HOME » NEWS » State » KARNATAKA WEATHER ISOLATED RAIN HITS KODAGU MANGALORE CHIKMAGALUR 2 MORE DAYS KARNATAKA RAIN SCT

Karnataka Weather: ಮಲೆನಾಡು, ಕರಾವಳಿ, ಕೊಡಗು ಸೇರಿ ಕರ್ನಾಟಕದ ಹಲವೆಡೆ ಇನ್ನೆರಡು ದಿನ ಮಳೆ ಸಾಧ್ಯತೆ

Karnataka Rain: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ಕೊಡಗು, ಚಿಕ್ಕಮಗಳೂರು, ಕರಾವಳಿ, ಮಲೆನಾಡಿನಲ್ಲಿ ಇನ್ನೆರಡು ದಿನ ಗುಡುಗು ಸಹಿತ ಅಕಾಲಿಕ ಮಳೆಯಾಗುವ ಸಾಧ್ಯತೆಯಿದೆ.

Sushma Chakre | news18-kannada
Updated:February 22, 2021, 1:23 PM IST
Karnataka Weather: ಮಲೆನಾಡು, ಕರಾವಳಿ, ಕೊಡಗು ಸೇರಿ ಕರ್ನಾಟಕದ ಹಲವೆಡೆ ಇನ್ನೆರಡು ದಿನ ಮಳೆ ಸಾಧ್ಯತೆ
ಕೊಡಗಿನಲ್ಲಿ ಸುರಿದ ಆಲಿಕಲ್ಲು ಮಳೆ
  • Share this:
ಬೆಂಗಳೂರು (ಫೆ. 22): ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಫೆ. 233ರವರೆಗೂ ದಕ್ಷಿಣ ಕನ್ನಡ, ಉಡುಪಿ, ಮಲೆನಾಡು ಭಾಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಇನ್ನೆರಡು ದಿನ ಗುಡುಗು ಸಹಿತ ಅಕಾಲಿಕ ಮಳೆಯಾಗುವ ಸಾಧ್ಯತೆಯಿದೆ.

3 ದಿನಗಳಿಂದ ಬೆಂಗಳೂರಿನಲ್ಲಿ ಮಳೆಯಾಗುತ್ತಿದ್ದು, ಇಂದು ಮೋಡ ಕವಿದ ವಾತಾವರಣವಿರಲಿದೆ. ನಿನ್ನೆ ಸಂಜೆಯೂ ಬೆಂಗಳೂರಿನಲ್ಲಿ ಮಳೆ ಅಬ್ಬರಿಸಿದ್ದು, ಹಲವೆಡೆ ರಸ್ತೆಗಳಲ್ಲಿ ನೀರು ನಿಂತಿತ್ತು. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕರ್ನಾಟಕ ಭಾಗದ ಬೆಳಗಾವಿ, ಬೀದರ್, ಧಾರವಾಡ, ಕಲಬುರ್ಗಿ ಹಾಗೂ ಹಾಸನದಲ್ಲಿ ಫೆ. 23ರವರೆಗೂ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಿನ್ನೆ ಉಡುಪಿ, ಮಂಗಳೂರು ಭಾಗದಲ್ಲಿ ಜೋರಾಗಿಯೇ ಮಳೆಯಾಗಿದ್ದು, ಅನಿರೀಕ್ಷಿತ ಮಳೆಯಿಂದ ಕರಾವಳಿಯ ರೈತರು ಕಂಗಾಲಾಗಿದ್ದಾರೆ. ಒಣ ಹಾಕಿದ್ದ ಅಡಿಕೆ, ಭತ್ತ, ಮೆಣಸಿನ ಕಾಳು ನೀರಿನಿಂದ ಒದ್ದೆಯಾಗಿದ್ದು, ಅಂಗಡಿಗಳೊಳಗೆ ನೀರು ನುಗ್ಗಿ ಅವಾಂತರವೂ ಸೃಷ್ಟಿಯಾಗಿತ್ತು. ಚಿಕ್ಕಮಗಳೂರಿನಲ್ಲಿ 2 ದಿನಗಳಿಂದ ಜೋರಾಗಿಯೇ ಮಳೆಯಾಗುತ್ತಿದ್ದು, ಇಂದು ಕೂಡ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಕೊಡಗಿನಲ್ಲಿ ಹಲವೆಡೆ ಆಲಿಕಲ್ಲು ಮಳೆಯಾಗಿದ್ದು, ಕಾಫಿ ಬೆಳೆಗಾರರು ಕಂಗಾಲಾಗಿದ್ದಾರೆ. ಕೊಡಗಿನಲ್ಲಿ ದೊಡ್ಡ ದೊಡ್ಡ ಆಲಿಕಲ್ಲಿನೊಂದಿಗೆ ಸುರಿಯುತ್ತಿರುವ ಮಳೆಯ ವಿಡಿಯೋಗಳು ವೈರಲ್ ಆಗಿವೆ.


ಕರ್ನಾಟಕ ಮಾತ್ರವಲ್ಲದೆ ತೆಲಂಗಾಣ, ತಮಿಳುನಾಡು, ಕೇರಳ, ಛತ್ತೀಸ್​ಗಢದಲ್ಲೂ ಇನ್ನೂ ಮೂರ್ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ತುಮಕೂರು, ಮಲೆನಾಡು, ಕೊಡಗಿನಲ್ಲಿ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆಯಿದೆ.ನಿನ್ನೆ ಉಡುಪಿಯಲ್ಲಿ ಭಾರೀ ಮಳೆಯಾಗಿದ್ದು, ಹೆಬ್ರಿ, ಅಮಾಸೆಬೈಲು, ಹಾಲಾಡಿ, ಶಂಕರನಾರಾಯಣ ಭಾಗದಲ್ಲಿ ಮಳೆ ಸುರಿದಿದೆ. ಹವಾಮಾನ ಇಲಾಖೆ ನೀಡಿರುವ ಮಾಹಿತಿಯಂತೆ, ನಾಳೆ ಮಧ್ಯಾಹ್ನದವರೆಗೆ ಛತ್ತೀಸ್​ಗಢ, ಮಹಾರಾಷ್ಟ್ರ, ತಮಿಳುನಾಡು, ವಿದರ್ಭ, ಪುದುಚೆರಿ, ಕೇರಳ, ಮಾಹೆ, ಕರ್ನಾಟಕದ ಕೆಲವು ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ.
Published by: Sushma Chakre
First published: February 22, 2021, 1:23 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories