Karnataka Weather Today: ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ಮಳೆ: ಯಾವ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಅ.  23ರಂದು ಹೆಚ್ಚು ಮಳೆ ಬೀಳುವ ಸಂಭವವಿದೆ. ಅ. 1 ರಿಂದ 20ರವರೆಗೆ ನಗರದಲ್ಲಿ 209 ಮಿ.ಮೀ. ಮಳೆ ಸುರಿದಿದ್ದು, ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ನಗರದ ರಸ್ತೆಗಳು ಗುಂಡಿ ಬಿದ್ದು, ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ  ಕುಸಿತ ಹಿನ್ನೆಲೆಯಲ್ಲಿ  ಬೆಂಗಳೂರು (Bengaluru Rainfall) ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗಲಿದೆ.  ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಅ.  23ರಂದು ಹೆಚ್ಚು ಮಳೆ ಬೀಳುವ ಸಂಭವವಿದೆ. ಅ. 1 ರಿಂದ 20ರವರೆಗೆ ನಗರದಲ್ಲಿ 209 ಮಿ.ಮೀ. ಮಳೆ ಸುರಿದಿದ್ದು, ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ನಗರದ ರಸ್ತೆಗಳು ಗುಂಡಿ ಬಿದ್ದು, ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿದೆ.

ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್

ಈ ವಾರ ಕರಾವಳಿಯಲ್ಲಿ ಭರ್ಜರಿ ಮಳೆಯಾಗಿದೆ. ಇಂದು ಯೆಲ್ಲೋ ಅಲರ್ಟ್‌ ಇರಲಿದ್ದು, ಸಾಧಾರಣದಿಂದ ಭಾರೀ ಮಳೆ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ. ಬೆಳಗಾವಿ, ಬೀದರ್, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಹಾಸನ, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಅರಬ್ಬಿ ಸಮುದ್ರದ ಲಕ್ಷ ದ್ವೀಪ ಭಾಗದಲ್ಲಿ ಹಾಗೂ ಬಂಗಾಳ ಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಮಳೆಗೆ ಮೂಲ ಕಾರಣ ಎನ್ನಲಾಗುತ್ತಿದೆ. ಇದರ ಜತೆಯಲ್ಲಿ ಒಂದು ವಾರದ ಬಳಿಕ ಮುಂಗಾರು ಮಳೆ ಕಡಿಮೆಯಾಗಿ ರಾಜ್ಯಕ್ಕೆ ಹಿಂಗಾರು ಪ್ರವೇಶ ಪಡೆಯಲಿದೆ ಎನ್ನುವುದು ಇಲಾಖೆಯ ಲೆಕ್ಕಾಚಾರ.

ತಮಿಳುನಾಡಿನಲ್ಲಿ ಭಾರೀ ಮಳೆ  ಸಾಧ್ಯತೆ

ಉತ್ತರಾಖಂಡ್ ನಲ್ಲಿ ಅಕ್ಟೋಬರ್ 1 ರಿಂದ 21ರವರೆಗೆ ಶೇ.41ರಷ್ಟು ಮಳೆಯಾಗಿದೆ. ಸಾಧಾರಣ ಮಳೆಗಿಂತ ನಾಲ್ಕು ಪಟ್ಟು ಮಳೆಯಾಗಿದೆ. ಮುಂದಿನ ನಾಲ್ಕೈದು ದಿನ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಇನ್ನು ನೆರೆಯ ರಾಜ್ಯಗಳಾದ ಕೇರಳ ಮತ್ತು ತಮಿಳುನಾಡಿನಲ್ಲಿ ವರುಣ ವಿರಾಮ ನೀಡಿದ್ದನು. ಆದ್ರೆ ಇಂದು ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ  ಸಾಧ್ಯತೆಗಳಿದ್ದು , ನದಿ ತೀರದ ಜನರು ಎಚ್ಚರಿಕೆಯಿಂದಿರಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಬಂಗಾಳಕೊಲ್ಲಿಯ ವಾಯುಭಾರ ಕುಸಿತ ನೇರ ಪರಿಣಾಮ ಚೆನ್ನೈ ನಗರದ ಮೇಲೆ ಬೀಳಲಿದೆ. ಹಾಗೆಯೇ ಬೆಂಗಳೂರಿನಲ್ಲಿಯೂ ಮಳೆ ಸುರಿಯಲಿದೆ.

ಎಲ್ಲೆಲ್ಲಿ ಆರೆಂಜ್ ಅಲರ್ಟ್?

ಮುಂದಿನ ವಾರ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಹಿಂಗಾರು ಮಾರುತಗಳಿಂದ ಅಕ್ಟೋಬರ್ ಕೊನೆಯ ವಾರದ ಹೊತ್ತಿಗೆ ಮತ್ತೆ ನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ರಾಜ್ಯದ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರು, ಮಂಗಳೂರಲ್ಲಿ ಭಾರೀ ಮಳೆ ಸಾಧ್ಯತೆ ಇದ್ದು, ಎಲ್ಲಾ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆ(Rainfall)ಯಾಗುತ್ತಿದೆ. ಇಂದು ಸಹ ರಾಜ್ಯದ ಹಲವೆಡೆ ಭಾರಿ ಮಳೆ ಮುಂದುವರಿಯುವ ನಿರೀಕ್ಷೆ ಇದೆ. ಭಾರಿ ಮಳೆಗೆ ರಾಜ್ಯದಲ್ಲಿ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ. ಬಹುತೇಕ ಡ್ಯಾಂ (Karnataka dams)ಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ.

ಕೇರಳದಲ್ಲಿ ಆರೆಂಜ್, ಯೆಲ್ಲೋ ಅಲರ್ಟ್

ಕೇರಳದಲ್ಲಿ ಅಕ್ಟೋಬರ್ 25 ರಂದು ಆರೆಂಜ್ ಮತ್ತು ಯೆಲ್ಲೋ ಅಲರ್ಟ್  ಘೋಷಣೆ ಮಾಡಲಾಗಿದೆ. ದೆ. ಪತ್ತನಂತಿಟ್ಟ, ಕೋಟಯಂ, ಇಡುಕ್ಕಿ, ಪಾಲಕ್ಕಾಡ್‌, ಮಲಪ‍್ಪುರ, ಕೋಯಿಕ್ಕೋಡ್‌, ವಯನಾಡ್‌ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ತಿರುವನಂತಪುರ, ಕೊಲ್ಲಂ, ಆಲಪ್ಪುಳ, ತ್ರಿಶ್ಶೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಆರೆಂಜ್‌ ಅಲರ್ಟ್ ಎಂದರೆ ಭಾರಿ ಮಳೆ ಮತ್ತು ಯೆಲ್ಲೋ ಅಲರ್ಟ್‌ ಎಂದರೆ ಅಲ್ಲಲ್ಲಿ ಸಾಮಾನ್ಯ ಮಳೆಯಾಗಲಿದೆ. ಇನ್ನು ಕೇಂದ್ರ ಗೃಹ ಸಚಿವ ಅಮಿತ್​ ಶಾ ಉತ್ತರಾಖಂಡ್​​ನಲ್ಲಿ ಮನೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ.
Published by:Mahmadrafik K
First published: