Karnataka Weather Today: ರಾಜ್ಯದಲ್ಲಿ ಮೋಡ ಕವಿದ ವಾತಾವರಣ, ತುಂತುರು ಮಳೆ

ಬೆಂಗಳೂರಿನಲ್ಲಿ (Bengaluru) ಕನಿಷ್ಠ 19, ಗರಿಷ್ಠ 26 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಇದೇ ರೀತಿ ಬುಧವಾರದವರೆಗೂ ಹವಾಮಾನ ಮುಂದುವರಿಯಲಿದೆ. ಗುರುವಾರ ಮತ್ತು ಶುಕ್ರವಾರ ಬೆಂಗಳೂರಿನಲ್ಲಿ ಒಣ ಹವೆ ಇರಲಿದೆ. ಮತ್ತೆ ಶನಿವಾರ ಮಳೆ ಮುಂದುವರಿಯಲಿದೆ.

ಮಳೆ

ಮಳೆ

  • Share this:
ಬೆಂಗಳೂರಿನಲ್ಲಿ (Bengaluru) ಕನಿಷ್ಠ 19, ಗರಿಷ್ಠ 26 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಇದೇ ರೀತಿ ಬುಧವಾರದವರೆಗೂ ಹವಾಮಾನ ಮುಂದುವರಿಯಲಿದೆ. ಗುರುವಾರ ಮತ್ತು ಶುಕ್ರವಾರ ಬೆಂಗಳೂರಿನಲ್ಲಿ ಒಣ ಹವೆ ಇರಲಿದೆ. ಮತ್ತೆ ಶನಿವಾರ ಮಳೆ ಮುಂದುವರಿಯಲಿದೆ. ಬೆಂಗಳೂರು (Bengaluru Rain)ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಮಳೆ ಸುರಿಯಲಿದೆ. ಕೆಲವು ಕಡೆ ಗುಡುಗು-ಸಿಡಿಲು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇಂದು ಬೆಂಗಳೂರಿನ ಕೆಲವು ಭಾಗಗಳಲ್ಲಿ ಕೊಂಚ ಮಳೆಯ ಪ್ರಮಾಣ ಕೊಂಚ ಇಳಿಮುಖವಾಗುವ ಸಾಧ್ಯತೆಗಳಿವೆ. ಇತ್ತ ರಾಜ್ಯದ ಬಹುತೇಕ ಕೆರೆಗಳು (Lake) ಭರ್ತಿಯಾಗಿ ಕೋಡಿ ಬಿದ್ದು, ನೀರು ಹರಿಯುತ್ತಿದೆ.  ಇತ್ತ ನಿರಂತರ ಮಳೆ ಹಿನ್ನೆಲೆ ಕೃಷಿ ಭೂಮಿಯಲ್ಲಿ ನೀರು ಶೇಖರಣೆಯಾಗುತ್ತಿರುವ ಕಾರಣ ರೈತರು (Farmers) ಸಂಕಷ್ಟದಲ್ಲಿ ಸಿಲುಕಿದ್ದಾರೆ.

ಜಲಾಯಶಕ್ಕೆ ಒಳ ಹರಿವು ಹೆಚ್ಚಳವಾದ ಹಿನ್ನಲೆ ತುಂಗಭದ್ರಾ ಜಲಾಶಯದಿಂದ ಒಂದು ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಹಾಗಾಗಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಮಾಹಿತಿ ನೀಡಿದ್ದಾರೆ. ಇತ್ತ ನಿರಂತರ ಮಳೆಯಿಂದಾಗಿ (Karnataka Rains) ರಾಜ್ಯದ ಜಲಾಶಯಗಳು ಭರ್ತಿಯಾಗುತ್ತಿದ್ದು, ನದಿ ಪಾತ್ರದ ಜನರಿಗೆ ಎಚ್ಚರಿಕ ಸಂದೇಶ ನೀಡಲಾಗಿದೆ. ಮುಂದಿನ ಎರಡು ದಿನ ಮೀನುಗಾರಿಕೆ ನಿಷೇಧಿಸಲಾಗಿದೆ.

ರಾಜ್ಯದಲ್ಲಿ ಎಲ್ಲೆಲ್ಲಿ ಮಳೆ?

ಕೋಲಾರ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಬಂಗಾರಪೇಟೆ ತಾಲೂಕಿನ ಬೂದಿಕೊಟೆ ಬಳಿಯಲ್ಲಿರುವ 18 ವರ್ಷಗಳ ನಂತರ ಮಾರ್ಕೆಂಡೇಯ ಡ್ಯಾಂ ತುಂಬಿ ಹರಿಯುತ್ತಿದೆ. 750 ಎಕರೆ ವಿಸ್ತೀರ್ಣ, 80 ಅಡಿ ಆಳ ಹೊಂದಿರುವ ಜಲಾಶಯ ಇದಾಗಿದ್ದು, ಶನಿವಾರ ಸಂಜೆಯಿಂದ ಕೋಡಿ ಹರಿಯುತ್ತಿದೆ.

ಇದನ್ನೂ ಓದಿ: Rain Effect: ಮಳೆಯಿಂದ 7.31 ಲಕ್ಷ ಹೆಕ್ಟೇರ್‌ ಪ್ರದೇಶದ ಬೆಳೆ ನಾಶ; ಪ್ರಚಾರ ಬಿಟ್ಟು ರೈತರ ನೆರವಿಗೆ ಧಾವಿಸಲು ಸರ್ಕಾರಕ್ಕೆ HDK ಆಗ್ರಹ

ಹುಬ್ಬಳ್ಳಿ, ಗದಗ, ಧಾರವಾಡ, ಕೊಪ್ಪಳ, ಬಾಗಲಕೋಟೆ, ವಿಜಯಪುರ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದೆ. ಬಿಸಿಲುನಾಡು ಪ್ರದೇಶಗಳಾದ ರಾಯಚೂರು, ಬೀದರ್, ಬಳ್ಳಾರಿಯಲ್ಲಿಯೂ ಇವತ್ತು ಸಹ ಮೋಡ ಕವಿದ ವಾತಾವರಣ ಮುಂದುವರಿಯಲ್ಲಿದ್ದು, ಕೆಲವು ಭಾಗಗಳಲ್ಲಿ ತುಂತುರು ಮಳೆಯಾಗಲಿದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮಳೆಯಾಗಲಿದೆ. ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ರಾಮನಗರ, ಕೊಡಗು, ಮಂಡ್ಯದಲ್ಲಿಯೂ ಮಳೆ ಮುಂದುವರಿಯಲಿದೆ.

ಕೊಡಗು ಜಿಲ್ಲೆಯಲ್ಲಿ (Kodagu Rains) 2018 ರಿಂದಲೂ ನಿರಂತರವಾಗಿ ನಾಲ್ಕು ವರ್ಷಗಳಿಂದಲೂ ಭಾರೀ ಮಳೆಗೆ ಪ್ರವಾಹ ಭೂಕುಸಿತ (Rain, Flood And Landslide) ಸಂಭವಿಸಿ ಜನರು ಭಾರೀ ನಷ್ಟ ಅನುಭವಿಸಿದ್ದರು. ಈ ಬಾರಿಯೂ ಮಳೆಗಾಲದಲ್ಲಿ ಸಾಕಷ್ಟು ನಷ್ಟ ಅನುಭವಿಸಿದ್ದರು. ಪರಿಣಾಮ ರೈತರು (Farmers) ಕಷ್ಟಪಟ್ಟು ಬೆಳೆದಿದ್ದ ಕಾಫಿ, ಮೆಣಸು ಎಲ್ಲವೂ ಪ್ರವಾಹದ ಪಾಲಾಗಿದ್ದವು. ಈಗ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಕೈಗೆ ಬಂದ ಬೆಳೆ ಸಂಪೂರ್ಣ ನೆಲ ಕಚ್ಚಿದೆ.

ಇದನ್ನೂ ಓದಿ:  Kolar Rain: 34 ಸಾವಿರ ಹೆಕ್ಟೇರ್ ರಾಗಿ ಬೆಳೆ ನೀರು ಪಾಲು, ಇಬ್ಬರ ಸಾವು: ಕಾಣೆಯಾದ ಜನಪ್ರತಿನಿಧಿಗಳು

ನಿರಂತರ ಮಳೆಯಿಂದಾಗಿ ತರಕಾರಿ ಬೆಲೆ ಏರಿಕೆ

ರಾಜ್ಯದಲ್ಲಿ ನಿರಂತರ ಮಳೆಯಿಂದಾಗಿ (Karnataka Rains) ಮಾರುಕಟ್ಟೆಗಳಿಗೆ (Market) ಹಣ್ಣು, ತರಕಾರಿಯ (Fruits And Vegetables) ಪೂರೈಕೆ ಆಗುತ್ತಿಲ್ಲ. ಪರಿಣಾಮ ತರಕಾರಿ ಬೆಲೆಯಲ್ಲಿ ಏರಿಕೆ (Price Hike)ಯಾಗಿದ್ದು, ಮಳೆಯ ಚಳಿಯಲ್ಲಿ ಬೆಲೆ ಏರಿಕೆ ಗ್ರಾಹಕರ (Customer) ಜೇಬನ್ನು ಸುಡುತ್ತಿದೆ. ಹಾಪ್ ಕಾಮ್ಸ್ ಗಳಲ್ಲೂ ದರ ಏರಿಕೆಯಾಗಿದೆ. ಇದೇ ರೀತಿ ಮಳೆ ಮುಂದುವರಿದ್ರೆ ತರಕಾರಿ ಮತ್ತು ಹಣ್ಣುಗಳ ಬೆಲೆ ಇನ್ನಷ್ಟು ಏರಿಕೆಯಾಗಲಿದೆ ಎಂದು ಹೇಳಲಾಗುತ್ತಿದೆ.ಅಕಾಲಿಕ ಮಳೆಯಿಂದಾಗಿ ಬೆಳೆದಿರುವ ತರಕಾರಿ ನೀರಿನಲ್ಲಿ ಕೊಳೆಯುವಂತಾಗಿದೆ. ಮತ್ತೊಂದು ಕಡೆ ತರಕಾರಿ ಕಟಾವು ಮಾಡಲು ಸಹ ರೈತರಿಗೆ ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆ ಮಾರುಕಟ್ಟೆಯಲ್ಲಿ ಬೆಲೆ ಏರಿಕೆ ಆಗುತ್ತಿದೆ
Published by:Mahmadrafik K
First published: