Karnataka Weather Report: ಬೆಳಗ್ಗೆ ಚಳಿ ಮಧ್ಯಾಹ್ನ ಬಿಸಿಲು; ಬಯಲು ಸೀಮೆಯಲ್ಲಿ ಮೋಡ ಕವಿದ ವಾತಾವರಣ

ದಕ್ಷಿಣ ಒಳನಾಡಿನಲ್ಲಿ ಬೆಳಗ್ಗೆ ಚಳಿ ಮತ್ತು ಮಧ್ಯಾಹ್ನದ ವೇಳೆ ಶುಷ್ಕ ಹಮಾಮಾನ ಇರಲಿದೆ. ಇತ್ತ ಕರಾವಳಿ (Coastal) ಭಾಗದಲ್ಲಿ ಒಣ ಹವೆ ಇರಲಿದೆ. ಉತ್ತರ ಕರ್ನಾಟಕ (North Karnataka) ಜಿಲ್ಲೆಗಳಲ್ಲಿ ಶೀತಗಾಳಿ ಜೊತೆ ದಟ್ಟವಾದ ಮಂಜು ಆವರಿಸಲಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Karnataka Weather Report Today: ರಾಜ್ಯದಲ್ಲಿ ಅಕಾಲಿಕ ಮಳೆ (Unseasonal Rainfall) ಬ್ರೇಕ್ ನೀಡಿದ್ರೆ, ಚಳಿ (Winter) ಜನರನ್ನು ಮನೆಯಲ್ಲಿ ಕುಳಿತುಕೊಳ್ಳುವಂತೆ ಮಾಡಿದೆ. ಬೆಳಗಿನ ಜಾವ ಮತ್ತು ಸಂಜೆಯಾಗುತ್ತಲೇ ಶೀತದ ಸುಳಿಗಾಳಿ ಜನರು ಹೊರಗಡೆ ಹೋಗದಂತೆ ಮಾಡುತ್ತಿದೆ. ಮತ್ತೊಂದಡೆ ಕೊರೊನಾ, ಓಮೈಕ್ರಾನ್ (Corona And Omicron) ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಕಾರಣ ಸಣ್ಣ ನೆಗಡಿಗೂ ಜನರು ಹೆದರುವಂತಾಗಿದೆ. ದಕ್ಷಿಣ ಒಳನಾಡಿನಲ್ಲಿ ಬೆಳಗ್ಗೆ ಚಳಿ ಮತ್ತು ಮಧ್ಯಾಹ್ನದ ವೇಳೆ ಶುಷ್ಕ ಹಮಾಮಾನ ಇರಲಿದೆ. ಇತ್ತ ಕರಾವಳಿ (Coastal) ಭಾಗದಲ್ಲಿ ಒಣ ಹವೆ ಇರಲಿದೆ. ಉತ್ತರ ಕರ್ನಾಟಕ (North Karnataka) ಜಿಲ್ಲೆಗಳಲ್ಲಿ ಶೀತಗಾಳಿ ಜೊತೆ ದಟ್ಟವಾದ ಮಂಜು ಆವರಿಸಲಿದೆ.

ರಾಜ್ಯದ ಜಿಲ್ಲಾವಾರು ಹವಾಮಾನ ವರದಿ (ಗರಿಷ್ಠ ಮತ್ತು ಕನಿಷ್ಠ – ಡಿಗ್ರಿ ಸೆಲ್ಸಿಯಸ್ ಗಳಲ್ಲಿ)

ಬೆಂಗಳೂರು 28-14, ಮೈಸೂರು 29-16, ಚಾಮರಾಜನಗರ 29-16, ರಾಮನಗರ 29-16, ಮಂಡ್ಯ 29-16, ಬೆಂಗಳೂರು ಗ್ರಾಮಾಂತರ 28-14, ಚಿಕ್ಕಬಳ್ಳಾಪುರ 26-12, ಕೋಲಾರ 27-14, ಹಾಸನ 29-14, ಚಿಕ್ಕಮಗಳೂರು 29-14, ದಾವಣಗೆರೆ 31-16, ಶಿವಮೊಗ್ಗ 32-16, ಕೊಡಗು 29-15, ತುಮಕೂರು 28-14, ಉಡುಪಿ 32-22

ಇದನ್ನೂ ಓದಿ:  Karnataka Weekend Curfew: ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿ: ನೈಟ್ ಕರ್ಫ್ಯೂ ವಿಸ್ತರಣೆ, ಶಾಲೆಗಳು ಬಂದ್​

ಮಂಗಳೂರು 32-24, ಉತ್ತರ ಕನ್ನಡ 32-21, ಧಾರವಾಡ 30-15, ಹಾವೇರಿ 31-15, ಹುಬ್ಬಳ್ಳಿ 31-16, ಬೆಳಗಾವಿ 29-15, ಗದಗ 30-16, ಕೊಪ್ಪಳ 29-16, ವಿಜಯಪುರ 30-17, ಬಾಗಲಕೋಟ 31-16, ಕಲಬುರಗಿ 30-16, ಬೀದರ್ 28-16, ಯಾದಗಿರಿ 30-17, ರಾಯಚೂರ 30-16, ಬಳ್ಳಾರಿ 30-16

ಗಡಿ ಜಿಲ್ಲೆ ಬೀದರ್ ನಲ್ಲಿ ದಾಖಲೆ ಚಳಿ

.ಗಡಿ ನಾಡು ಬೀದರ್ ನಲ್ಲಿ ಕಳೆದೊಂದು ವಾರಗಳಿಂದ ಉಷ್ಣಾಂಶ ಕನಿಷ್ಠ ಮಟ್ಟಕ್ಕೆ ಕುಸಿದಿದ್ದು ಮೈಕೊರೆಯುವ ಚಳಿಗೆ ಜನರು ಗಡಗಡ ನಡುಗುತ್ತಿದ್ದಾರೆ. ಬೀದರ್ ಜಿಲ್ಲೆಯಲ್ಲಿ ತಣ್ಣನೆಯ ವಾತಾವರಣ ಇರೋದರಿಂದ ಜನ್ರು ಹಾಸಿಗೆಯಿಂದ ಮೇಲೇಳಲು ಕಷ್ಟ ಪಡುತ್ತಿದ್ದಾರೆ. ಬೆಳಿಗ್ಗೆ ಹತ್ತು ಹನ್ನೊಂದು ಗಂಟೆಯಾದರೂ ಜನ್ರನ್ನು ವಿಪರೀತ ಚಳಿ ಕಾಡುತ್ತಿದ್ದು ಗಡಿ ಜಿಲ್ಲೆ ಬೀದರ್ ನಲ್ಲಿ ದಾಖಲೆ ಪ್ರಮಾಣದಲ್ಲಿ ಕುಸಿತ ಕಂಡಿದೆ

ಲಘು ಮಳೆಯೊಂದಿಗೆ ಹಿಮಪಾತ

ಹವಾಮಾನ ಇಲಾಖೆ (IMD) ಪ್ರಕಾರ ವಾಯುವ್ಯ ಭಾರತದ ಬಯಲು ಪ್ರದೇಶದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ಅದೇ ಸಮಯದಲ್ಲಿ, ಪಶ್ಚಿಮ ಹಿಮಾಲಯ ಪ್ರದೇಶಗಳಲ್ಲಿ ಲಘು ಮಳೆಯೊಂದಿಗೆ ಹಿಮಪಾತದಿಂದಾಗಿ ತಾಪಮಾನದಲ್ಲಿ ಗಣನೀಯ ಇಳಿಕೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ:  ಮೋದಿ Rally ಮಾಡಬಹುದು, ಆದರೆ ನಾವು ಪಾದಯಾತ್ರೆ ಮಾಡಿದ್ರೆ ಕೊರೊನಾ ಬರುತ್ತಾ? Siddaramaiah ಕಿಡಿ

ಪಂಜಾಬ್, ಉತ್ತರ ಪ್ರದೇಶದಲ್ಲಿ ದಟ್ಟವಾದ ಮಂಜು

ಹವಾಮಾನ ಮುನ್ಸೂಚನೆ ಸಂಸ್ಥೆ ಸ್ಕೈಮೆಟ್ ಪ್ರಕಾರ, ಬಂಗಾಳಕೊಲ್ಲಿಯ ನೈಋತ್ಯದಲ್ಲಿ ಚಂಡಮಾರುತದ ಪರಿಚಲನೆ ಉಳಿದಿದೆ. ಅದೇ ಸಮಯದಲ್ಲಿ, ಜಮ್ಮು ಮತ್ತು ಕಾಶ್ಮೀರದ ಮೇಲೆ ದುರ್ಬಲವಾದ ಪಾಶ್ಚಿಮಾತ್ಯ ಅಡಚಣೆಯು ಉಳಿದಿದೆ. ಪಶ್ಚಿಮದ ಅಡಚಣೆಯು ಬಲಗೊಳ್ಳಬಹುದು ಮತ್ತು ಪಶ್ಚಿಮ ಹಿಮಾಲಯವನ್ನು ತಲುಪಬಹುದು.

ವಾಡಿಕೆಗಿಂತ ಹೆಚ್ಚಿನ ಮಳೆ

ಭಾರತೀಯ ಹವಾಮಾನ ಇಲಾಖೆ (IMD), ಕರಾವಳಿ ಆಂಧ್ರಪ್ರದೇಶ, ರಾಯಲಸೀಮಾ, ಕರ್ನಾಟಕದ ದಕ್ಷಿಣ ಒಳನಾಡು, ಪುದುಚೇರಿ ಮತ್ತು ಕೇರಳದಲ್ಲಿ ಡಿಸೆಂಬರ್‌ನಿಂದ ಫೆಬ್ರುವರಿ ವರೆಗೆ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ರಾಜ್ಯದ ಜಲಾಶಯಗಳು ಭರ್ತಿ

ರಾಜ್ಯದಲ್ಲಿ ಹಲವು ದಿನಗಳಿಂದ ಸುರಿಯುತ್ತಿದ್ದ ಅಕಾಲಿಕ ಮಳೆ(Unseasonal Rain) ಸದ್ಯಕ್ಕೆ ಕೊಂಚ ಬಿಡುವು ಕೊಟ್ಟಿದೆ. ಸದ್ಯ ರಾಜ್ಯದಲ್ಲಿ ಚಳಿಯ(Winter) ಪ್ರಮಾಣ ಹೆಚ್ಚಾಗಿದ್ದು, ಜನರನ್ನು ನಡುಗಿಸುತ್ತಿದೆ. ಮುಂಗಾರು(Monsoon) ಮುಗಿದರೂ ಸಹ ಎಡೆಬಿಡದೆ ಸುರಿದ ಅಕಾಲಿಕ ಮಳೆಯಿಂದಾಗಿ ಎಲ್ಲೆಡೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಬೆಂಗಳೂರಿಗರ ಜೀವನವಂತೂ ತೀರಾ ಶೋಚನೀಯವಾಗಿತ್ತು. ಸದ್ಯ ಮಳೆ ಸ್ವಲ್ಪ ಬ್ರೇಕ್(Break) ಕೊಟ್ಟಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ.
Published by:Mahmadrafik K
First published: