Karnataka Weather: ಕರಾವಳಿಯಲ್ಲಿ ಇಂದು ತುಂತುರು ಮಳೆ; ನ. 5ರಿಂದ ಮಲೆನಾಡು, ಕೊಡಗು, ಹಾಸನದಲ್ಲಿ ಭಾರೀ ಮಳೆ
Karnataka Weather: ಇಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ನ. 5ರಿಂದ 2 ದಿನಗಳ ಕಾಲ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ.
ಬೆಂಗಳೂರು (ನ. 3): ಕರ್ನಾಟಕದಲ್ಲಿ ಮತ್ತೆ ಮಳೆ ಆರಂಭವಾಗಲಿದ್ದು, ಇಂದಿನಿಂದ ನ. 7ರವರೆಗೂ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಈಗಾಗಲೇ ತಮಿಳುನಾಡು, ಆಂಧ್ರ ಪ್ರದೇಶ, ಕೇರಳದಲ್ಲಿ ಮಳೆಯಾಗುತ್ತಿದೆ. ಇಂದು ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ನವೆಂಬರ್ 5ರಿಂದ ನ. 7ರವರೆಗೆ ಮಲೆನಾಡು, ಕರಾವಳಿಯ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ.
ಅರುಣಾಚಲ ಪ್ರದೇಶ, ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಮೇಘಾಲಯ, ಕೇರಳ, ತಮಿಳುನಾಡು ರಾಜ್ಯಗಳಲ್ಲಿಯೂ ಮಳೆಯಾಗುತ್ತಿದೆ. ಇದರ ಪರಿಣಾಮದಿಂದ ಕರ್ನಾಟಕದಲ್ಲೂ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಇಂದಿನಿಂದ ನ. 7ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆ ಹೆಚ್ಚಾಗಲಿದೆ. ನ. 5ರಿಂದ 7ರವರೆಗೆ ಕರಾವಳಿ ಜಿಲ್ಲೆಗಳ ಜೊತೆಗೆ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಮಳೆಯಾಗಲಿದೆ. ನ. 5ರ ಬಳಿಕ ರಾಜ್ಯದಲ್ಲಿ 2-3 ದಿನ ಭಾರೀ ಮಳೆಯ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಕರ್ನಾಟಕದಲ್ಲಿ ಈಗಾಗಲೇ ಹಿಂಗಾರು ಮಳೆ ಆರಂಭವಾಗಿದ್ದು, ಡಿಸೆಂಬರ್ ತಿಂಗಳ ಅಂತ್ಯದವರೆಗೂ ಆಗಾಗ ಮಳೆಯಾಗುವ ಸಾಧ್ಯತೆಯಿದೆ. ನ. 5ರಿಂದ 2 ದಿನಗಳ ಕಾಲ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ನ. 5ರಿಂದ ಸಾಧಾರಣ ಮಳೆಯಾಗಲಿದೆ.
ಕಳೆದ ಒಂದು ವಾರದಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚಾಗಿದೆ. ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ನ. 7ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ.
Published by:Sushma Chakre
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ