Karnataka Weather Report: ರಾಜ್ಯದಲ್ಲಿಂದು ತುಂತುರು ಅಥವಾ ಸಾಧಾರಣ ಮಳೆ: ಬೆಂಗ್ಳೂರಲ್ಲಿ ಮೋಡ ಕವಿದ ವಾತಾವರಣ!

ರಾಜ್ಯದ ಹಲವೆಡೆ ಮಳೆ(Rain)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿ, ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತುಂತುರು ಅಥವಾ ಸಾಧಾರಣ ಮಳೆಯಾಗಲಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ರಾಜ್ಯದ ಹಲವೆಡೆ ಮಳೆ(Rain)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿ, ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತುಂತುರು ಅಥವಾ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಬೆಂಗಳೂರಿ(Bengaluru)ನಲ್ಲಿ ಗರಿಷ್ಟ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಾರವಾರ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.ಇನ್ನು ಮಲೆನಾಡು, ದಕ್ಷಿಣ ಒಳನಾಡು ಭಾಗಗಳಲ್ಲಿ ಚದುರಿದ ರೀತಿ ಹಗುರವಾದ ಮಳೆ(Low Rain)ಯಾಗಲಿದೆ. ಚಳಿಗಾಲ (Winter) ಆರಂಭವಾಗಿರೋದರಿಂದ ಬೆಳಗ್ಗೆ ಮತ್ತು ಸಂಜೆ ತಂಪು ಗಾಳಿ ಹೆಚ್ಚಾಗುವ ಸಾಧ್ಯತೆಗಳಿವೆ. ಇದರ ಜೊತೆಗೆ ಉತ್ತರ ಕರ್ನಾಟಕ (North Karnataka) ಭಾಗದಲ್ಲಿ ದಿನದಿಂದ ದಿನಕ್ಕೆ ಚಳಿಯ ಪ್ರಮಾಣ ಹೆಚ್ಚಾಗುತ್ತಿದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ (Bengaluru Weather Today) ಗರಿಷ್ಠ 28, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

ರಾಜ್ಯದ ಜಿಲ್ಲಾವಾರು ಹವಾಮಾನ ವರದಿ ( ಗರಿಷ್ಠ – ಕನಿಷ್ಠ, ಡಿಗ್ರಿ ಸೆಲ್ಸಿಯಸ್)

ಬೆಂಗಳೂರು: 27-18, ಮಂಗಳೂರು: 32-24, ಶಿವಮೊಗ್ಗ: 31-21, ಬೆಳಗಾವಿ: 30-19,  ಮೈಸೂರು: 29-19, ರಾಮನಗರ: 29-19, ರಾಮನಗರ: 29-19, ಮಂಡ್ಯ: 29-19, ಮಡಿಕೇರಿ: 27-17, ಚಿಕ್ಕಬಳ್ಳಾಪುರ: 27-18, ಕಾರವಾರ: 33-18, ಕೋಲಾರ: 26-18, ಚಿತ್ರದುರ್ಗ: 28-20, ದಾವಣಗೆರೆ: 31-21, ಚಿಕ್ಕಮಗಳೂರು: 28-18, ತುಮಕೂರು: 29-19, ಉಡುಪಿ: 32-24, ಹಾವೇರಿ: 31-21, ಬಳ್ಳಾರಿ: 29-21, ಗದಗ: 30-20, ಕೊಪ್ಪಳ: 30-21, ರಾಯಚೂರು: 31-22, ಯಾದಗಿರಿ: 32-22, ವಿಜಯಪುರ: 27-18, ಬೀದರ್: 28-19, ಕಲಬುರಗಿ: 31-21, ಬಾಗಲಕೋಟೆ: 31-21.

ಇದನ್ನು ಓದಿ : ಧನುರಾಶಿಯವರಿಗೆ ಕಂಕಣ ಭಾಗ್ಯ; ಹೇಗಿರಲಿದೆ 12 ರಾಶಿಗಳ ಈ ದಿನ

ನೆರೆ ರಾಜ್ಯಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ

ಇಂದು ಆಂಧ್ರಪ್ರದೇಶ, ತಮಿಳುನಾಡು ಮತ್ತು ಕೇರಳದಲ್ಲಿ ಅಲ್ಲಲ್ಲಿ ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಲಡಾಖ್ ವ್ಯಾಪ್ತಿಯಲ್ಲಿ ಹಿಮ ಬೀಳುವ ನಿರೀಕ್ಷೆಯಿದೆ. ಅರುಣಾಚಲ ಪ್ರದೇಶ, ಮಣಿಪುರ, ಒಡಿಶಾ, ತೆಲಂಗಾಣ ಮತ್ತು ಲಕ್ಷದ್ವೀಪಗಳ ವಿವಿಧಡೆ ಚದುರಿದ ಮಳೆಯಾಗುವ ಸಂಭವಗಳಿವೆ, ದೇಶದ ಉಳಿದ ಭಾಗಗಳಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನವನ್ನು ಮುಂದುವರಿಯಲಿದೆ. ಅಸ್ಸಾಂ, ಮೇಘಾಲಯ, ಬಿಹಾರ, ಒಡಿಶಾ, ಪಶ್ಚಿಮ ಉತ್ತರ ಪ್ರದೇಶ, ಪಂಜಾಬ್, ಹರಿಯಾಣ ಮತ್ತು ರಾಜಸ್ಥಾನದಲ್ಲಿ ಬೆಳಗಿನ ವೇಳೆ  ಮಧ್ಯಮ ಮಂಜು ಇರಲಿದೆ.

ಪಶ್ಚಿಮ ಬಂಗಾಳದಲ್ಲಿ ಗುಡುಗು ಸಹಿತ ಮಳೆ

ವಾಯುವ್ಯ ಬಂಗಾಳ ಕೊಲ್ಲಿ ಮತ್ತು ಪಶ್ಚಿಮ ಬಂಗಾಳದ ಪಕ್ಕದ ಕರಾವಳಿಯಲ್ಲಿ ವಾಯುಭಾರ ಕುಸಿತವಾಗುತ್ತಿರುವ ಪರಿಣಾಮ ಮಂಗಳವಾರದಿಂದಲೇ ಈಶಾನ್ಯ ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುತ್ತಿರುವ ವರದಿಗಳು ಬರುತ್ತಿವೆ.

ಇದನ್ನು ಓದಿ : ದುಬೈನಿಂದ ಬಂದು ಕೊಲೆಯಾದ, ಬೆತ್ತಲೆ ಮೃತದೇಹ ಪತ್ತೆ; ಅನೈತಿಕ ಸಂಬಂಧಕ್ಕೆ ಕೊಲೆ ಶಂಕೆ

ಲಘು ಹಿಮಪಾತ

ಈ ನಡುವೆ ಉತ್ತರ ಭಾರತದಲ್ಲಿ ಬುಧವಾರ ಮಧ್ಯಾಹ್ನದಿಂದ ವಾತಾವರಣ ಬದಲಾಗಿದ್ದು, ಗುರುವಾರ ರಾತ್ರಿಯೊಳಗೆ ಚದುರಿತ ರೀತಿ ಹಿಮ ಬೀಳಲಿದೆ. ಡಿಸೆಂಬರ್ 9 ರಂದು ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್ ಮತ್ತು ಹಿಮಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ಲಘು ಮಳೆ ಅಥವಾ ಹಿಮಪಾತವಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹೇಳಿದೆ.

ಚಳಿಯ ತೀವ್ರತೆ ಕಡಿಮೆ

ಚಂಡಮಾರುತಗಳ ಪ್ರಭಾವದಿಂದಾಗಿ ಮಳೆಯಾಗುತ್ತಿದ್ದು ಚಳಿಗಾಲ ಇಲ್ಲವೇ ಎಂಬ ಪ್ರಶ್ನೆ ಎದುರಾಗಿದೆ. ಹವಾಮಾನ ಏರುಪೇರು ಹಿನ್ನಲೆಯಲ್ಲಿ ಈ ವರ್ಷ ಚಳಿಯ ತೀವ್ರತೆ ಕಡಿಮೆ ಇರಲಿದೆ ಎಂಬ ಮಾಹಿತಿಯೂ ಇದೆ. ಉತ್ತರ ಭಾರತದ ರಾಜ್ಯಗಳಲ್ಲಿಯೇ ಇನ್ನೂ ಚಳಿಗಾಲ ಆರಂಭವಾಗಿಲ್ಲ. ಡಿಸೆಂಬರ್ 21ರ ತನಕ ಕರ್ನಾಟಕದಲ್ಲಿ ಇದೇ ಮಾದರಿಯ ವಾತಾವರಣ ಇರಲಿದ್ದು, ಬಳಿಕ ಉಷ್ಣಾಂಶದಲ್ಲಿ ಏರಿಕೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.
Published by:Vasudeva M
First published: