Karnataka Weather Report: ಚಳಿ ಜೊತೆ ಆರಂಭವಾದ ಶೀತ ಗಾಳಿ: ಮಧ್ಯಾಹ್ನವಾದ್ರೂ ಕಡಿಮೆಯಾಗದ ನಡುಗುವಿಕೆ

ರಾಜ್ಯದಲ್ಲಿ ಚಳಿ (Winter) ಆರಂಭವಾಗಿದ್ದು, ಉತ್ತರ ಕರ್ನಾಟಕ (North Karnataka) ಭಾಗದಲ್ಲಿ ಶೀತಗಾಳಿ (Cold wave) ಸಹ ಆರಂಭಗೊಂಡಿದೆ. ಸಂಜೆಯಾಗುತ್ತಲೇ ಆರಂಭವಾಗುವ ಚಳಿಯಿಂದ ತಪ್ಪಿಸಿಕೊಳ್ಳಲು ಜನರು ಮನೆ ಸೇರುಕೊಳ್ಳುವಂತಾಗಿದೆ. ಇನ್ನು ಉತ್ತರ ಕರ್ನಾಟಕ ಭಾಗದಲ್ಲಿ ಬೆಳಗ್ಗೆ ಸುಮಾರು 9 ಗಂಟೆವರೆಗೂ ದಟ್ಟವಾದ ಮಂಜು ಆವರಿಸಿ ಮಲೆನಾಡಿನ ಅನುಭವ ನೀಡುತ್ತಿದೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ರಾಜ್ಯದಲ್ಲಿ ಚಳಿ (Winter) ಆರಂಭವಾಗಿದ್ದು, ಉತ್ತರ ಕರ್ನಾಟಕ (North Karnataka) ಭಾಗದಲ್ಲಿ ಶೀತಗಾಳಿ (Cold wave) ಸಹ ಆರಂಭಗೊಂಡಿದೆ. ಸಂಜೆಯಾಗುತ್ತಲೇ ಆರಂಭವಾಗುವ ಚಳಿಯಿಂದ ತಪ್ಪಿಸಿಕೊಳ್ಳಲು ಜನರು ಮನೆ ಸೇರುಕೊಳ್ಳುವಂತಾಗಿದೆ. ಇನ್ನು ಉತ್ತರ ಕರ್ನಾಟಕ ಭಾಗದಲ್ಲಿ ಬೆಳಗ್ಗೆ ಸುಮಾರು 9 ಗಂಟೆವರೆಗೂ ದಟ್ಟವಾದ ಮಂಜು ಆವರಿಸಿ ಮಲೆನಾಡಿನ ಅನುಭವ ನೀಡುತ್ತಿದೆ. ಬಳ್ಳಾರಿ, ಬಾಗಲಕೋಟೆ, ವಿಜಯಪುರ, ಕೊಪ್ಪಳ ಮತ್ತು ಗದಗ ಜಿಲ್ಲೆಗಳಲ್ಲಿ ಆವರಿಸುತ್ತಿರುವ ಮಂಜಿನಿಂದ ರೈತರು ಆತಂಕಕ್ಕೆ ಒಳಗಾಗಿದ್ದು, ಬೆಳೆ ಹಾಳುಗುವ ಭಯದಲ್ಲಿದ್ದಾರೆ. ಮಧ್ಯಾಹ್ನದ ನಂತರ ಎಂದಿನಂತೆ ಸೂರ್ಯದೇವ ಅಬ್ಬರಿಸಲಿದ್ದಾನೆ. ಇನ್ನೂ ರಾಜಧಾನಿ ಬೆಂಗಳೂರಿನಲ್ಲಿ ಇವತ್ತು ಗರಿಷ್ಠ 27 ಮತ್ತು ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

ರಾಜ್ಯದ ಜಿಲ್ಲಾವಾರು ಹವಾಮಾನ ವರದಿ (ಗರಿಷ್ಠ ಮತ್ತು ಕನಿಷ್ಠ ಡಿಗ್ರಿ ಸೆಲ್ಸಿಯಸ್ ಗಳಲ್ಲಿ)

ಬೆಂಗಳೂರು 27-16, ಮೈಸೂರು 29-16, ಚಾಮರಾಜನಗರ 29-16, ರಾಮನಗರ 28-17, ಮಂಡ್ಯ 29-16, ಬೆಂಗಳೂರು ಗ್ರಾಮಾಂತರ 27-16, ಚಿಕ್ಕಬಳ್ಳಾಪುರ 26-14, ಕೋಲಾರ 27-16, ಹಾಸನ 28-14, ಚಿಕ್ಕಮಗಳೂರು 28-14, ದಾವಣಗೆರೆ 31-16, ಶಿವಮೊಗ್ಗ 32-17, ಕೊಡಗು 29-14, ತುಮಕೂರು 28-16, ಉಡುಪಿ 31-22

ಇದನ್ನೂ ಓದಿ: Astrology: ಮಂಗಳವಾರದ ಈ ದಿನ ಈ ರಾಶಿಯವರಿಗೆ ಧನಪ್ರಾಪ್ತಿ; ಇಲ್ಲಿದೆ 12 ರಾಶಿಗಳ ದಿನಭವಿಷ್ಯ

ಮಂಗಳೂರು 31-22, ಉತ್ತರ ಕನ್ನಡ 32-17, ಧಾರವಾಡ 30-16, ಹಾವೇರಿ 31-16, ಹುಬ್ಬಳ್ಳಿ 31-17, ಬೆಳಗಾವಿ 29-16, ಗದಗ 31-16, ಕೊಪ್ಪಳ 31-17. ವಿಜಯಪುರ 31-17, ಬಾಗಲಕೋಟ 32-17, ಕಲಬುರಗಿ 30-17, ಬೀದರ್ 29-16, ಯಾದಗಿರಿ 30-16, ರಾಯಚೂರ 31-17, ಬಳ್ಳಾರಿ 31-17

ಪಶ್ಚಿಮ ಬಂಗಾಳದಲ್ಲಿ ಗುಡುಗು ಸಹಿತ ಮಳೆ

ಪೂರ್ವ ಉತ್ತರ ಪ್ರದೇಶ, ಬಿಹಾರ ಮತ್ತು ಜಾರ್ಖಂಡ್‌ ರಾಜ್ಯಗಳಲ್ಲಿ ಇಂದಿನಿಂದ ಮಳೆಯಾಗುವ ಸಾಧ್ಯತೆಯಿದೆ. ಈ ಮಳೆಯೂ ಮುಂದಿನ ಎರಡು ದಿನ ಸುರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಡಿಸೆಂಬರ್ 31 ರಿಂದ ಮಳೆ ಚಟುವಟಿಕೆಗಳು ಸಂಪೂರ್ಣವಾಗಿ ಕಡಿಮೆಯಾಗಲಿದ್ದು, ಮುಂದಿನ 2 ದಿನಗಳಲ್ಲಿ ಕನಿಷ್ಠ ತಾಪಮಾನ ಹೆಚ್ಚಾಗುವ ನಿರೀಕ್ಷೆಯಿದೆ. ಆದಾಗ್ಯೂ, ದಿನದ ತಾಪಮಾನವು ಎರಡರಿಂದ ಮೂರು ಡಿಗ್ರಿ ಸೆಲ್ಸಿಯಸ್ ಕುಸಿತವನ್ನು ಕಾಣಬಹುದು. ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ಡಿಸೆಂಬರ್ 29 ರಿಂದ ಗುಡುಗು ಸಹಿತ ಮಳೆಯಾಗುತ್ತದೆ.

ಕಾಶ್ಮೀರದಲ್ಲಿ ಮೈನಸ್ ತಾಪಮಾನ

ಕಾಶ್ಮೀರದ ಕೊಕರ್ನಾಗ್ ಮತ್ತು ಪಹಲ್ಗಾಮ್ ಹೊರತುಪಡಿಸಿ ಹೆಚ್ಚಿನ ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಘನೀಕರಿಸುವ ಹಂತಕ್ಕಿಂತ ಕಡಿಮೆಯಾಗಿದೆ. ಶನಿವಾರ ರಾತ್ರಿ ಕಣಿವೆಯಾದ್ಯಂತ ಕನಿಷ್ಠ ತಾಪಮಾನ ಕಡಿಮೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶ್ರೀನಗರದಲ್ಲಿ ಶನಿವಾರ ರಾತ್ರಿ ಕನಿಷ್ಠ ಮೈನಸ್ 1.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ, ಹಿಂದಿನ ರಾತ್ರಿಯ 1.7 ಡಿಗ್ರಿ ಸೆಲ್ಸಿಯಸ್‌ನಿಂದ ಕಡಿಮೆಯಾಗಿದೆ. ಕಣಿವೆಯ ಗೇಟ್‌ವೇ ಪಟ್ಟಣವಾದ ಖಾಜಿಗುಂಡ್‌ನಲ್ಲಿ ಕನಿಷ್ಠ ಮೈನಸ್ 1.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಇದನ್ನೂ ಓದಿ:  Zodiac Signs: 2022ರಲ್ಲಿ ಶತಮೂರ್ಖರಂತೆ ವರ್ತಿಸಲಿದ್ದಾರೆ ಈ ರಾಶಿಯವರು

ಮಾವಿನ ಬೆಳೆಯ ಮೇಲೆ ಅಕಾಲಿಕ ಮಳೆಯ ಎಫೆಕ್ಟ್

ಕರ್ನಾಟಕದ ಕೆಲವು ಭಾಗಗಳಲ್ಲಿ ಇತ್ತೀಚಿನ ಅಕಾಲಿಕ ಮಳೆ ಮತ್ತು ಮೋಡ ಕವಿದ ವಾತಾವರಣವು ಸತತ ಎರಡನೇ ವರ್ಷವೂ ಮಾವಿನ ಬೆಳೆಯ ಮೇಲೆ ಪರಿಣಾಮ ಬೀರಬಹುದು. ಅಕಾಲಿಕ ಮಳೆಯಿಂದಾಗಿ ಹೂ ಬಿಡುವ ಪ್ರಕ್ರಿಯೆಗೂ ಅಡ್ಡಿಯಾಗಿದೆ. ಚಳಿಗಾಲದ ಆರಂಭದ ಹೊರತಾಗಿಯೂ, ಇನ್ನೂ ಅನೇಕ ಭಾಗಗಳಲ್ಲಿ ಮಳೆಯಾಗುತ್ತಿದೆ.

ಇದರಿಂದಾಗಿ ಹೂಬಿಡುವ ಪ್ರಕ್ರಿಯೆಗೆ ಅನುಕೂಲಕರ ಹವಾಮಾನ ಪರಿಸ್ಥಿತಿ ನಿರ್ಮಾಣಗೊಳ್ಳುತ್ತಿಲ್ಲ ಹೂ ಬಿಡುವ ಪ್ರಕಿಯೆಗೆ ಶುಷ್ಕ ಮತ್ತು ಶೀತ ಹವಾಮಾನ ಅಗತ್ಯ. ಆದರೆ ನಿರಂತರ ಸುರಿಯುತ್ತಿರುವ ಮಳೆ ಈ ನೈಸರ್ಗಿಕ ಹೂ ಬಿಡುವ ಪ್ರಕ್ರಿಯೆಗೆ ಅಡ್ಡಿಯುನ್ನುಂಟು ಮಾಡುತ್ತಿದೆ.
Published by:Mahmadrafik K
First published: