Karnataka Weather Today; ಇಂದು ಮತ್ತು ನಾಳೆ ಲಘು ಮಳೆ ಸಾಧ್ಯತೆ: ಅಕಾಲಿಕ ಮಳೆಗೆ ರೈತರ ಕಣ್ಣೀರು, ಗ್ರಾಹಕರ ಜೇಬಿಗೆ ಬೆಲೆ ಏರಿಕೆಯ ಬಿಸಿ

ಉತ್ತರ ಕರ್ನಾಟಕದ (North Karnataka) ಭಾಗಗಳಲ್ಲಿ ಚಳಿಯ ಪ್ರಮಾಣ ಏರಿಕೆಯಾಗುತ್ತಿದೆ. ಬೀದರ್ ನಲ್ಲಿ ಕನಿಷ್ಠ 14 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 27 ಮತ್ತು ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Karnataka Weather Report Dec 17, 2021: ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿದ್ರೆ, ಬಯಲು ಸೀಮೆಯಲ್ಲಿ ಮೋಡ ಕವಿದ ವಾತಾವಾರಣ (Cloudy Weather) ಇರಲಿದೆ. ಶಿವಮೊಗ್ಗ, ಮೈಸೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಹಾಸನ, ಚಿಕ್ಕಮಗಳೂರಿನಲ್ಲಿ ಮಳೆಯಾಗುವ (Rainfall) ನಿರೀಕ್ಷೆಗಳಿವೆ. ಇವತ್ತು ಸಹ ಬೆಂಗಳೂರಿನಲ್ಲಿ (Bengaluru Weather) ಮೋಡ ಕವಿದ ವಾತಾವರಣವೇ ಇರಲಿದ್ದು, ಸಿಂಚನ ಮಳೆಯಾಗಲಿದೆ. ಇನ್ನು ಉತ್ತರ ಕರ್ನಾಟಕದ (North Karnataka) ಭಾಗಗಳಲ್ಲಿ ಚಳಿಯ ಪ್ರಮಾಣ ಏರಿಕೆಯಾಗುತ್ತಿದೆ. ಬೀದರ್ ನಲ್ಲಿ ಕನಿಷ್ಠ 14 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 27 ಮತ್ತು ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

ರಾಜ್ಯದ ಜಿಲ್ಲಾವಾರು ಹವಾಮಾನ ವರದಿ (ಗರಿಷ್ಠ ಮತ್ತು ಕನಿಷ್ಠ ಡಿಗ್ರಿ ಸೆಲ್ಸಿಯಸ್ ಗಳಲ್ಲಿ)

ಬೆಂಗಳೂರು 27-16, ಮೈಸೂರು 29-17, ಚಾಮರಾಜನಗರ 29-17, ರಾಮನಗರ 28-16, ಮಂಡ್ಯ 29-17, ಬೆಂಗಳೂರು ಗ್ರಾಮಾಂತರ 27-16, ಚಿಕ್ಕಬಳ್ಳಾಪುರ 26-14, ಕೋಲಾರ 26-15, ಹಾಸನ 27-15, ಚಿಕ್ಕಮಗಳೂರು 27-14, ದಾವಣಗೆರೆ 30-17, ಶಿವಮೊಗ್ಗ 31-17, ಕೊಡಗು 28-16, ತುಮಕೂರು 27-16

ಉಡುಪಿ 33-23, ಮಂಗಳೂರು 32-23, ಉತ್ತರ ಕನ್ನಡ 32-17, ಧಾರವಾಡ 29-16, ಹಾವೇರಿ 31-16, ಹುಬ್ಬಳ್ಳಿ 30-16, ಬೆಳಗಾವಿ 29-16, ಗದಗ 29-16, ಕೊಪ್ಪಳ 29-16, ವಿಜಯಪುರ 29-16, ಬಾಗಲಕೋಟ 31-16, ಕಲಬುರಗಿ 30-16, ಬೀದರ್ 28-14, ಯಾದಗಿರಿ 31-16, ರಾಯಚೂರ 30-16, ಬಳ್ಳಾರಿ 29-17

ಇದನ್ನೂ ಓದಿ:  ಶುಕ್ರವಾರದ ಈ ದಿನ ಸಿಂಹರಾಶಿ ಅವರಿಗೆ ಹಣಕಾಸಿನ ಸಮಸ್ಯೆ; ಇಲ್ಲಿದೆ 12 ರಾಶಿಗಳ ದಿನಭವಿಷ್ಯ

ಮಾವಿನ ಬೆಳೆಯ ಮೇಲೆ ಅಕಾಲಿಕ ಮಳೆಯ ಎಫೆಕ್ಟ್

ಕರ್ನಾಟಕದ ಕೆಲವು ಭಾಗಗಳಲ್ಲಿ ಇತ್ತೀಚಿನ ಅಕಾಲಿಕ ಮಳೆ ಮತ್ತು ಮೋಡ ಕವಿದ ವಾತಾವರಣವು ಸತತ ಎರಡನೇ ವರ್ಷವೂ ಮಾವಿನ ಬೆಳೆಯ ಮೇಲೆ ಪರಿಣಾಮ ಬೀರಬಹುದು. ಅಕಾಲಿಕ ಮಳೆಯಿಂದಾಗಿ ಹೂ ಬಿಡುವ ಪ್ರಕ್ರಿಯೆಗೂ ಅಡ್ಡಿಯಾಗಿದೆ. ಚಳಿಗಾಲದ ಆರಂಭದ ಹೊರತಾಗಿಯೂ, ಇನ್ನೂ ಅನೇಕ ಭಾಗಗಳಲ್ಲಿ ಮಳೆಯಾಗುತ್ತಿದೆ, ಇದರಿಂದಾಗಿ ಹೂಬಿಡುವ ಪ್ರಕ್ರಿಯೆಗೆ ಅನುಕೂಲಕರ ಹವಾಮಾನ ಪರಿಸ್ಥಿತಿ ನಿರ್ಮಾಣಗೊಳ್ಳುತ್ತಿಲ್ಲ ಹೂ ಬಿಡುವ ಪ್ರಕಿಯೆಗೆ ಶುಷ್ಕ ಮತ್ತು ಶೀತ ಹವಾಮಾನ ಅಗತ್ಯ. ಆದರೆ ನಿರಂತರ ಸುರಿಯುತ್ತಿರುವ ಮಳೆ ಈ ನೈಸರ್ಗಿಕ ಹೂ ಬಿಡುವ ಪ್ರಕ್ರಿಯೆಗೆ ಅಡ್ಡಿಯುನ್ನುಂಟು ಮಾಡುತ್ತಿದೆ.

ಚೆನ್ನೈ, ಚೆಂಗಲ್ಪಟ್ಟು, ಕಾಂಚೀಪುರಂ, ತಿರುವಳ್ಳೂರು, ವಿಲ್ಲುಪುರಂ, ಕಡಲೂರು, ನಾಗಪಟ್ಟಿಣಂ, ತಿರುವರೂರು, ತಂಜಾವೂರು, ಮೈಲಡುತುರೈ ಮತ್ತು ತಮಿಳುನಾಡಿನ ಕಡಲೂರು ಜಿಲ್ಲೆಗಳಲ್ಲಿ ಮತ್ತು ಕಾರೈಕಲ್ ಪ್ರದೇಶದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ:  ಸರ್ಕಾರಿ ಯೋಜನೆಯ ಲಾಭ ಪಡೆಯಲು ಸ್ವಂತ ತಂಗಿಯನ್ನೇ ಮದುವೆಯಾದ ಅಣ್ಣ

ಮುಂದಿನ 3 ದಿನಗಳಲ್ಲಿ ತಮಿಳುನಾಡು-ಪುದುಚೇರಿ-ಕಾರೈಕಲ್, ಕೇರಳ- ಮಾಹೆ, ಲಕ್ಷದ್ವೀಪ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮತ್ತು ಮುಂದಿನ 2 ದಿನಗಳಲ್ಲಿ ದಕ್ಷಿಣ ಆಂಧ್ರಪ್ರದೇಶದಲ್ಲಿ ಪ್ರತ್ಯೇಕ/ಚದುರಿದ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ(Moderate Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಹೇಳಿದೆ.

ನಿರಂತರ ಮಳೆಯಿಂದಾಗಿ ತರಕಾರಿ ಬೆಲೆ ಏರಿಕೆ

ರಾಜ್ಯದಲ್ಲಿ ನಿರಂತರ ಮಳೆಯಿಂದಾಗಿ (Karnataka Rains) ಮಾರುಕಟ್ಟೆಗಳಿಗೆ (Market) ಹಣ್ಣು, ತರಕಾರಿಯ (Fruits And Vegetables) ಪೂರೈಕೆ ಆಗುತ್ತಿಲ್ಲ. ಪರಿಣಾಮ ತರಕಾರಿ ಬೆಲೆಯಲ್ಲಿ ಏರಿಕೆ (Price Hike)ಯಾಗಿದ್ದು, ಮಳೆಯ ಚಳಿಯಲ್ಲಿ ಬೆಲೆ ಏರಿಕೆ ಗ್ರಾಹಕರ (Customer) ಜೇಬನ್ನು ಸುಡುತ್ತಿದೆ. ಹಾಪ್ ಕಾಮ್ಸ್ ಗಳಲ್ಲೂ ದರ ಏರಿಕೆಯಾಗಿದೆ. ಇದೇ ರೀತಿ ಮಳೆ ಮುಂದುವರಿದ್ರೆ ತರಕಾರಿ ಮತ್ತು ಹಣ್ಣುಗಳ ಬೆಲೆ ಇನ್ನಷ್ಟು ಏರಿಕೆಯಾಗಲಿದೆ ಎಂದು ಹೇಳಲಾಗುತ್ತಿದೆ.

ಅಕಾಲಿಕ ಮಳೆಯಿಂದಾಗಿ ಬೆಳೆದಿರುವ ತರಕಾರಿ ನೀರಿನಲ್ಲಿ ಕೊಳೆಯುವಂತಾಗಿದೆ. ಮತ್ತೊಂದು ಕಡೆ ತರಕಾರಿ ಕಟಾವು ಮಾಡಲು ಸಹ ರೈತರಿಗೆ ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆ ಮಾರುಕಟ್ಟೆಯಲ್ಲಿ ಬೆಲೆ ಏರಿಕೆ ಆಗುತ್ತಿದೆ
Published by:Mahmadrafik K
First published: