HOME » NEWS » State » KARNATAKA WEATHER HEAVY RAIN EXPECTED IN MALNAD REGION MYSORE AND KODAGU ON WEDNESDAY SCT

ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಮೈಸೂರು, ಹಾಸನದಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ

Karnataka Rain Updates: ಕೇರಳ, ತಮಿಳುನಾಡು ಮತ್ತು ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ನಾಳೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

news18-kannada
Updated:October 27, 2020, 10:02 AM IST
ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಮೈಸೂರು, ಹಾಸನದಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ
  • Share this:
ಬೆಂಗಳೂರು (ಅ. 27): ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಎರಡು ದಿನಗಳ ಹಿಂದೆ ಮಳೆಯ ಅಬ್ಬರ ಹೆಚ್ಚಾಗಿತ್ತು. ಇದೀಗ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಕೊಂಚ ಕಡಿಮೆಯಾಗಿದೆ.  ಆದರೆ, ಕೇರಳ, ತಮಿಳುನಾಡು ಮತ್ತು ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಹಾಗೂ ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ನಾಳೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. 

ನಿನ್ನೆ ರಾಜ್ಯದ ಹಲವೆಡೆ ತುಂತುರು ಮಳೆಯಾಗಿದೆ. ಇಂದು ರಾತ್ರಿಯವರೆಗೆ ರಾಜ್ಯದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯಿಂದಾಗಿ ಪ್ರವಾಹದ ಭೀತಿ ಅನುಭವಿಸಿದ್ದ ಬೆಂಗಳೂರಿಗರು ಈಗ ನಿಟ್ಟುಸಿರು ಬಿಟ್ಟಿದ್ದಾರೆ. ಸೋಮವಾರ ಬೆಂಗಳೂರು ಉತ್ತರ ಭಾಗದಲ್ಲಿ ಮಾತ್ರ ಕೊಂಚ ಮಳೆಯಾಗಿತ್ತು. ಇನ್ನೆರಡು ದಿನ ಬೆಂಗಳೂರಲ್ಲಿ ಬಿಸಿಲು ಹೆಚ್ಚಲಿದೆ ಎನ್ನಲಾಗಿದೆ.

ಇಂದು ಸಂಜೆಯವರೆಗೆ ಕರ್ನಾಟಕದ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಕೇರಳದ ಹಲವೆಡೆ ಮಳೆಯಾಗುತ್ತಿರುವುದರಿಂದ ಅದರ ಪರಿಣಾವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲೂ ಮಳೆ ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಕೂಡ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಇಂದು ಮತ್ತು ನಾಳೆ ಒಣ ಹವೆ ಇರಲಿದೆ.

ಇದನ್ನೂ ಓದಿ: ಒಳಗೆ ಸೇರಿದರೆ ಗುಂಡು ಹಾಡಿಗೆ ಸ್ಟೆಪ್ ಹಾಕಿದ ಧಾರವಾಡದ ಸ್ವಾಮೀಜಿ!

ಇಂದು ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರಿನ ಕೆಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ . ಈಗ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ತಗ್ಗಿದ್ದು, ದಕ್ಷಿಣ ಒಳನಾಡಿನಲ್ಲಿ ಇಂದು ಸಂಜೆಯವರೆಗೆ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ನಾಳೆ ಮಳೆ ಹೆಚ್ಚಾಗಲಿದೆ.
Youtube Video

ಕೇರಳದ ಕರಾವಳಿ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ಕರ್ನಾಟಕ ಕರಾವಳಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಇಂದಿನವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.
Published by: Sushma Chakre
First published: October 27, 2020, 10:01 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories