Karnataka Weather Report Today: ಮೋಡ ಕವಿದ ವಾತಾವರಣ: ಈ ರಾಜ್ಯಗಳಲ್ಲಿ ಮಳೆ ಸಾಧ್ಯತೆ

Karnataka Weather Report: ಕಳೆದ 15 ದಿನಗಳಿಂದ ಹೆಚ್ಚಾಗಿದ್ದ ಚಳಿಯ (Winter) ಪ್ರಮಾಣ ಕೊಂಚ ಇಳಿಕೆಯಾಗುತ್ತಿದೆ. ಚಳಿ ತಗ್ಗಿದ್ರೂ ದಟ್ಟವಾದ ಮಂಜು ವಾತಾವರಣ ಮುಂದುವರಿದಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Karnataka Weather Report: ಕಳೆದ 15 ದಿನಗಳಿಂದ ಹೆಚ್ಚಾಗಿದ್ದ ಚಳಿಯ (Winter) ಪ್ರಮಾಣ ಕೊಂಚ ಇಳಿಕೆಯಾಗುತ್ತಿದೆ. ಚಳಿ ತಗ್ಗಿದ್ರೂ ದಟ್ಟವಾದ ಮಂಜು ವಾತಾವರಣ ಮುಂದುವರಿದಿದೆ. ಉತ್ತರ ಕರ್ನಾಟಕ (North Karnataka) ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ (Cloudy Weather) ಇರಲಿದೆ. ಶನಿವಾರ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗಿರುವ (Rainfall) ವರದಿಗಳು ಬಂದಿವೆ. ರಾಜಧಾನಿ ಬೆಂಗಳೂರಿನಲ್ಲಿ (Bengaluru Weather) ಗರಿಷ್ಠ 28 ಮತ್ತು ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ಮಧ್ಯಾಹ್ನದ ವೇಳೆಗೆ ಸೂರ್ಯನ ಪ್ರಖರತೆ ಇರಲಿದೆ.

ರಾಜ್ಯದ ಜಿಲ್ಲಾವಾರು ಹವಾಮಾನ ವರದಿ (ಗರಿಷ್ಠ ಮತ್ತು ಕನಿಷ್ಠ ಡಿಗ್ರಿ ಸೆಲ್ಸಿಯಸ್ ಗಳಲ್ಲಿ)

ಬೆಂಗಳೂರು 28-17, ಮೈಸೂರು 29-18, ಚಾಮರಾಜನಗರ 29-18, ರಾಮನಗರ 29-19, ಮಂಡ್ಯ 29-19, ಬೆಂಗಳೂರು ಗ್ರಾಮಾಂತರ 28-17, ಚಿಕ್ಕಬಳ್ಳಾಪುರ 27-16, ಕೋಲಾರ 28-17, ಹಾಸನ 29-17, ಚಿಕ್ಕಮಗಳೂರು 29-16, ದಾವಣಗೆರೆ 31-17, ಶಿವಮೊಗ್ಗ 32-17, ಕೊಡಗು 28-16, ತುಮಕೂರು 29-18, ಉಡುಪಿ 32-22

ಇದನ್ನೂ ಓದಿ:  Crime Case: ದೇಶದಲ್ಲಿ ಬೆಂಗಳೂರು ಸೇಫ್: ಅಪರಾಧ ಪ್ರಕರಣಗಳ ಸಂಖ್ಯೆ ಇಳಿಕೆ

ಮಂಗಳೂರು 31-23, ಉತ್ತರ ಕನ್ನಡ 31-16, ಧಾರವಾಡ 30-16, ಹಾವೇರಿ 32-17, ಹುಬ್ಬಳ್ಳಿ 31-16, ಬೆಳಗಾವಿ 29-15, ಗದಗ 31-17, ಕೊಪ್ಪಳ 31-18, ವಿಜಯಪುರ 30-18, ಬಾಗಲಕೋಟ 31-18, ಕಲಬುರಗಿ 29-19, ಬೀದರ್ 27-17, ಯಾದಗಿರಿ 30-19, ರಾಯಚೂರ 30-20, ಬಳ್ಳಾರಿ 31-20

ಹಿಮಪಾತ ಸಾಧ್ಯತೆ

ವಾಮಾನ ಇಲಾಖೆ (IMD) ಪ್ರಕಾರ, ಮುಂದಿನ 3-4 ದಿನಗಳವರೆಗೆ ಉತ್ತರ ಭಾರತದಲ್ಲಿ ಶೀತದ ಅಲೆ ಪ್ರಮಾಣ ತಗ್ಗಲಿದೆ. ಕೆಲ ಭಾಗಗಳಲ್ಲಿ ಶೀತಗಾಳಿ ಭಾಗಶಃ ಕಡಿಮೆಯಾಗಲಿದೆ. ಉತ್ತರ ಪ್ರದೇಶ, ಹರಿಯಾಣ, ರಾಜಸ್ಥಾನದ ವಿವಿಧ ಭಾಗಗಳಲ್ಲಿ ಶುಕ್ರವಾರ ಮತ್ತು ಶನಿವಾರ ಚದುರಿದ ರೀತಿಯಲ್ಲಿ ಮಳೆಯಾಗಿದೆ ಜಮ್ಮು ಮತ್ತು ಕಾಶ್ಮೀರ ಹೊರತುಪಡಿಸಿ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಹಿಮಪಾತ ಆಗಲಿದೆ ಎಂದು ಅಂದಾಜಿಸಲಾಗಿದೆ.

ಇಂದು ಉತ್ತರ ಭಾರತದ ರಾಜ್ಯಗಳಲ್ಲಿ ಮಳೆ ಸಾಧ್ಯತೆ

ಮುಂದಿನ 24 ಗಂಟೆಗಳಲ್ಲಿ ಪಶ್ಚಿಮ ಉತ್ತರ ಪ್ರದೇಶ ಮತ್ತು ಪೂರ್ವ ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಮುಂದಿನ 2 ದಿನಗಳ ದಟ್ಟವಾದ ಮಂಜು ಬೀಳುವ ಸಾಧ್ಯತೆಯಿದೆ. ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಜನವರಿ 09 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ:  Raichur: ಹಳೆಯ ವಿದ್ಯಾರ್ಥಿಗಳ ಅಭಿಮಾನದಿಂದ‌ ಬದಲಾಯ್ತು ಸರಕಾರಿ ಶಾಲೆಯ ಚಿತ್ರಣ..!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಳೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ, ಜನವರಿ 8 ರಂದು, ಕನಿಷ್ಠ ತಾಪಮಾನವು 14 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಮಳೆಯ ನಡುವೆ ಗರಿಷ್ಠ ತಾಪಮಾನವು 18 ಡಿಗ್ರಿ ಸೆಲ್ಸಿಯಸ್ ಆಗಿದೆ. ದೆಹಲಿಯಲ್ಲಿ ಲಘು ಮತ್ತು ಬಲವಾದ ಗಾಳಿಯೊಂದಿಗೆ ಮಧ್ಯಂತರ ಸಾಧಾರಣ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಇತ್ತ ಮೈಸೂರು ಭಾಗದಲ್ಲಿ ಶುಷ್ಕ ಹಮಾಮಾನದ ಜೊತೆ ಚಳಿ ಸಹ ಇರಲಿದೆ. ಬೆಳಗ್ಗೆ ಬೀಳುವ ಮಂಜು ಬೆಳೆಗಳ ಮೇಲೆ ಪರಿಣಾಮ ಬೀರುತ್ತಿದ್ದು, ಕಡಲೆ, ಜೋಳ ಹಳದಿ ರೋಗಕ್ಕೆ ತುತ್ತಾಗುವ ಆತಂಕ ಎದುರಾಗಿದೆ. ಮತ್ತೊಂದೆಡೆ ಕೊರೋನಾ, ಓಮೈಕ್ರಾನ್ (Corona Virus And Omicron Variant) ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಕಾರಣ ಸಣ್ಣ ನೆಗಡಿಗೂ ಜನರು ಹೆದರುವಂತಾಗಿದೆ.

ಅಕಾಲಿಕ ಮಳೆಗೆ ರಾಜ್ಯದ ಜಲಾಶಯಗಳು ಭರ್ತಿ

ರಾಜ್ಯದಲ್ಲಿ ಹಲವು ದಿನಗಳಿಂದ ಸುರಿಯುತ್ತಿದ್ದ ಅಕಾಲಿಕ ಮಳೆ (Unseasonal Rain)ಸದ್ಯಕ್ಕೆ ಕೊಂಚ ಬಿಡುವು ಕೊಟ್ಟಿದೆ. ಸದ್ಯ ರಾಜ್ಯದಲ್ಲಿ ಚಳಿಯ (Winter) ಪ್ರಮಾಣ ಹೆಚ್ಚಾಗಿದ್ದು, ಜನರನ್ನು ನಡುಗಿಸುತ್ತಿದೆ.   ಮುಂಗಾರು(Monsoon) ಮುಗಿದರೂ ಸಹ ಎಡೆಬಿಡದೆ ಸುರಿದ ಅಕಾಲಿಕ ಮಳೆಯಿಂದಾಗಿ ಎಲ್ಲೆಡೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಬೆಂಗಳೂರಿಗರ ಜೀವನವಂತೂ ತೀರಾ ಶೋಚನೀಯವಾಗಿತ್ತು. ಸದ್ಯ ಮಳೆ ಸ್ವಲ್ಪ ಬ್ರೇಕ್(Break) ಕೊಟ್ಟಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಅಕಾಲಿಕ ಮಳೆಗೆ ರಾಜ್ಯದ ಪ್ರಮುಖ ಜಲಾಶಯಗಳು ಬಹುತೇಕ ಭರ್ತಿಯಾಗಿವೆ.
Published by:Mahmadrafik K
First published: