HOME » NEWS » State » KARNATAKA WEATHER HEAVY RAINFALL EXPECTED IN UDUPI UTTARA KANNADA DAKSHINA KANNADA SCT

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ 2 ದಿನ ಮಳೆ ಹೆಚ್ಚಳ; ಯೆಲ್ಲೋ ಅಲರ್ಟ್​ ಘೋಷಣೆ

Karnataka Rain: ಉತ್ತರ ಕನ್ನಡ, ಉಡುಪಿ, ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಹಳದಿ ಅಲರ್ಟ್ ಘೋಷಿಸಿದೆ. ಸಮುದ್ರದಲ್ಲಿ ಗಂಟೆಗೆ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

news18-kannada
Updated:August 20, 2020, 2:00 PM IST
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ 2 ದಿನ ಮಳೆ ಹೆಚ್ಚಳ; ಯೆಲ್ಲೋ ಅಲರ್ಟ್​ ಘೋಷಣೆ
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು (ಆ. 20): ಕರ್ನಾಟಕದಾದ್ಯಂತ ನಾಲ್ಕು ದಿನಗಳಿಂದ ಮಳೆಯ ಪ್ರಮಾಣ ಹೆಚ್ಚಾಗಿದೆ. ಮಲೆನಾಡು, ಕರಾವಳಿ, ಕೊಡಗು ಮಾತ್ರವಲ್ಲದೆ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿಯೂ ಮಳೆ ಜಾಸ್ತಿಯಾಗಿದೆ. ಬೆಂಗಳೂರಿನಲ್ಲಿಯೂ 2 ದಿನಗಳಿಂದ ಮಳೆ ಹೆಚ್ಚಾಗಿದೆ. ಇನ್ನು ಎರಡು ದಿನ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಧಿಕವಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದೆ. ಉತ್ತರ ಕನ್ನಡ, ಉಡುಪಿ, ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಹಳದಿ ಅಲರ್ಟ್ ಘೋಷಿಸಿದೆ. ಇಂದು ಮತ್ತು ಹಾಗೂ ಆ. 23ರಂದು ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜಧಾನಿ ಬೆಂಗಳೂರಿನಲ್ಲೂ ಈ ವಾರ ಮಳೆ ಮುಂದುವರೆಯಲಿದ್ದು, ಆಗಸ್ಟ್ 23 ಹಾಗೂ 24ರಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಬಾಗಲಕೋಟೆಯಲ್ಲಿ ಘಟಪ್ರಭಾ ಪ್ರವಾಹ; ಮಿರ್ಜಿ ಗ್ರಾಮದ 50ಕ್ಕೂ ಅಧಿಕ ಮನೆಗಳು ಜಲಾವೃತ

ರಾಜ್ಯದ ಬಹುತೇಕ ಕಡೆ ಈಗಾಗಲೇ ಉತ್ತಮ ಮಳೆಯಾಗಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ‌. ಇನ್ನೊಂದು ವಾರ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಸೇರಿದಂತೆ ಕರಾವಳಿ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ನಿರ್ದೇಶಕ ಸಿ ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ. ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಯ ಬಹುತೇಕ‌ ಕಡೆ ಮಳೆಯಾಗುತ್ತಿದ್ದು, ಇನ್ನೊಂದು ವಾರ ಮಳೆ ಮುಂದುವರೆಯಲಿದೆ. ಕರಾವಳಿ ಜಿಲ್ಲೆಯಲ್ಲಿ ಆಗಸ್ಟ್ 23ರವರೆಗೆ ಹಗುರ, ಸಾಧಾರಣ ಹಾಗೂ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ‌.

ಘಟಪ್ರಭಾ ನದಿಯ ಪ್ರವಾಹ


ಕರಾವಳಿಯನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಕೆಲವು ಕಡೆ ಮಾತ್ರ ಮೋಡ ಕವಿದ ವಾತಾವರಣ ಇರಲಿದೆ. ಸಮುದ್ರದಲ್ಲಿ ಗಂಟೆಗೆ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬಾಗಲಕೋಟೆಯಲ್ಲಿ ಘಟಪ್ರಭಾ ನದಿಯ ಅಬ್ಬರ ಮುಂದುವರೆದಿದೆ. ಇಲ್ಲಿನ ಮಿರ್ಜಿ ಗ್ರಾಮದಲ್ಲಿ 50ಕ್ಕೂ ಹೆಚ್ಚು ಮನೆಗಳು ಮುಳುಗಡೆಯಾಗಿದ್ದು, ಜನರು ಪ್ರವಾಹ ಭೀತಿಯಿಂದ ಕಂಗಾಲಾಗಿದ್ದಾರೆ. ಬೆಳಗಾವಿ, ಬಾಗಲಕೋಟೆಯಲ್ಲಿ ಸುರಿಯುತ್ತಿರುವ ಮಳೆಯಿಂದ ನದಿಗಳ ನೀರಿನ ಮಟ್ಟ ಹೆಚ್ಚಾಗಿದೆ. ಕೃಷ್ಣಾ, ಮಲಪ್ರಭಾ, ಘಟಪ್ರಭಾ ನದಿಗಳು ಉಕ್ಕಿ ಹರಿಯುತ್ತಿವೆ
Published by: Sushma Chakre
First published: August 20, 2020, 9:02 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories