Karnataka Weather Report: ರಾಜ್ಯದ ಈ ಭಾಗಗಳಲ್ಲಿ ಮಳೆ ಸಾಧ್ಯತೆ: ಗರಿಷ್ಠ ತಾಪಮಾನ ಏರಿಕೆ

ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಚಳಿಯ (Cold) ಪ್ರಮಾಣ ತಗ್ಗಿದ್ದು, ಸೂರ್ಯನ ಪ್ರಖರತೆ ಹೆಚ್ಚಾಗುತ್ತಿದೆ. ಮಲೆನಾಡು ಮತ್ತು ದಕ್ಷಿಣ ಒಳನಾಡು ಭಾಗಳಲ್ಲಿ ಮಾತ್ರ ಬೆಳಗ್ಗೆ ದಟ್ಟವಾದ ಮಂಜು ಆವರಿಸಿಕೊಂಡ ವಾತಾವರಣ ನಿರ್ಮಾಣವಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Karnataka Weather Report Today: ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಚಳಿಯ (Cold) ಪ್ರಮಾಣ ತಗ್ಗಿದ್ದು, ಸೂರ್ಯನ ಪ್ರಖರತೆ ಹೆಚ್ಚಾಗುತ್ತಿದೆ. ಮಲೆನಾಡು ಮತ್ತು ದಕ್ಷಿಣ ಒಳನಾಡು ಭಾಗಳಲ್ಲಿ ಮಾತ್ರ ಬೆಳಗ್ಗೆ ದಟ್ಟವಾದ ಮಂಜು ಆವರಿಸಿಕೊಂಡ ವಾತಾವರಣ ನಿರ್ಮಾಣವಾಗಿದೆ. ಇನ್ನು ಉತ್ತರ ಕರ್ನಾಟಕದ (North Karnataka) ಎಲ್ಲ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಗಡಿ ದಾಟುವ ಮೂಲಕ ಬೇಸಿಗೆ (Summer) ಆರಂಭದ ಸುಳಿವು ನೀಡುತ್ತಿದೆ. ಈ ಬಾರಿ ನವೆಂಬರ್ ಮತ್ತು ಡಿಸೆಂಬರ್ ನಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ (Unseasonal Rains) ವಾತಾವರಣದಲ್ಲಿ ವೈಪರೀತ್ಯ ಉಂಟಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ (Bengaluru Weather) ಗರಿಷ್ಠ 29 ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

ಇನ್ನು ಬೀದರ್, ಯಾದಗಿರಿ, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳ ಕೆಲವು ಕಡೆ ಚದುರಿದ ರೀತಿಯಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಮಳೆ ರೈತರ ಬೆಳೆಗೆ ಹಾನಿಯುಂಟು ಮಾಡಲಿದೆ. ಇನ್ನೂ ಉತ್ತರ ಕರ್ನಾಟಕದಲ್ಲಿ ಗಾಳಿಯ ವೇಗ ಹೆಚ್ಚಾಗಲು ಆರಂಭವಾಗಿದೆ.

ರಾಜ್ಯದ ಜಿಲ್ಲಾವಾರು ಹವಾಮಾನ ವರದಿ (ಗರಿಷ್ಠ ಮತ್ತು ಕನಿಷ್ಠ ಡಿಗ್ರಿ ಸೆಲ್ಸಿಯಸ್ ಗಳಲ್ಲಿ)

ಬೆಂಗಳೂರು 29-18, ಮೈಸೂರು 31-18, ಚಾಮರಾಜನಗರ 31-18, ರಾಮನಗರ 30-18, ಮಂಡ್ಯ 31-18, ಬೆಂಗಳೂರು ಗ್ರಾಮಾಂತರ 29-18, ಚಿಕ್ಕಬಳ್ಳಾಪುರ 28-16, ಕೋಲಾರ 28-18, ಹಾಸನ 29-15, ಚಿಕ್ಕಮಗಳೂರು 29-14, ದಾವಣಗೆರೆ 32-16, ಶಿವಮೊಗ್ಗ 32-16, ಕೊಡಗು 29-15, ತುಮಕೂರು 30-18, ಉಡುಪಿ 32-25, ಮಂಗಳೂರು 32-24

ಇದನ್ನೂ ಓದಿ:  Chitradurga: ಒನಕೆಯಿಂದ ಹೊಡೆದು ಪತ್ನಿಯನ್ನ ಕೊಲೆಗೈದಿದ್ದ ಪಾಪಿ ಪತಿಯ ಬಂಧನ: ಹತ್ಯೆಗೆ ಕಾರಣವೇನು?

ಉತ್ತರ ಕನ್ನಡ 31-21, ಧಾರವಾಡ 30-13, ಹಾವೇರಿ 32-15, ಹುಬ್ಬಳ್ಳಿ 31-14, ಬೆಳಗಾವಿ 28-12, ಗದಗ 31-15, ಕೊಪ್ಪಳ 31-17, ವಿಜಯಪುರ 31-16, ಬಾಗಲಕೋಟ 32-15, ಕಲಬುರಗಿ 30-17, ಬೀದರ್ 26-17, ಯಾದಗಿರಿ 29-17, ರಾಯಚೂರ 31-19, ಬಳ್ಳಾರಿ 32-19

ಉತ್ತರದ ರಾಜ್ಯಗಳಲ್ಲಿ ಹಳದಿ ಅಲರ್ಟ್

ಪಂಜಾಬ್‌ನ ಪಿಪಾ ರಂಗಿ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಭಾನುವಾರ ಡೈರಿಯ ಮೇಲ್ಛಾವಣಿ ಕುಸಿದು ಇಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಒಡಿಶಾ, ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಛತ್ತೀಸ್‌ಗಢದಲ್ಲಿ ಹವಾಮಾನ ಇಲಾಖೆಯು ಹಳದಿ ಅಲರ್ಟ್ ಘೋಷಿಸಿದ್ದು, ಜನವರಿ 11 ಮತ್ತು 13 ರಂದು ಭಾರೀ ಮಳೆಯಾಗುವ ಎಚ್ಚರಿಕೆ ನೀಡಿದೆ.

ಪಂಜಾಬ್ ಮತ್ತು ಹರಿಯಾಣದ ಹಲವಾರು ಭಾಗಗಳಲ್ಲಿ ಭಾರೀ ಮಳೆ ಸುರಿದಿದೆ, ಆದರೆ ಕನಿಷ್ಠ ತಾಪಮಾನವು ಎರಡು ರಾಜ್ಯಗಳಲ್ಲಿ ಅನೇಕ ಸ್ಥಳಗಳಲ್ಲಿ ಸಾಮಾನ್ಯ ಮಿತಿಯನ್ನು ಮೀರಿದೆ.

ಈ ಭಾಗದಲ್ಲಿ ಮಳೆ

ಚಂಡೀಗಢ, ಕಪುರ್ತಲ, ಅಮೃತಸರ, ಲೂಧಿಯಾನ, ಪಟಿಯಾಲ, ಫಿರೋಜ್‌ಪುರ, ಬಟಿಂಡಾ, ಹೋಶಿಯಾರ್‌ಪುರ, ರೂಪನಗರ್, ಮೊಹಾಲಿ, ಗುರುದಾಸ್‌ಪುರ, ಅಂಬಾಲಾ, ಹಿಸಾರ್, ಪಂಚಕುಲ, ರೋಹ್ಟಕ್, ಗುರುಗ್ರಾಮ್, ಸಿರ್ಸಾ ಮತ್ತು ಯಮುನಾನಗರ ಭಾಗದಲ್ಲಿ ಮಳೆಯಾಗಲಿದೆ.

ಇದನ್ನೂ ಓದಿ:  3ನೇ ಬಾರಿ Lockdown ಆದ್ರೆ ಕಸುಬನ್ನೇ ಬಿಟ್ಟು ಬಿಡ್ತೀವಿ.. ಮೀನುಗಾರರ ನೋವಿನ ನುಡಿ..!

ಓಡಿಶಾದಲ್ಲಿ ಆರೆಂಜ್ ಅಲರ್ಟ್

ಒಡಿಶಾದಲ್ಲಿ ಜನವರಿ 11 ಮತ್ತು 12 ರಂದು ಭಾರೀ ಮಳೆಯಾಗುವ ಬಗ್ಗೆ ಎಚ್ಚರಿಕೆ ನೀಡಿದೆ. ಒಡಿಶಾ, ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಛತ್ತೀಸ್‌ಗಢದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಆರೆಂಟ್ ಅಲರ್ಟ್ ನೀಡಿದೆ.

ಅಕಾಲಿಕ ಮಳೆಗೆ ರಾಜ್ಯದ ಜಲಾಶಯಗಳು ಭರ್ತಿ

ರಾಜ್ಯದಲ್ಲಿ ಹಲವು ದಿನಗಳಿಂದ ಸುರಿಯುತ್ತಿದ್ದ ಅಕಾಲಿಕ ಮಳೆ (Unseasonal Rain)ಸದ್ಯಕ್ಕೆ ಕೊಂಚ ಬಿಡುವು ಕೊಟ್ಟಿದೆ. ಸದ್ಯ ರಾಜ್ಯದಲ್ಲಿ ಚಳಿಯ (Winter) ಪ್ರಮಾಣ ಹೆಚ್ಚಾಗಿದ್ದು, ಜನರನ್ನು ನಡುಗಿಸುತ್ತಿದೆ.   ಮುಂಗಾರು(Monsoon) ಮುಗಿದರೂ ಸಹ ಎಡೆಬಿಡದೆ ಸುರಿದ ಅಕಾಲಿಕ ಮಳೆಯಿಂದಾಗಿ ಎಲ್ಲೆಡೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು.

ಬೆಂಗಳೂರಿಗರ ಜೀವನವಂತೂ ತೀರಾ ಶೋಚನೀಯವಾಗಿತ್ತು. ಸದ್ಯ ಮಳೆ ಸ್ವಲ್ಪ ಬ್ರೇಕ್(Break) ಕೊಟ್ಟಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಅಕಾಲಿಕ ಮಳೆಗೆ ರಾಜ್ಯದ ಪ್ರಮುಖ ಜಲಾಶಯಗಳು ಬಹುತೇಕ ಭರ್ತಿಯಾಗಿವೆ.
Published by:Mahmadrafik K
First published: