Karnataka Weather Today: ಮುಂದಿನ ಎರಡು ದಿನ ಸಾಧಾರಣ ಮಳೆ, ಮೋಡ ಕವಿದ  ವಾತಾವರಣ

ಮೇಲ್ಮೈ ಸುಳಿಗಾಳಿ ದುರ್ಬಲಗೊಳ್ಳುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಮಳೆಯ ಪ್ರಮಾಣ ತಗ್ಗಲಿದೆ. ದಕ್ಷಿಣ ಒಳನಾಡು ಮತ್ತು ಕರವಾಳಿ ಭಾಗದಲ್ಲಿಯೂ ಮಳಯ ಅಬ್ಬರ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮಳೆ

ಮಳೆ

  • Share this:
ಕಳೆದೊಂದು ವಾರದಿಂದ ರಾಜ್ಯದಲ್ಲಿ (Karnataka Rains) ಸುರಿಯುತ್ತಿರುವ ಅಬ್ಬರದ ಮಳೆ ಮುಂದಿನ ಎರಡು ದಿನ ತಗ್ಗಲಿದೆ. ಆದ್ರೆ ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣ (Cloudy Weather) ನಿರ್ಮಾಣವಾಗಲಿದ್ದು, ಒಂದೆರಡು ಬಾರಿ ಜೋರು ಮಳೆ (Rainfall)ಯಾಗಲಿದೆ. ಭಾನವಾರ ಹಗಲು ಬ್ರೇಕ್ ನೀಡಿದ್ದ ಮಳೆ, ಸಂಜೆ ವೇಳೆಗೆ ಅಬ್ಬರಿಸಿದೆ. ಇಂದು ಬೆಂಗಳೂರಿನಲ್ಲಿ (Bengaluru Rain)  ಕನಿಷ್ಠ 19, ಗರಿಷ್ಠ 27 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ಮೇಲ್ಮೈ ಸುಳಿಗಾಳಿ ದುರ್ಬಲಗೊಳ್ಳುತ್ತಿರುವ ಹಿನ್ನೆಲೆ ಬುಧವಾರದಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತಗ್ಗಲಿದೆ. ದಕ್ಷಿಣ ಒಳನಾಡು ಮತ್ತು ಕರವಾಳಿ ಭಾಗದಲ್ಲಿಯೂ ಮಳಯ ಅಬ್ಬರ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ವಾಯುಭಾರ ಕುಸಿತ ಹಿನ್ನೆಲೆ ನೆರೆಯ ರಾಜ್ಯಗಳಾದ ಗೋವಾ, ಮಹಾರಾಷ್ಟ್ರ, ಕೇರಳ, ತಮಿಳುನಾಡು ಮತ್ತು ಆಂದ್ರಪ್ರದೇಶಗಳಲ್ಲೂ ಮಳೆಯಾಗುತ್ತಿದೆ. ಗೋವಾದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಪ್ರವಾಸಿಗರು ಎಚ್ಚರಿಕೆಯಿಂದಿರಬೇಕು ಎಂದು ಸರ್ಕಾರ ಸೂಚನೆ ನೀಡಿದೆ. ಪ್ರವಾಸಕ್ಕೆ ಬರುತ್ತಿದ್ರೆ ರದ್ದುಗೊಳಿಸಿ ಎಂದು ಸಲಹೆ ನೀಡಲಾಗಿದೆ.

ರಾಜ್ಯದಲ್ಲಿ ಎಲ್ಲೆಲ್ಲಿ ಮಳೆ?

ಹುಬ್ಬಳ್ಳಿ, ಗದಗ, ಧಾರವಾಡ, ಕೊಪ್ಪಳ, ಬಾಗಲಕೋಟೆ, ವಿಜಯಪುರ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದೆ. ಬಿಸಿಲುನಾಡು ಪ್ರದೇಶಗಳಾದ ರಾಯಚೂರು, ಬೀದರ್, ಬಳ್ಳಾರಿಯಲ್ಲಿಯೂ ಇವತ್ತು ಸಹ ಮೋಡ ಕವಿದ ವಾತಾವರಣ ಮುಂದುವರಿಯಲ್ಲಿದ್ದು, ಕೆಲವು ಭಾಗಗಳಲ್ಲಿ ತುಂತುರು ಮಳೆಯಾಗಲಿದೆ.

ಇದನ್ನೂ ಓದಿ: Rain and Weather Update: ಮಳೆಗಾಲ ಮುಗಿದರೂ ಹೀಗೆ ದಿನಾ ಮಳೆ ಬರುವುದಕ್ಕೆ ಕಾರಣ ಏನು? ಈ ಮಳೆ ಯಾವಾಗ ನಿಲ್ಲುತ್ತದೆ? ಫುಲ್ ಡೀಟೆಲ್ಸ್ ಇಲ್ಲಿದೆ

ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮಳೆಯಾಗಲಿದೆ. ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ರಾಮನಗರ, ಕೊಡಗು, ಮಂಡ್ಯದಲ್ಲಿಯೂ ಮಳೆ ಮುಂದುವರಿಯಲಿದೆ.

ಜಲಾಶಯಗಳು ಭರ್ತಿ

ಜಲಾಯಶಕ್ಕೆ ಒಳ ಹರಿವು ಹೆಚ್ಚಳವಾದ ಹಿನ್ನಲೆ ತುಂಗಭದ್ರಾ ಜಲಾಶಯದಿಂದ ಒಂದು ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಹಾಗಾಗಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಮಾಹಿತಿ ನೀಡಿದ್ದಾರೆ. ಇತ್ತ ನಿರಂತರ ಮಳೆಯಿಂದಾಗಿ (Karnataka Rains) ರಾಜ್ಯದ ಜಲಾಶಯಗಳು ಭರ್ತಿಯಾಗುತ್ತಿದ್ದು, ನದಿ ಪಾತ್ರದ ಜನರಿಗೆ ಎಚ್ಚರಿಕ ಸಂದೇಶ ನೀಡಲಾಗಿದೆ.

ಇದನ್ನೂ ಓದಿ: ರಸ್ತೆ ಗುಂಡಿಗಳಿಗೆ ಕಾರಣರಾದ BBMP ಅಧಿಕಾರಿಗಳ ವಿರುದ್ಧ ಕೇಸ್ ಹಾಕಿ; ಬೆಂಗಳೂರಿಗರ ಒತ್ತಾಯ

ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ

ಬೆಂಗಳೂರಿಗೆ ಇವತ್ತಯ ಸಹ  ಮಳೆಯ ಅಲರ್ಟ್ ಎಂದಿರುತ್ತದೆ ಹವಾಮಾನ ಇಲಾಖೆ. ಆದ್ರೆ ಇವತ್ತೇ ಬಿಟ್ಟೂಬಿಡದಂತೆ ಮಳೆ ಸುರಿಯುತ್ತಿರುತ್ತದೆ. ಅಲರ್ಟ್ ಇಲ್ಲದೆಯೇ ಇಷ್ಟೊಂದು ಮಳೆ ಎಂದರೆ ಇನ್ನು ಅಲರ್ಟ್ ಹೇಳಿದಾಗ ಹೇಗಪ್ಪಾ ಎನ್ನುವ ತಲೆಬಿಸಿ ಇಲ್ಲಿಯ ಜನರದ್ದು. ಈಗಷ್ಟೇ ಶಾಲೆಗೆ ಹೋಗೋಕೆ ಶುರು ಮಾಡಿರೋ ಮಕ್ಕಳು, ಜ್ವರ ಭಯದಿಂದ ಈಗೀಗ ಚೇತರಿಸಿಕೊಳ್ತಿರೋ ಹಿರಿಯರು ಎಲ್ಲರ ಪಾಲಿಗೂ ಮಳೆ ದೊಡ್ಡ ಪ್ರಶ್ನಾರ್ಥಕ ಚಿಹ್ನೆಯಾಗಿಬಿಟ್ಟಿದೆ.ಬಂಗಾಳ ಕೊಲ್ಲಿಯಿಂದ ಅರಬ್ಬಿ ಸಮುದ್ರಕ್ಕೆ ಮೋಡಗಳು ಸಾಗುವ ಮಾರ್ಗದಲ್ಲಿ ಇರುವ ಎಲ್ಲಾ ಪ್ರದೇಶಗಳಿಗೆ ಸದ್ಯಕ್ಕಂತೂ ಮಳೆಯಿಂದ ಮುಕ್ತಿ ಇಲ್ಲವೇ ಇಲ್ಲ. ಹಾಗಾಗಿ ಮಳೆಗೆ ಹಿಡಿಶಾಪ ಹಾಕುವುದನ್ನು ಬಿಟ್ಟು ಅದರೊಂದಿಗೇ ಬದುಕಲು ಇಷ್ಟವಿಲ್ಲದಿದ್ದರೂ, ಕಷ್ಟವಾದರೂ ಸಜ್ಜಾಗಲೇಬೇಕಿದೆ.

ಸುಮಾರು 2 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಹಾನಿ

ಕಳೆದ ಹತ್ತು ದಿನಗಳಿಂದ ರಾಜ್ಯದಲ್ಲಿ ನಿರಂತರವಾಗಿ ಅಕಾಲಿಕ ಮಳೆ (Heavy Rain In Karnataka) ಸುರಿಯುತ್ತಿದ್ದು, ಎಲ್ಲೆಡೆ ಭಾರೀ ಹಾನಿ ಸೃಷ್ಟಿಸಿದೆ. ಒಂದು ಅಂದಾಜಿನ ಪ್ರಕಾರ ಸುಮಾರು 2 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಹಾನಿ ಆಗಿದೆ ಎಂದು ಅಂದಾಜಿಸಲಾಗಿದೆ. ಭಾರೀ ಮಳೆಯಿಂದಾಗಿ ರಾಜ್ಯದ ಎಲ್ಲ ಕೆರೆ- ಕಟ್ಟೆಗಳು ಭರ್ತಿಯಾಗಿ ತುಂಬಿ ಹರಿಯುತ್ತಿವೆ. ಇನ್ನು ಎಲ್ಲ ಬಹುತೇಕ ಎಲ್ಲ ಜಲಾಶಯಗಳು ಭರ್ತಿಯಾಗಿದ್ದು, ಅಪಾರ ಪ್ರಮಾಣದ ನೀರನ್ನು ಹೊರಗೆ ಬಿಡುತ್ತಿರುವುದರಿಂದ ಪ್ರವಾಹ ಆತಂಕ ಎದುರಾಗಿದೆ.
Published by:Mahmadrafik K
First published: