Karnataka Weather Report; ರಾಜ್ಯದಲ್ಲಿ ಮೋಡ ಕವಿದ ವಾತಾವರಣ; ತಮಿಳುನಾಡಿನಲ್ಲಿ ಜ.19ರವರೆಗೆ ಮಳೆಯ ಅಲರ್ಟ್

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ (Cloudy Weather) ವಾತಾವರಣ ನಿರ್ಮಾಣವಾಗುತ್ತಿದ್ದು, ದಿನವಿಡೀ ಚಳಿಯ ವಾತಾವರಣ (Cold Weather) ಇರಲಿದೆ. ಕಳೆದ ನಾಲ್ಕೈದು ದಿನಗಳಿಂದ ಬದಲಾಗುತ್ತಿರುವ ಹವಾಮಾನದಿಂದ ಜನರು ಶೀತ ಮತ್ತು ಕೆಮ್ಮು ಸಂಬಂಧಿತ ರೋಗಕ್ಕೆ ತುತ್ತಾಗುತ್ತಿದ್ದಾರೆ.

ಸಾಂಧರ್ಭಿಕ ಚಿತ್ರ

ಸಾಂಧರ್ಭಿಕ ಚಿತ್ರ

  • Share this:
Karnataka Weather Report: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ (Cloudy Weather) ವಾತಾವರಣ ನಿರ್ಮಾಣವಾಗುತ್ತಿದ್ದು, ದಿನವಿಡೀ ಚಳಿಯ ವಾತಾವರಣ (Cold Weather) ಇರಲಿದೆ. ಕಳೆದ ನಾಲ್ಕೈದು ದಿನಗಳಿಂದ ಬದಲಾಗುತ್ತಿರುವ ಹವಾಮಾನದಿಂದ ಜನರು ಶೀತ ಮತ್ತು ಕೆಮ್ಮು ಸಂಬಂಧಿತ ರೋಗಕ್ಕೆ ತುತ್ತಾಗುತ್ತಿದ್ದಾರೆ. ಈ ನಡುವೆ ದಕ್ಷಿಣ ಕರ್ನಾಟಕ (South Karnataka) ಮತ್ತು ಒಳನಾಡು ಭಾಗಗಳಲ್ಲಿ ದಟ್ಟವಾದ ಮಂಜು ಆವರಿಸಲಿದೆ. ಚಳಿಯಲ್ಲಿ ಯಾವುದೇ ವ್ಯತ್ಯಾಸ ಕಾಣಿಸುತ್ತಿಲ್ಲ.  ಇನ್ನೂ ಕರಾವಳಿ ಭಾಗದಲ್ಲಿ  ಗರಿಷ್ಠ  30 ರಿಂದ  31 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ಇಂದು ಬೆಂಗಳೂರಿನಲ್ಲಿ (Bengaluru Weather) ಗರಿಷ್ಠ 27 ಮತ್ತು ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

ರಾಜ್ಯದ ಜಿಲ್ಲಾವಾರು ಹವಾಮಾನ ವರದಿ (ಗರಿಷ್ಠ ಮತ್ತು ಕನಿಷ್ಠ ಡಿಗ್ರಿ ಸೆಲ್ಸಿಯಸ್ ಗಳಲ್ಲಿ)

ಬೆಂಗಳೂರು 27-16, ಮೈಸೂರು 29-17, ಚಾಮರಾಜನಗರ 29-17, ರಾಮನಗರ 29-17, ಮಂಡ್ಯ 28-17, ಬೆಂಗಳೂರು ಗ್ರಾಮಾಂತರ 27-16, ಚಿಕ್ಕಬಳ್ಳಾಪುರ 26-14, ಕೋಲಾರ 27-16, ಹಾಸನ 28-16, ಚಿಕ್ಕಮಗಳೂರು 28-14, ದಾವಣಗೆರೆ 26-21, ಶಿವಮೊಗ್ಗ 31-17, ಕೊಡಗು 29-16, ತುಮಕೂರು 28-16, ಉಡುಪಿ 33-22

ಮಂಗಳೂರು 32-23, ಉತ್ತರ ಕನ್ನಡ 33-18, ಧಾರವಾಡ 30-17, ಹಾವೇರಿ 31-17, ಹುಬ್ಬಳ್ಳಿ 31-18, ಬೆಳಗಾವಿ 30-17, ಗದಗ 30-17, ಕೊಪ್ಪಳ 30-18, ವಿಜಯಪುರ 31-17, ಬಾಗಲಕೋಟ 31-18, ಕಲಬುರಗಿ 31-17, ಬೀದರ್ 27-18, ಯಾದಗಿರಿ 28-15, ರಾಯಚೂರ 30-18, ಬಳ್ಳಾರಿ 30-18

ಇದನ್ನೂ ಓದಿ:  ಜ.25ರ ವೇಳೆಗೆ ರಾಜ್ಯದಲ್ಲಿ Corona ಸ್ಫೋಟ ಸಾಧ್ಯತೆ: ಶುಕ್ರವಾರದವರೆಗೆ ಕಾದು ನೋಡಲು ಮುಂದಾದ ಸರ್ಕಾರ

ತಮಿಳುನಾಡಿನಲ್ಲಿ ಮುಂದಿನ ಎರಡು ದಿನ ಮಳೆ

ಚೆನ್ನೈ ಮತ್ತು ತಮಿಳುನಾಡಿನ ಕೆಲವು ಭಾಗಗಳಲ್ಲಿ ಸೋಮವಾರ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಜನವರಿ 19 ರವರೆಗೆ ಮಳೆ ಮುಂದುವರಿಯಲಿದೆ. ಚೆನ್ನೈ ನೆರೆಯ ಜಿಲ್ಲೆಗಳಲ್ಲಿಯೂ ಹಗುರವಾದ ಮಳೆಯಾಗುವ ನಿರೀಕ್ಷೆಗಳಿವೆ. ತಿರುವಳ್ಳೂರು ಜಿಲ್ಲೆಯ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು IMD ಅಧಿಕಾರಿಗಳು ತಿಳಿಸಿದ್ದಾರೆ.

ತಿರುವಳ್ಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರವು ತಿಳಿಸಿದೆ. ಚೆನ್ನೈ, ಚೆಂಗಲ್ಪಟ್ಟು, ರಾಣಿಪೇಟ್, ಕಾಂಚೀಪುರಂ, ವೆಲ್ಲೂರು, ಕಡಲೂರು, ವಿಲ್ಲುಪುರಂ, ತಿರುವರೂರ್, ತಂಜಾವೂರು, ನಾಗಪಟ್ಟಣಂ, ಮೈಲಾಡುತುರೈ ಮತ್ತು ತಮಿಳುನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಮುಂದಿನ ಒಂದು ಅಥವಾ ಎರಡು ಗಂಟೆಗಳಲ್ಲಿ ಪುದುಚೇರಿ ಮತ್ತು ಕಾರೈಕಲ್ ಪ್ರದೇಶಗಳಲ್ಲಿ ಮಳೆಯಾಗಲಿದೆ.

ಇದನ್ನೂ ಓದಿ:  Belagavi: ಸಿಬ್ಬಂದಿ ಬೇಜವಾಬ್ದಾರಿಯಿಂದಲೇ ಮೂರು ಮಕ್ಕಳ ದಾರುಣ ಸಾವು.. ಇಬ್ಬರು ಅಧಿಕಾರಿಗಳು ಸಸ್ಪೆಂಡ್​

ಈ ರಾಜ್ಯಗಳಲ್ಲಿ ದಟ್ಟವಾದ ಮಂಜು

ಪಂಜಾಬ್, ಹರಿಯಾಣ, ದೆಹಲಿ ಮತ್ತು ಉತ್ತರ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಶೀತ ದಿನದ ಪರಿಸ್ಥಿತಿಗಳನ್ನು ಮುನ್ಸೂಚಿಸಲಾಗಿದೆ. ಉತ್ತರ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ದಟ್ಟವಾದ ಮಂಜು ನಿರೀಕ್ಷಿಸಲಾಗಿದೆ. ಪಂಜಾಬ್, ಹರಿಯಾಣ, ದೆಹಲಿ, ಬಿಹಾರ ಮತ್ತು ಸಿಕ್ಕಿಂನ ಪ್ರತ್ಯೇಕ ಸ್ಥಳಗಳಲ್ಲಿ ದಟ್ಟವಾದ ಮಂಜು ಇರುವ ಸಾಧ್ಯತೆಯಿದೆ.

ಅಕಾಲಿಕ ಮಳೆಗೆ ಬೆಳೆ ಹಾನಿ

ಇತ್ತ ಮೈಸೂರು ಭಾಗದಲ್ಲಿ ಶುಷ್ಕ ಹಮಾಮಾನದ ಜೊತೆ ಚಳಿ ಸಹ ಇರಲಿದೆ. ಬೆಳಗ್ಗೆ ಬೀಳುವ ಮಂಜು ಬೆಳೆಗಳ ಮೇಲೆ ಪರಿಣಾಮ ಬೀರುತ್ತಿದ್ದು, ಕಡಲೆ, ಜೋಳ ಹಳದಿ ರೋಗಕ್ಕೆ ತುತ್ತಾಗುವ ಆತಂಕ ಎದುರಾಗಿದೆ. ಮತ್ತೊಂದೆಡೆ ಕೊರೋನಾ, ಓಮೈಕ್ರಾನ್ (Corona Virus And Omicron Variant) ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಕಾರಣ ಸಣ್ಣ ನೆಗಡಿಗೂ ಜನರು ಹೆದರುವಂತಾಗಿದೆ.

ಉತ್ತರ ಕರ್ನಾಟಕದ (North Karnataka) ಎಲ್ಲ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಗಡಿ ದಾಟುವ ಮೂಲಕ ಬೇಸಿಗೆ (Summer) ಆರಂಭದ ಸುಳಿವು ನೀಡುತ್ತಿದೆ. ಈ ಬಾರಿ ನವೆಂಬರ್ ಮತ್ತು ಡಿಸೆಂಬರ್ ನಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ವಾತಾವರಣದಲ್ಲಿ ವೈಪರೀತ್ಯ ಉಂಟಾಗಿದೆ.

ರಾಜ್ಯದ ಜಲಾಶಯಗಳು ಭರ್ತಿ

ಇಂದು ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ. ಇನ್ನೂ 3 ದಿನ ಕರ್ನಾಟಕದ ಉತ್ತರ ಒಳನಾಡು(NIK) ಮತ್ತು ದಕ್ಷಿಣ ಒಳನಾಡಿನಲ್ಲಿ(SIK) ಮಳೆಯಾಗಲಿದೆ. ಅದರಲ್ಲೂ ಇಂದು ಮತ್ತು ನಾಳೆ ಸಿಲಿಕಾನ್​ ಸಿಟಿ ಬೆಂಗಳೂರು(Bengaluru) ಸೇರಿದಂತೆ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು IMD ಹೇಳಿದೆ.

ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಬಳ್ಳಾಪುರ, ರಾಯಚೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರದಲ್ಲಿಯೂ ಮಳೆಯ(Rainfall) ಪ್ರಮಾಣ ಹೆಚ್ಚಾಗಲಿದೆ ಎಂದು ತಿಳಿದು ಬಂದಿದೆ. ಅಕಾಲಿಕ ಮಳೆಗೆ ರಾಜ್ಯದ ಪ್ರಮುಖ ಜಲಾಶಯಗಳು ಬಹುತೇಕ ಭರ್ತಿಯಾಗಿವೆ.
Published by:Mahmadrafik K
First published: