ಮಲೆನಾಡು, ಕೊಡಗು, ಹಾಸನದಲ್ಲಿ ಇಂದು ವರುಣನ ಆರ್ಭಟ; ಕರಾವಳಿಯಲ್ಲೂ ತುಂತುರು ಮಳೆ ಸಾಧ್ಯತೆ
Karnataka Rains: ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಹಿಂಗಾರು ಮಳೆ ಆರಂಭವಾಗಲಿದೆ. ನವೆಂಬರ್ 1ರ ವೇಳೆಗೆ ಹಿಂಗಾರು ಮಳೆ ತೀವ್ರಗೊಳ್ಳಲಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗಲಿದೆ.
ಬೆಂಗಳೂರು (ಅ.28): ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಎರಡು ದಿನಗಳ ಹಿಂದೆ ಮಳೆಯ ಅಬ್ಬರ ಹೆಚ್ಚಾಗಿತ್ತು. ಇದೀಗ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಕೊಂಚ ಕಡಿಮೆಯಾಗಿದೆ. ಆದರೆ, ಕೇರಳ, ತಮಿಳುನಾಡು ಮತ್ತು ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಹಾಗೂ ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಇನ್ನು, ಇನ್ನೆರಡು ದಿನಗಳಲ್ಲಿ ರಾಜ್ಯಾದ್ಯಂತ ಹಿಂಗಾರು ಚುರುಕುಗೊಳ್ಳಲಿದ್ದು, ನವೆಂಬರ್ 1ರ ಬಳಿಕ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮಳೆಯ ಆರ್ಭಟ ಕಡಿಮೆಯಾಗಿರುವುದರಿಂದ ಮಳೆಯಿಂದಾಗಿ ಪ್ರವಾಹದ ಭೀತಿ ಅನುಭವಿಸಿದ್ದ ಬೆಂಗಳೂರಿಗರು ಈಗ ನಿಟ್ಟುಸಿರು ಬಿಟ್ಟಿದ್ದಾರೆ. ಇಂದು ಕೂಡ ಬೆಂಗಳೂರಲ್ಲಿ ಬಿಸಿಲು ಹೆಚ್ಚಲಿದೆ ಎನ್ನಲಾಗಿದೆ. ಕೇರಳದ ಹಲವೆಡೆ ಮಳೆಯಾಗುತ್ತಿರುವುದರಿಂದ ಅದರ ಪರಿಣಾವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆ ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಕೂಡ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಕಳೆದ ವಾರವೇ ಶುರುವಾಗಬೇಕಾಗಿದ್ದ ಹಿಂಗಾರು ಕರ್ನಾಟಕದಲ್ಲಿ ಇಂದಿನಿಂದ ಆರಂಭವಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಹಿಂಗಾರು ಮಳೆ ಆರಂಭವಾಗಲಿದೆ. ನವೆಂಬರ್ 1ರ ವೇಳೆಗೆ ಹಿಂಗಾರು ಮಳೆ ತೀವ್ರಗೊಳ್ಳಲಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕೇರಳ, ತಮಿಳುನಾಡು, ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದಿನಿಂದ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆ ಎನ್ನಲಾಗಿದೆ.
ಇಂದಿನಿಂದ ಕೇರಳ ಮತ್ತು ತಮಿಳುನಾಡಿನಲ್ಲಿ ಮಳೆಯ ಅಬ್ಬರ ಜೋರಾಗಲಿದೆ. ಈ ಎರಡೂ ಜಿಲ್ಲೆಗಳ ಗಡಿಗೆ ಹೊಂದಿಕೊಂಡಿರುವ ಕರ್ನಾಟಕದಲ್ಲಿ ಅದರ ಪರಿಣಾಮವಾಗಿ ಅಲ್ಲಲ್ಲಿ ಮಳೆಯಾಗಲಿದೆ. ಇಂದು ಕರಾವಳಿ ಭಾಗದಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ.
Published by:Sushma Chakre
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ