HOME » NEWS » State » KARNATAKA WEATHER HEAVY RAIN EXPECTED IN BANGALORE DUE TO NIVAR CYCLONE EFFECT BENGALURU RAIN SCT

Karnataka Weather: ನಿವಾರ್ ಚಂಡಮಾರುತ; ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ 2 ದಿನ ಭಾರೀ ಮಳೆ

Karnataka Rain Updates: ನಿವಾರ್ ಚಂಡಮಾರುತದ ಪರಿಣಾಮದಿಂದ ಇಂದು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ. ನ. 25 ಮತ್ತು 26ರಂದು ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ.

news18-kannada
Updated:November 24, 2020, 8:41 AM IST
Karnataka Weather: ನಿವಾರ್ ಚಂಡಮಾರುತ; ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ 2 ದಿನ ಭಾರೀ ಮಳೆ
ಮಳೆಯಿಂದ ಜಲಾವೃತವಾದ ಬೆಂಗಳೂರು
  • Share this:
ಬೆಂಗಳೂರು (ನ. 24): ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ತಮಿಳುನಾಡಿಗೆ ನಿವಾರ್ ಚಂಡಮಾರುತ ಅಪ್ಪಳಿಸಲಿದೆ. ಇದರ ಪರಿಣಾಮವಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ನಾಳೆಯಿಂದ 2 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಪುದುಚೆರಿ ಮತ್ತು ತಮಿಳುನಾಡಿನ ಸಮುದ್ರ ತೀರದ ಊರುಗಳಲ್ಲಿ ನಿವಾರ್ ಚಂಡಮಾರುತದಿಂದ ಭೂಕುಸಿತವೂ ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿವಾರ್ ಚಂಡಮಾರುತದ ಪರಿಣಾಮದಿಂದ ಇಂದು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ. ನ. 25 ಮತ್ತು 26ರಂದು ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ.

ನಾಳೆಯಿಂದ 2 ದಿನ ರಾಜ್ಯದ ಎಲ್ಲಾ ಭಾಗದಲ್ಲೂ ಮಳೆಯಾಗುವ ಸಾಧ್ಯತೆಯಿದೆ. ಇಂದು ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಕೆಲವೆಡೆ ಮಳೆಯಾಗಲಿದೆ. ನ. 25, 26 ರಂದು ಎರಡು ದಿನ ರಾಜ್ಯದ ಎಲ್ಲಾ ಭಾಗದಲ್ಲೂ ಮಳೆಯಾಗಲಿದ್ದು, ಬೆಂಗಳೂರು‌ ನಗರ,‌ ಗ್ರಾಮಾಂತರ, ಕೋಲಾರ‌, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ, ಚಾಮರಾಜನಗರದಲ್ಲಿ ಭಾರೀ‌ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ, ಈ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ನ. 25ರಿಂದ 27ರವರೆಗೆ ಕರ್ನಾಟಕದ ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ನಕಲಿ ಪರೀಕ್ಷಾರ್ಥಿ ಬಂಧನದಿಂದ ರಾಜ್ಯದ ನಕಲಿ ಪರೀಕ್ಷಾ ಜಾಲ ಪತ್ತೆ

ಇರಾನ್‌ನಿಂದ ಪ್ರಸ್ತಾಪಿಸಲ್ಪಟ್ಟ ಚಂಡಮಾರುತದ ಹೆಸರು 'ನಿವಾರ್'. ನವೆಂಬರ್ 25ರಂದು ತಮಿಳುನಾಡಿನ ಕಾರೈಕಾಲ್ ಮತ್ತು ಮಾಮಲ್ಲಪುರಂ ನಡುವೆ ವಾಯುವ್ಯ ದಿಕ್ಕಿನಲ್ಲಿ ಚಲಿಸಲಿದೆ. ದು ಮುಂದೆ ತಮಿಳುನಾಡು ಮತ್ತು ಪುದುಚೇರಿ ಕರಾವಳಿಗಳನ್ನು ದಾಟುವ ನಿರೀಕ್ಷೆಯಿದೆ. ಭಾರತದ ಪೂರ್ವ ಕರಾವಳಿಯನ್ನು ತಲುಪುವ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ, ತಮಿಳುನಾಡು ಮತ್ತು ಈಶಾನ್ಯ ಶ್ರೀಲಂಕಾಗಳಲ್ಲೂ ವಾಯುಭಾರ ಕುಸಿತವಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Youtube Video

ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್​ನಲ್ಲಿ ನವೆಂಬರ್ 25ರಂದು ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದಿನಿಂದ ನ. 26ರವರೆಗೆ ಈ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ. ರಾಯಲಸೀಮಾ, ತೆಲಂಗಾಣ, ದಕ್ಷಿಣ ಒಳನಾಡು ಕರ್ನಾಟಕ ಮತ್ತು ಕರಾವಳಿ ಆಂಧ್ರ ಪ್ರದೇಶದಲ್ಲಿ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬುಧವಾರದವರೆಗೂ ಮೀನುಗಾರರು ಸಮುದ್ರಕ್ಕೆ ತೆರಳಿದಂತೆ ಸೂಚಿಸಲಾಗಿದೆ.
Published by: Sushma Chakre
First published: November 24, 2020, 8:40 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories