HOME » NEWS » State » KARNATAKA WEATHER HEAVY RAIN EXPECTED IN MALNAD REGION COASTAL KARNATAKA KODAGU BENGALURU MONSOON 2021 SCT

Karnataka Weather: ಕರ್ನಾಟಕದಲ್ಲಿ ಮೇ 10ರವರೆಗೆ ಭಾರೀ ಮಳೆ; ಮಲೆನಾಡು, ಕೊಡಗು, ಕರಾವಳಿಯಲ್ಲಿ ಯೆಲ್ಲೋ ಅಲರ್ಟ್​

Karnataka Rain: ಇನ್ನು 3 ದಿನಗಳ ಕಾಲ ಮಲೆನಾಡು, ಕರಾವಳಿ, ಕೊಡಗು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಹೆಚ್ಚಳವಾಗುವ ಸಾಧ್ಯತೆಯಿದೆ. ಹೀಗಾಗಿ, ಕರ್ನಾಟಕದ 9 ಜಿಲ್ಲೆಗಳಲ್ಲಿ ಮೇ 10ರವರೆಗೆ ಹಳದಿ ಅಲರ್ಟ್​ ಘೋಷಿಸಲಾಗಿದೆ.

news18-kannada
Updated:May 7, 2021, 4:19 PM IST
Karnataka Weather: ಕರ್ನಾಟಕದಲ್ಲಿ ಮೇ 10ರವರೆಗೆ ಭಾರೀ ಮಳೆ; ಮಲೆನಾಡು, ಕೊಡಗು, ಕರಾವಳಿಯಲ್ಲಿ ಯೆಲ್ಲೋ ಅಲರ್ಟ್​
ಸಾಂದರ್ಭಿಕ ಚಿತ್ರ
  • Share this:
Karnataka Rains: ಬೆಂಗಳೂರು (ಮೇ 7): ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆಯಾಗುತ್ತಿದೆ. ಇಂದು ಕೂಡ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ಸಂಜೆಯ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ. ಇನ್ನು 3 ದಿನಗಳ ಕಾಲ ಮಲೆನಾಡು, ಕರಾವಳಿ, ಕೊಡಗು, ಬೆಂಗಳೂರಿನಲ್ಲಿ ಮಳೆ ಹೆಚ್ಚಳವಾಗುವ ಸಾಧ್ಯತೆಯಿದೆ. ಹೀಗಾಗಿ, ಕರ್ನಾಟಕದ 9 ಜಿಲ್ಲೆಗಳಲ್ಲಿ ಮೇ 10ರವರೆಗೆ ಹಳದಿ ಅಲರ್ಟ್​ ಘೋಷಿಸಲಾಗಿದೆ.

ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ 3 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಕರಾವಳಿಯ ಉಡುಪಿ, ದಕ್ಷಿಣ ಕನ್ನಡದಲ್ಲಿ ಜೋರಾಗಿ ಮಳೆಯಾಗಿದ್ದು, ಕೊಡಗು, ಬೆಂಗಳೂರಿನಲ್ಲಿಯೂ ಮಳೆ ಸುರಿದಿದೆ. ಇಂದು ಕೂಡ ಈ ಭಾಗಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಹೆಚ್ಚಾಗಿದೆ.




ಮಳೆಯ ಕಾರಣದಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಚಿತ್ರದುರ್ಗ, ಹಾಸನ ಜಿಲ್ಲೆಗಳಲ್ಲಿ ಇಂದಿನಿಂದ ಮೇ 10ರವರೆಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಜೊತೆಗೆ ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ವಿಜಯಪುರ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರ್ಗಿ, ಹುಬ್ಬಳ್ಳಿ, ರಾಯಚೂರಿನಲ್ಲೂ ಇನ್ನು 3 ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



ನಿನ್ನೆ ಶಿವಮೊಗ್ಗದ ತೀರ್ಥಹಳ್ಳಿ, ಹೊಸನಗರ, ಸಾಗರ, ಶಿಕಾರಿಪುರ ಸುತ್ತಮುತ್ತ ಮಳೆ ಸುರಿದಿದೆ. ದಕ್ಷಿಣ ಕನ್ನಡದ ಸುಳ್ಯ, ಬೆಳ್ತಂಗಡಿ, ಪುತ್ತೂರು ಭಾಗದಲ್ಲೂ ನಿನ್ನೆ ಮಳೆಯಾಗಿದೆ. ಇಂದು ಮಧ್ಯಾಹ್ನದಿಂದ ಉತ್ತರ ಕರ್ನಾಟಕದ ವಿಜಯಪುರ ಜಿಲ್ಲೆಯ ಸುತ್ತಮುತ್ತ ಗುಡುಗು ಸಹಿತ ಭಾರೀ ಮಳೆಯಾಗಿದೆ. ಇನ್ನೂ ಮಳೆ ಮುಂದುವರೆದಿದ್ದು, ರಾತ್ರಿಯವರೆಗೂ ಸುರಿಯುವ ಲಕ್ಷಣಗಳು ಕಾಣುತ್ತಿವೆ.
Youtube Video

ಕರ್ನಾಟಕ ಮಾತ್ರವಲ್ಲದೆ ನೆರೆಯ ರಾಜ್ಯವಾದ ಕೇರಳ, ಅಸ್ಸಾಂ, ಸಿಕ್ಕಿಂ, ಪಶ್ಚಿಮ ಬಂಗಾಳ, ಮೇಘಾಲಯದಲ್ಲೂ ಇಂದು ಮಳೆ ಹೆಚ್ಚಾಗಲಿದೆ. ಜೂನ್ 1ರಂದು ಕೇರಳಕ್ಕೆ ಮಾನ್ಸೂನ್ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Published by: Sushma Chakre
First published: May 7, 2021, 4:19 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories