Karnataka Weather Today: ದಕ್ಷಿಣ ಒಳನಾಡು, ಕರಾವಳಿಯಲ್ಲಿ ಸಾಧಾರಣ ಮಳೆ

ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ತುಂತುರು ಮಳೆಯಾಗಲಿದೆ. ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ರಾಮನಗರ, ಕೊಡಗು, ಮಂಡ್ಯದಲ್ಲಿ ತುಂತುರು ಮಳೆಯಾಗುವ ಸಾಧ್ಯತೆಗಳಿವೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಬಂಗಾಳ ಕೊಲ್ಲಿಯಿಂದ (Bay of Bengal) ಆರಂಭಗೊಂಡಿದ್ದ ಮೇಲ್ಮೈ ಸುಳಿಗಾಳಿ ದುರ್ಬಲಗೊಂಡ ಹಿನ್ನೆಲೆ ರಾಜ್ಯದಲ್ಲಿ ಒಂದು ವಾರದಿಂದ ಸುರಿಯುತ್ತಿರುವ ಅಕಾಲಿಕ ಮಳೆಗೆ (Unseasonal Rain) ಬ್ರೇಕ್ ಬಿದ್ದಿದೆ. ಇಂದು ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾ(Rainfall)ಗಲಿದೆ. ಶಿವಮೊಗ್ಗ, ಹಾಸನ. ದಾವಣಗೆರೆ, ಚಿಕ್ಕಬಳ್ಳಾಪುರ, ಮೈಸೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಗಳಿವೆ. ಇನ್ನುಳಿದಂತೆ ಚಳಿ (Winter) ಸಹ ರಾಜ್ಯದಲ್ಲಿ (Karnataka Rains) ಆರಂಭವಾಗಲಿದೆ. ಉತ್ತರ ಕರ್ನಾಟಕ (North Karnataka) ಭಾಗದಲ್ಲಿ ಚಳಿ ಮತ್ತು ಸುಳಿ ಗಾಳಿಯ ಜೊತೆ ಒಣ ಹವೆ ಇರಲಿದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ತುಂತುರು ಮಳೆಯಾಗಲಿದೆ. ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ರಾಮನಗರ, ಕೊಡಗು, ಮಂಡ್ಯದಲ್ಲಿ ತುಂತುರು ಮಳೆಯಾಗುವ ಸಾಧ್ಯತೆಗಳಿವೆ.

ರಾಜ್ಯದ ಜಿಲ್ಲೆಗಳಲ್ಲಿ ಹೇಗಿರಲಿದೆ ಹವಾಮಾನ?

ಬೆಂಗಳೂರು 27-19, ಶಿವಮೊಗ್ಗ 31-21, ಹಾಸನ 27-19, ಮೈಸೂರು 29-19, ಚಿಕ್ಕಬಳ್ಳಾಪುರ 26-18, ಉಡುಪಿ 31-24, ಮಂಗಳೂರು 32-24, ಉತ್ತರ ಕನ್ನಡ 31-21, ದಾವಣಗೆರೆ 30-21, ಧಾರವಾಡ 29-21, ಗದಗ 29-21, ಹಾವೇರಿ 31-21, ಬೆಳಗಾವಿ 29-20, ರಾಯಚೂರು 31-22, ಬಳ್ಳಾರಿ 29-22, ಬಾಗಲಕೋಟೆ 31-22, ವಿಜಯಪುರ 30-21, ಕಲಬುರಗಿ 31-21 ಮತ್ತು ಯಾದಗಿರಿ 31-22 ತಾಪಮಾನ ದಾಖಲಾಗಲಿದೆ. ರಾಯಚೂರು ಮತ್ತು ಕಲಬುರಗಿಯಲ್ಲಿ 31 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

ಇದನ್ನೂ ಓದಿ:  Astrology: ತುಲಾ ರಾಶಿಯವರಿಗೆ ಇಂದು ವಾಹನಕೊಳ್ಳುವ ಯೋಗ; ಇಲ್ಲಿದೆ 12 ರಾಶಿಗಳ ದಿನಭವಿಷ್ಯ

ಮಳೆಯಿಂದಾಗಿ ಹಾನಿಗೊಳಗಾದ ಯಲಹಂಕ

ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ನಗರದ 54 ಪ್ರದೇಶಗಳು ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದ್ದು. ಬೆಂಗಳೂರಿನ ಯಲಹಂಕ ಪ್ರದೇಶವು ಹೆಚ್ಚು ಹಾನಿಗೊಳಗಾಗಿದ್ದು, 45 ಸ್ಥಳಗಳು ಜಲಾವೃತವಾಗಿವೆ. ಮಹದೇವಪುರ, ವಿದ್ಯಾರಣ್ಯಪುರಂ, ಅಲ್ಲಾಳಸಂದ್ರ, ರಾಜರಾಜೇಶ್ವರಿನಗರ ಬಡಾವಣೆಗಳಲ್ಲಿ ಹಲವು ಮನೆಗಳು, ಅಪಾರ್ಟ್‌ಮೆಂಟ್‌ಗಳು ಮುಳುಗಡೆಯಾಗಿವೆ.

ಪ್ರದೇಶಗಳು ಜಲಾವೃತ

ಕಾವೇರಿ ಜಲಾನಯನ ಪ್ರದೇಶದಲ್ಲಿ ಶೇ.95 ಹಾಗೂ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಶೇ.92ರಷ್ಟು ನೀರು ಸಂಗ್ರಹವಾಗಿದೆ. ಅಣೆಕಟ್ಟುಗಳಿಂದ ಹೆಚ್ಚಿನ ಪ್ರಮಾಣದ ನೀರು ಹೊರಹರಿವು ಇರುವುದರಿಂದ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಅಲ್ಲದೆ ಹಲವಾರು ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ಕಾರುಗಳು ಜಲಾವೃತಗೊಂಡಿವೆ.

ರಾಜ್ಯದಲ್ಲಿ ಹಲವಾರು ದಿನಗಳಿಂದ ಮಳೆಯಾಗುತ್ತಿದ್ದು ಇದರ ಪರಿಣಾಮವಾಗಿ ರಾಜ್ಯದಲ್ಲಿ ಪ್ರಮುಖ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ. ಹೆಚ್ಚಿನ ಡ್ಯಾಂಗಳು ಬಹುತೇಕ ಭರ್ತಿಯಾಗಿದ್ದು ನದಿಗಳಿಗೆ ನೀರು ಬಿಡಲಾಗುತ್ತಿದೆ.

ಮುಂದಿನ ಐದು ದಿನ ಹಗುರವಾದ ಮಳೆ

ಮುಂದಿನ 5 ದಿನ ಆಂದ್ರ ಪ್ರದೇಶದ ಕರಾವಳಿ, ಯಾನಂ, ದಕ್ಷಿಣ ಒಳನಾಡಿನ ಪ್ರದೇಶ, ಮಾಹೆ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ನಲ್ಲಿ ಹಗುರವಾದ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

ಇದನ್ನೂ ಓದಿ:  Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ತಮಿಳುನಾಡಿನಲ್ಲಿ ಯೆಲ್ಲೋ ಅಲರ್ಟ್

ನವೆಂಬರ್ 24, 25 ಮತ್ತು 26 ಮೂರು ದಿನ ತಮಿಳುನಾಡಿನಲ್ಲಿ ಮೂರು ದಿನ ಹಳದಿ ಅಲರ್ಟ್ ಘೋಷಿಸಲಾಗಿದೆ. ಚಂಡಮಾರುತದ ಪರಿಚಲನೆಯೂ ಬಂಗಾಳಕೊಲ್ಲಿಯತ್ತ ಸಾಗಿ ವಾಯುಭಾರ ಕುಸಿತವಾಗಲಿದೆ. ಈ ಮಾರುತಗಳು ತಮಿಳುನಾಡು ಕರಾವಳಿಯತ್ತ ಚಲಿಸುವ ಸಾಧ್ಯತೆಗಳಿರುವ ಪರಿಣಾಮ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಹೇಳಿದೆ.

ಅಕಾಲಿಕವಾಗಿ ಸುರಿದ ಭಾರಿ ಮಳೆ (Unseasonal Rain) ಸೃಷ್ಟಿಸಿದ ಅವಾಂತರಗಳಿಗೆ ಲೆಕ್ಕವಿಲ್ಲ. ಮಳೆಯಿಂದಾಗಿ ಒಂದು ಕಡೆ ರೈತ ಸಮುದಾಯ (Famers) ಸಂಕಷ್ಟಕ್ಕೆ ಗುರಿಯಾಗಿದೆ. ಧಾರವಾಡ ಜಿಲ್ಲೆಯಲ್ಲಿ (Dharwad District) ಸುಮಾರು ಒಂದು ಲಕ್ಷ ಎಕರೆ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಕೈಗೆ ಬಂದ ತುತ್ತು ರೈತರ ಬಾಯಿಗೆ ಬಾರದಂತಾಗಿದೆ. ಇದು ಹೀಗಿರಬೇಕಾದರೆ ಅತಿಯಾದ ಮಳೆ ಹೊಡೆತಕ್ಕೆ ಜನಸಾಮಾನ್ಯನೂ ಕಕ್ಕಾಬಿಕ್ಕಿಯಾಗುವಂತಾಗಿದೆ. ತರಕಾರಿಗಳ ದರ ದಿಢೀರ್ ಏರಿಕೆ(Price Hike)ಯಾಗಿದ್ದು, ಗ್ರಾಹಕನ ಜೇಬಿಗೆ ಕತ್ತರಿ ಬೀಳುವಂತಾಗಿದೆ
Published by:Mahmadrafik K
First published: