• Home
  • »
  • News
  • »
  • state
  • »
  • Karnataka Weather: ಮಲೆನಾಡು, ಕರಾವಳಿಯಲ್ಲಿ ಸೆ. 10ರವರೆಗೆ ಭಾರೀ ಮಳೆ

Karnataka Weather: ಮಲೆನಾಡು, ಕರಾವಳಿಯಲ್ಲಿ ಸೆ. 10ರವರೆಗೆ ಭಾರೀ ಮಳೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

Karnataka Rain: ಬೆಂಗಳೂರಿನಲ್ಲಿಯೂ ಇನ್ನೆರಡು ದಿನ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಕರ್ನಾಟಕದ ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಇಂದಿನಿಂದ 4 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ.

  • Share this:

ಬೆಂಗಳೂರು (ಸೆ. 7): ಕರ್ನಾಟಕದ ಹಲವು ಭಾಗಗಳಲ್ಲಿ ಸೆಪ್ಟೆಂಬರ್ 10ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಬೆಂಗಳೂರಿನ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮುನ್ಸೂಚನೆ ನೀಡಿದ್ದಾರೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡು ಭಾಗದಲ್ಲೂ ತಕ್ಕಮಟ್ಟಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೆಳಗಾವಿ, ಧಾರಾವಾಡ, ಗದಗದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.


ಬೆಂಗಳೂರಿನಲ್ಲಿಯೂ ಇನ್ನೆರಡು ದಿನ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಕರ್ನಾಟಕದ ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಇಂದಿನಿಂದ 4 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಮಲೆನಾಡು ಮತ್ತು ಕರಾವಳಿಯಲ್ಲಿ ಸೆ. 10ರವರೆಗೂ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್​ ಘೋಷಿಸಿದೆ.


ಕರ್ನಾಟಕದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯದಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಹೀಗಾಗಿ, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ತುಮಕೂರು, ರಾಮನಗರ, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ಸೆ. 9ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.


ಇದನ್ನೂ ಓದಿ: ವಿಜಯಪುರದಲ್ಲಿ ಭಾರೀ ಪ್ರಮಾಣದ ಗಾಂಜಾ, ಅಕ್ರಮ ಮದ್ಯ ವಶ; 51 ಜನರ ಬಂಧನ


ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಕೂಡ ಉತ್ತಮ ಮಳೆಯಾಗುತ್ತಿದೆ. ಇಂದಿನಿಂದ ಆ ಪ್ರದೇಶಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಈಗಾಗಲೇ ಆಲಮಟ್ಟಿ ಜಲಾಶಯದಲ್ಲಿ ನೀರು ಭರ್ತಿಯಾಗಿದ್ದು, ಎಲ್ಲ ಗೇಟುಗಳನ್ನು ತೆರೆಯಲಾಗಿದೆ. ತುಂಗಾ ಜಲಾಶಯ ಕೂಡ ಭರ್ತಿಯಾಗಿದೆ. ರಾಜ್ಯದ ಉಳಿದ ಡ್ಯಾಂಗಳಲ್ಲಿಯೂ ನೀರಿನ ಪ್ರಮಾಣ ಹೆಚ್ಚಾಗಿದೆ.


ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಮಳೆಗೆ ಪೂರಕವಾದ ವಾತಾವರಣ ಸೃಷ್ಟಿಯಾಗಲಿದೆ. ಹೀಗಾಗಿ, ರಾಜ್ಯಾದ್ಯಂತ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಸೆ. 10ರವರೆಗೆ ಕರ್ನಾಟಕದಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಮಲೆನಾಡು, ಕರಾವಳಿಯಲ್ಲಿ ಬೇರೆ ಜಿಲ್ಲೆಗಳಿಗಿಂತ ಮಳೆ ಹೆಚ್ಚಾಗಲಿದೆ. ನಿನ್ನೆ ರಾತ್ರಿ ಶಿವಮೊಗ್ಗದಲ್ಲಿ ಭಾರೀ ಮಳೆಯಾಗಿದೆ. ಚಿಕ್ಕಮಗಳೂರಿನಲ್ಲಿಯೂ ನಿನ್ನೆ ಮಳೆ ಹೆಚ್ಚಾಗಿದೆ.

Published by:Sushma Chakre
First published: