ಬೆಂಗಳೂರು (ಡಿ. 12): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಳೆದೊಂದು ವಾರದಿಂದ ತುಂತುರು ಮಳೆಯಾಗುತ್ತಿದೆ. ಇಂದು ಕೂಡ ಮಂಗಳೂರು, ಬೆಳಗಾವಿ, ಶಿವಮೊಗ್ಗ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ದಕ್ಷಿಣ ಭಾರತದ ಕರಾವಳಿ ತೀರಕ್ಕೆ ಬುರೇವಿ ಚಂಡಮಾರುತ ಅಪ್ಪಳಿಸಿದೆ. ಇದರಿಂದ ಇಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಕರಾವಳಿಗೆ ಹೊಂದಿಕೊಂಡಿರುವ ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಉತ್ತರ ಕನ್ನಡ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಮೂರು ದಿನಗಳಿಂದ ಬಿಸಿಲಿನ ದರ್ಶನವಾಗಿದೆ. ಇಂದು ಕೂಡ ಬೆಂಗಳೂರಿನಲ್ಲಿ ಬಿಸಿಲಿನ ತಾಪ ಹೆಚ್ಚಾಗಿರಲಿದೆ. ಕರ್ನಾಟಕದ ಕರಾವಳಿ ತೀರ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದು ಸಾಧಾರಣ ಮಳೆ ಸುರಿಯಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ.
ಇಂದು ಮಂಗಳೂರು, ಉಡುಪಿ, ಮಲೆನಾಡು, ಕೊಡಗು, ಚಿಕ್ಕಮಗಳೂರು, ಹಾಸನದಲ್ಲಿ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಇಂದು ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೆಳಗಾವಿ, ಹಾವೇರಿ, ಗದಗ, ಧಾರವಾಡ, ಹುಬ್ಬಳ್ಳಿ ಭಾಗದಲ್ಲಿ ಕೂಡ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: Gold Rate Today: ಸತತ ಏರಿಕೆ ಕಂಡ ಚಿನ್ನದ ದರ; ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದಿನ ಬೆಲೆಯೆಷ್ಟು?
ಕರ್ನಾಟಕದ ಕರಾವಳಿ ಹಾಗೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಮಲೆನಾಡು ಜಿಲ್ಲೆಗಳಲ್ಲಿ ಕೂಡ ಇಂದು ಚದುರಿದಂತೆ ಅಲ್ಲಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ನೆರೆಯ ರಾಜ್ಯವಾದ ಮಹಾರಾಷ್ಟ್ರದಲ್ಲಿ ನಿನ್ನೆಯಿಂದ ಮಳೆಯಾಗುತ್ತಿದೆ. ಇದರಿಂದ ಮುಂಬೈನಲ್ಲಿ ಚಳಿಯ ಪ್ರಮಾಣವೂ ಹೆಚ್ಚಾಗಿದೆ. ಇಂದು ಕೂಡ ಮುಂಬೈನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಮುಂಬೈನಲ್ಲಿ ಮಳೆಯಾಗುತ್ತಿರುವುದರಿಂದ ಮಹಾರಾಷ್ಟ್ರದ ಗಡಿಯಲ್ಲಿರುವ ಉತ್ತರ ಕರ್ನಾಟಕದ ಬೆಳಗಾವಿಯಲ್ಲೂ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ