Karnataka Weather Report: ಮಲೆನಾಡು ಭಾಗದಲ್ಲಿ ದಟ್ಟವಾದ ಮಂಜು; ಈ ರಾಜ್ಯಗಳಲ್ಲಿ ಗುಡುಗು ಸಹಿತ ಮಳೆ

ಎಂದಿನಂತೆ ಮೈಸೂರು ಭಾಗದಲ್ಲಿ ಚಳಿಯ ವಾತಾವರಣದ (Cold Weather) ಜೊತೆ ಒಣ ಹವೆ ಇರಲಿದೆ. ಇನ್ನುಳಿದಂತೆ ಉತ್ತರ ಕರ್ನಾಟಕದ (North Karnataka) ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ (Cloudy Weather) ಇರಲಿದ್ದು, ಸಣ್ಣ ಸುಳಿಗಾಳಿ (Cold Wave) ಹಿರಿಯ ಜನರನ್ನು ಮನೆಯಲ್ಲಿ ಕೂರುವಂತೆ ಮಾಡಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Karnataka Weather Today: ಕಳೆದ ನಾಲ್ಕೈದು ದಿನಗಳಿಂದ ರಾಜ್ಯದಲ್ಲಿ ಹವಾಮಾನದಲ್ಲಿ ಯಾವುದೇ ಬದಲಾವಣೆಗಳಿಲ್ಲ. ಎಂದಿನಂತೆ ಮೈಸೂರು ಭಾಗದಲ್ಲಿ ಚಳಿಯ ವಾತಾವರಣದ (Cold Weather) ಜೊತೆ ಒಣ ಹವೆ ಇರಲಿದೆ. ಇನ್ನುಳಿದಂತೆ ಉತ್ತರ ಕರ್ನಾಟಕದ (North Karnataka) ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ (Cloudy Weather) ಇರಲಿದ್ದು, ಸಣ್ಣ ಸುಳಿಗಾಳಿ (Cold Wave) ಹಿರಿಯ ಜನರನ್ನು ಮನೆಯಲ್ಲಿ ಕೂರುವಂತೆ ಮಾಡಿದೆ. ಕರಾವಳಿ ಜಿಲ್ಲೆಗಳಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್ ದಾಖಲಾಗುತ್ತಿದೆ. ಮಲೆನಾಡು ಭಾಗದಲ್ಲಿ ದಟ್ಟವಾದ ಮಂಜು ಕಾಣಿಸಿಕೊಳ್ಳುತ್ತಿದೆ. ಇಂದು ರಾಜಧಾನಿ ಬೆಂಗಳೂರಿನಲ್ಲಿ (Bengaluru Weather) ಗರಿಷ್ಠ 27 ಮತ್ತು ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

ರಾಜ್ಯದ ಜಿಲ್ಲಾವಾರು ಹವಾಮಾನ ವರದಿ (ಗರಿಷ್ಠ ಮತ್ತು ಕನಿಷ್ಠ ಡಿಗ್ರಿ ಸೆಲ್ಸಿಯಸ್ ಗಳಲ್ಲಿ)

ಬೆಂಗಳೂರು 27-16, ಮೈಸೂರು 29-17, ಚಾಮರಾಜನಗರ 29-18, ರಾಮನಗರ 29-17, ಮಂಡ್ಯ 30-18, ಬೆಂಗಳೂರು ಗ್ರಾಮಾಂತರ 27-16, ಚಿಕ್ಕಬಳ್ಳಾಪುರ 26-14, ಕೋಲಾರ 26-16, ಹಾಸನ 28-16, ಚಿಕ್ಕಮಗಳೂರು 27-16, ದಾವಣಗೆರೆ 31-18, ಶಿವಮೊಗ್ಗ 31-18, ಕೊಡಗು 28-16, ತುಮಕೂರು 28-17

ಇದನ್ನೂ ಓದಿ:  ದೇಶಿ Cricketನಲ್ಲಿ ತಲೆ ಎತ್ತಿದ Fixing ಭೂತ: ಇಷ್ಟು ಮೊತ್ತಕ್ಕೆ ಆಟಗಾರನಿಗೆ ಆಫರ್!

ಉಡುಪಿ 32-23, ಮಂಗಳೂರು 32-23, ಉತ್ತರ ಕನ್ನಡ 32-19, ಧಾರವಾಡ 29-17, ಹಾವೇರಿ 31-18, ಹುಬ್ಬಳ್ಳಿ 30-18, ಬೆಳಗಾವಿ 29-17, ಗದಗ 29-18, ಕೊಪ್ಪಳ 29-18, ವಿಜಯಪುರ 29-18, ಬಾಗಲಕೋಟ 30-18, ಕಲಬುರಗಿ 29-18, ಬೀದರ್ 27-16, ಯಾದಗಿರಿ 30-19, ರಾಯಚೂರ 30-19, ಬಳ್ಳಾರಿ 30-19

ಮುಂದಿನ 24 ಗಂಟೆಗಳಲ್ಲಿ ರಾಜಸ್ಥಾನ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಮುಂದಿನ ಎರಡು ದಿನಗಳಲ್ಲಿ ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ಮುಂದಿನ 3-4 ದಿನಗಳಲ್ಲಿ ಉತ್ತರ ಪ್ರದೇಶ, ಬಿಹಾರ, ಉಪ-ಹಿಮಾಲಯನ್ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ಮೇಲೆ ಮಳೆಯ ಸಾಧ್ಯತೆಗಳಿವೆ.

ಈ ಭಾಗದಲ್ಲಿ ಗುಡುಗು ಸಹಿತ ಮಳೆ

ಆಂಧ್ರಪ್ರದೇಶದಲ್ಲಿ ಅಲ್ಲಲ್ಲಿ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ಹಿಮಾಚಲ ಪ್ರದೇಶದ ಮೇಲೆ ಪ್ರತ್ಯೇಕವಾದ ಮಳೆ/ಹಿಮ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ತಮಿಳುನಾಡು, ಕೇರಳ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಪ್ರತ್ಯೇಕವಾದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ:  Puneeth Rajkumar: ಪರಮಾತ್ಮನಿಗೆ ಅಭಿಮಾನಿಯ ನಿತ್ಯ ಪೂಜೆ: ಮಕ್ಕಳಿಗೂ ಅಪ್ಪು, ಅಭಿ ಹೆಸರು: ಬೆನ್ನ ಮೇಲೆ 30 ಹಚ್ಚೆ

ಈ ರಾಜ್ಯಗಳಲ್ಲಿ ದಟ್ಟವಾದ ಮಂಜು

ಪಂಜಾಬ್, ಹರಿಯಾಣ, ದೆಹಲಿ ಮತ್ತು ಉತ್ತರ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಶೀತ ದಿನದ ಪರಿಸ್ಥಿತಿಗಳನ್ನು ಮುನ್ಸೂಚಿಸಲಾಗಿದೆ. ಉತ್ತರ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ದಟ್ಟವಾದ ಮಂಜು ನಿರೀಕ್ಷಿಸಲಾಗಿದೆ. ಪಂಜಾಬ್, ಹರಿಯಾಣ, ದೆಹಲಿ, ಬಿಹಾರ ಮತ್ತು ಸಿಕ್ಕಿಂನ ಪ್ರತ್ಯೇಕ ಸ್ಥಳಗಳಲ್ಲಿ ದಟ್ಟವಾದ ಮಂಜು ಇರುವ ಸಾಧ್ಯತೆಯಿದೆ.

ಅಕಾಲಿಕ ಮಳೆಗೆ ಬೆಳೆ ಹಾನಿ

ಇತ್ತ ಮೈಸೂರು ಭಾಗದಲ್ಲಿ ಶುಷ್ಕ ಹಮಾಮಾನದ ಜೊತೆ ಚಳಿ ಸಹ ಇರಲಿದೆ. ಬೆಳಗ್ಗೆ ಬೀಳುವ ಮಂಜು ಬೆಳೆಗಳ ಮೇಲೆ ಪರಿಣಾಮ ಬೀರುತ್ತಿದ್ದು, ಕಡಲೆ, ಜೋಳ ಹಳದಿ ರೋಗಕ್ಕೆ ತುತ್ತಾಗುವ ಆತಂಕ ಎದುರಾಗಿದೆ. ಮತ್ತೊಂದೆಡೆ ಕೊರೋನಾ, ಓಮೈಕ್ರಾನ್ (Corona Virus And Omicron Variant) ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಕಾರಣ ಸಣ್ಣ ನೆಗಡಿಗೂ ಜನರು ಹೆದರುವಂತಾಗಿದೆ.

ಉತ್ತರ ಕರ್ನಾಟಕದ (North Karnataka) ಎಲ್ಲ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಗಡಿ ದಾಟುವ ಮೂಲಕ ಬೇಸಿಗೆ (Summer) ಆರಂಭದ ಸುಳಿವು ನೀಡುತ್ತಿದೆ. ಈ ಬಾರಿ ನವೆಂಬರ್ ಮತ್ತು ಡಿಸೆಂಬರ್ ನಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ವಾತಾವರಣದಲ್ಲಿ ವೈಪರೀತ್ಯ ಉಂಟಾಗಿದೆ.

ರಾಜ್ಯದ ಜಲಾಶಯಗಳು ಭರ್ತಿ

ಇಂದು ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ. ಇನ್ನೂ 3 ದಿನ ಕರ್ನಾಟಕದ ಉತ್ತರ ಒಳನಾಡು(NIK) ಮತ್ತು ದಕ್ಷಿಣ ಒಳನಾಡಿನಲ್ಲಿ(SIK) ಮಳೆಯಾಗಲಿದೆ. ಅದರಲ್ಲೂ ಇಂದು ಮತ್ತು ನಾಳೆ ಸಿಲಿಕಾನ್​ ಸಿಟಿ ಬೆಂಗಳೂರು(Bengaluru) ಸೇರಿದಂತೆ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು IMD ಹೇಳಿದೆ.

ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಬಳ್ಳಾಪುರ, ರಾಯಚೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರದಲ್ಲಿಯೂ ಮಳೆಯ(Rainfall) ಪ್ರಮಾಣ ಹೆಚ್ಚಾಗಲಿದೆ ಎಂದು ತಿಳಿದು ಬಂದಿದೆ. ಅಕಾಲಿಕ ಮಳೆಗೆ ರಾಜ್ಯದ ಪ್ರಮುಖ ಜಲಾಶಯಗಳು ಬಹುತೇಕ ಭರ್ತಿಯಾಗಿವೆ.
Published by:Mahmadrafik K
First published: