರದ ಮೇಲೆ ದುರ್ಬಲವಾದ ಪಾಶ್ಚಿಮಾತ್ಯ ಅಡಚಣೆಯು ಉಳಿದಿದೆ. ಪಶ್ಚಿಮದ ಅಡಚಣೆಯು ಬಲಗೊಳ್ಳಬಹುದು ಮತ್ತು ಪಶ್ಚಿಮ ಹಿಮಾಲಯವನ್ನು ತಲುಪಬಹುದು.
Published by:Mahmadrafik K
First published: