HOME » NEWS » State » KARNATAKA WEATHER HEAVY RAIN LASHES IN COASTAL KARNATAKA SHIMOGA UDUPI BENGALURU FROM TODAY MONSOON 2021 SCT

Karnataka Weather: ಮಲೆನಾಡು, ಕರಾವಳಿಯಲ್ಲಿ ಇಂದಿನಿಂದ ಏ. 14ರವರೆಗೆ ಭಾರೀ ಮಳೆ ಸಾಧ್ಯತೆ

Karnataka Rain Updates: ನೈಋತ್ಯ ಚಂಡಮಾರುತದ ಅಬ್ಬರದಿಂದ ದಕ್ಷಿಣ ಭಾರತದ ಹಲವೆಡೆ ಇಂದಿನಿಂದ 3 ದಿನ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದಿನಿಂದ ಏ. 14ರವರೆಗೆ ಮುನ್ನೆಚ್ಚರಿಕಾ ಕ್ರಮವಾಗಿ ಹಳದಿ ಅಲರ್ಟ್​ ಘೋಷಿಸಲಾಗಿದೆ.

news18-kannada
Updated:April 12, 2021, 2:57 PM IST
Karnataka Weather: ಮಲೆನಾಡು, ಕರಾವಳಿಯಲ್ಲಿ ಇಂದಿನಿಂದ ಏ. 14ರವರೆಗೆ ಭಾರೀ ಮಳೆ ಸಾಧ್ಯತೆ
ಸಾಂದರ್ಭಿಕ ಚಿತ್ರ
  • Share this:
Karnataka Rains: ಬೆಂಗಳೂರು (ಏ. 12): ಕರ್ನಾಟಕದ ಹಲವೆಡೆ ಕಳೆದ ಮೂರು ದಿನಗಳಿಂದ ತುಂತುರು ಮಳೆಯಾಗುತ್ತಿದೆ. ಇಂದಿನಿಂದ ಏ. 14ರವರೆಗೆ ರಾಜ್ಯಾದ್ಯಂತ ಮಳೆಯಾಗಲಿದ್ದು, 3 ಜಿಲ್ಲೆಗಳಿಗೆ ಹಳದಿ ಅಲರ್ಟ್​ ಘೋಷಿಸಲಾಗಿದೆ. ಇಂದಿನಿಂದ 2 ದಿನಗಳ ಕಾಲ ಮಳೆ ಹೆಚ್ಚಳವಾಗಿದ್ದು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ನಿನ್ನೆ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗಿದೆ. ಜೊತೆಗೆ, ಉತ್ತರ ಕರ್ನಾಟಕದಲ್ಲಿಯೂ ಗುಡುಗು ಸಹಿತ ಮಳೆಯಾಗಿದೆ. ನೈಋತ್ಯ ಚಂಡಮಾರುತದ ಅಬ್ಬರದಿಂದ ದಕ್ಷಿಣ ಭಾರತದ ಹಲವೆಡೆ ಇಂದಿನಿಂದ 3 ದಿನ ಮಳೆಯಾಗಲಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದಿನಿಂದ ಏ. 14ರವರೆಗೆ ಮುನ್ನೆಚ್ಚರಿಕಾ ಕ್ರಮವಾಗಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ಬೀದರ್, ಬೆಳಗಾವಿ, ಧಾರವಾಡ, ವಿಜಯಪುರ, ಯಾದಗಿರಿ, ಕಲಬುರ್ಗಿಯಲ್ಲೂ ಇಂದಿನಿಂದ ಮಳೆ ಚುರುಕುಗೊಳ್ಳಲಿದೆ. ಶಿವಮೊಗ್ಗ, ಕೊಡಗಿನಲ್ಲೂ ಮಳೆ ಹೆಚ್ಚಳವಾಗುವ ಸಾಧ್ಯತೆಯಿದೆ. ಕುಂದಾಪುರದಲ್ಲಿ ನಿನ್ನೆ ಸುರದ ಮಳೆಗೆ ಅಡಿಕೆ ಮರಗಳು, ಬಾಳೆ ಗಿಡಗಳು ನೆಲಕ್ಕುರುಳಿವೆ.

ಇಂದಿನಿಂದ ಏ. 14ರವರೆಗೆ ರಾಜ್ಯದ ವಿವಿಧೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರ್ನಾಟಕದ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ವಿಜಯಪುರ, ಯಾದಗಿರಿಯಲ್ಲಿ ಇನ್ನು 4 ದಿನ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿಯೂ ಏ. 14ರವರೆಗೆ ಮಳೆಯಾಗಲಿದೆ. ನಿನ್ನೆ ಶಿವಮೊಗ್ಗ, ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಏಪ್ರಿಲ್ 13 ಹಾಗೂ 14ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರದಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇಂದು ಮತ್ತು ನಾಳೆ ಮಲೆನಾಡು, ಕರಾವಳಿಯಲ್ಲಿ ಮಳೆ ಹೆಚ್ಚಳವಾಗುವ ಸಾಧ್ಯತೆಯಿದ್ದು, ಬಾಗಲಕೋಟೆ, ಹುಬ್ಬಳ್ಳಿ, ಯಲ್ಲಾಪುರ, ಶಿರಸಿ, ರಿಪ್ಪನ್​ಪೇಟೆ, ಹೊಸನಗರ, ತೀರ್ಥಹಳ್ಳಿ, ಸಾಗರ, ಭದ್ರಾವತಿ, ಬಾಳೆ ಹೊನ್ನೂರಿನಲ್ಲಿ ಮಳೆಯಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ವಿಜಯಪುರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಇಂದು ಮಳೆ ಮುಂದುವರೆಯಲಿದೆ.

ಉತ್ತರ ಕರ್ನಾಟಕದ ಬಾಗಲಕೋಟೆ, ಹುಬ್ಬಳ್ಳಿ, ವಿಜಯಪುರದಲ್ಲಿ ಭಾರೀ ಮಳೆಯಾಗಿದೆ. ಚಿಕ್ಕಮಗಳೂರಿನ ಮೂಡಿಗೆರೆ, ಕಳಸ ಸುತ್ತಮುತ್ತ ನಿನ್ನೆ ಮಳೆಯಾಗಿದ್ದು, ಇಂದು ಕೂಡ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಕರ್ನಾಟಕ ಮಾತ್ರವಲ್ಲದೆ ತಮಿಳುನಾಡು, ತೆಲಂಗಾಣ, ಕೇರಳದಲ್ಲೂ ಇನ್ನು ಮೂರ್ನಾಲ್ಕು ದಿನ ಭಾರೀ ಮಳೆಯಾಗಲಿದೆ. ಪುದುಚೆರಿ, ಕನ್ಯಾಕುಮಾರಿ, ವಯನಾಡ್, ತಿರುವನಂತಪುರಂ ಸೇರಿದಂತೆ ಕರಾವಳಿ ಕರ್ನಾಟಕದಲ್ಲಿ ಹೆಚ್ಚು ಮಳೆ ಹೆಚ್ಚಳವಾಗಲಿದೆ.
Published by: Sushma Chakre
First published: April 12, 2021, 2:57 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories