HOME » NEWS » State » KARNATAKA WEATHER HEAVY RAIN EXPECTED IN COASTAL KARNATAKA YELLOW ALERT ISSUED SCT

Karnataka Weather: ಕರ್ನಾಟಕದ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ; ಸೆ. 19ರವರೆಗೆ ಹಳದಿ ಅಲರ್ಟ್​ ಘೋಷಣೆ

Karnataka Rain Updates: ಕರಾವಳಿ ಭಾಗದಲ್ಲಿ ಇಂದಿನಿಂದ ಸೆಪ್ಟೆಂಬರ್ 19ರವರೆಗೆ ಅತೀ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಸೋಮವಾರ ಮಲೆನಾಡಿನ ಬಹುತೇಕ ಭಾಗಗಳಲ್ಲಿ ಧಾರಾಕಾರ ಮಳೆಯಾಗಿದೆ.

news18-kannada
Updated:September 15, 2020, 10:09 AM IST
Karnataka Weather: ಕರ್ನಾಟಕದ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ; ಸೆ. 19ರವರೆಗೆ ಹಳದಿ ಅಲರ್ಟ್​ ಘೋಷಣೆ
ಮಳೆ
  • Share this:
ಬೆಂಗಳೂರು (ಸೆ. 15): ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮತ್ತೆ ಮಳೆಯ ಆರ್ಭಟ ಹೆಚ್ಚಾಗಿದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡದ ಹಲವೆಡೆ ಮಳೆ ಅಧಿಕವಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಇಂದಿನಿಂದ ಸೆಪ್ಟೆಂಬರ್ 19ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ 5 ದಿನಗಳ ಕಾಲ ಹಳದಿ ಅಲರ್ಟ್ ಘೋಷಿಸಲಾಗಿದೆ. ನಿನ್ನೆ ಸ್ವಲ್ಪ ಕಡಿಮೆಯಾಗಿದ್ದ ಮಳೆಯ ಅಬ್ಬರ ಇಂದಿನಿಂದ ಮತ್ತೆ ಚುರುಕುಗೊಳ್ಳಲಿದೆ.

ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದಿನಿಂದ ಸೆಪ್ಟೆಂಬರ್ 19ರವರೆಗೆ ಅತೀ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಮಲೆನಾಡಿನಲ್ಲೂ ಮಳೆಯ ಅಬ್ಬರ ಹೆಚ್ಚಾಗಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ.

ಇದನ್ನೂ ಓದಿ: ಭದ್ರಾ ಜಲಾಶಯ ಭರ್ತಿ; ರೈತರಲ್ಲಿ ಮೂಡಿದ ಸಂತಸ

ಉತ್ತರ ಕರ್ನಾಟಕ ಭಾಗದ ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಕಲುರ್ಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಕೂಡ ಮಳೆ ಹೆಚ್ಚಾಗಲಿದ್ದು, ಇಂದಿನಿಂದ ಸೆಪ್ಟೆಂಬರ್ 17ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತಗಳಿಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಸೂಚಿಸಲಾಗಿದೆ

ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಯಾದಗಿರಿ, ರಾಯಚೂರು, ಕಲಬುರಗಿ, ಬೀದರ್, ಮುಂಬೈ ಕರ್ನಾಟಕದ ಬೆಳಗಾವಿ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿಯೂ ಇಂದು ಭಾರೀ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ. ಸೋಮವಾರ ಮಲೆನಾಡಿನ ಬಹುತೇಕ ಭಾಗಗಳಲ್ಲಿ ಧಾರಾಕಾರ ಮಳೆಯಾಗಿದೆ.

ಬಳ್ಳಾರಿಯ ಕಂಪ್ಲಿಯಲ್ಲಿ ಮಳೆಯಿಂದಾಗಿ ಎರಡು ಮನೆಗಳು ಹಾನಿಗೊಳಗಾಗಿವೆ. ಯಾದಗಿರಿಯಲ್ಲೂ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಶಿವಮೊಗ್ಗದ ಭದ್ರಾ ಡ್ಯಾಂ ಭರ್ತಿಯಾಗಿದ್ದು, ನಿನ್ನೆ 1,751 ಕ್ಯೂಸೆಕ್ಸ್​ ನೀರನ್ನು ಹೊರಬಿಡಲಾಗಿದೆ. ಜಲಾಶಯದಲ್ಲಿ ನೀರು ಭರ್ತಿಯಾಗಿರುವುದರಿಂದ ನಾಲ್ಕು ಗೇಟುಗಳನ್ನು ತೆರೆಯಲಾಗಿದೆ.
Published by: Sushma Chakre
First published: September 15, 2020, 10:09 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories