ಬೆಂಗಳೂರು (ನ. 1): ರಾಜ್ಯಾದ್ಯಂತ ಹಲವು ಭಾಗಗಳಲ್ಲಿ ಹಿಂಗಾರು ಮಳೆ ಆರಂಭವಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುತ್ತಿದೆ. ವಾಯುಭಾರ ಕುಸಿತದಿಂದ ಈಗಾಗಲೇ ತಮಿಳುನಾಡು, ಆಂಧ್ರ ಪ್ರದೇಶ, ಕೇರಳದಲ್ಲಿ ಮಳೆಯಾಗುತ್ತಿದೆ. ಇಂದು ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಚಳಿಗಾಳಿ ಮತ್ತು ಸಾಧಾರಣ ಮಳೆಯ ಸಾಧ್ಯತೆಯಿದೆ. ಜೊತೆಗೆ ಅರುಣಾಚಲ ಪ್ರದೇಶ, ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಮೇಘಾಲಯ, ಕೇರಳ, ತಮಿಳುನಾಡು ರಾಜ್ಯಗಳಲ್ಲಿಯೂ ಇಂದು ಮಳೆಯಾಗಲಿದೆ. ಇದರ ಪರಿಣಾಮದಿಂದ ಕರ್ನಾಟಕದಲ್ಲೂ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ.
ಇಂದಿನಿಂದ ನ. 3ರವರೆಗೂ ಶಿವಮೊಗ್ಗ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇಂದು ಮತ್ತು ನಾಳೆ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಟ್ಟದವರೆಗೆ ಮಳೆಯಾಗುವ ಸಾಧ್ಯತೆಯಿದೆ. ಇಂದು ಮತ್ತು ನಾಳೆ ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಆರ್ಆರ್ ನಗರ, ಶಿರಾ ಉಪಚುನಾವಣೆ; ಇಂದು ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ
ಕರಾವಳಿ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇಂದು ಮತ್ತು ನಾಳೆ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಬೆಂಗಳೂರಿನಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಳೆಯ ಆರ್ಭಟ ಕಡಿಮೆಯಾಗಿದೆ.
ಇಂದಿನಿಂದ ನವೆಂಬರ್ 3ರವರೆಗೆಗೂ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಕರ್ನಾಟಕದ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಇಂದು ಮತ್ತು ನಾಳೆ ಮತ್ತೆ ಮಳೆಯಾಗುವ ಸಾಧ್ಯತೆಗಳಿವೆ. ನವೆಂಬರ್ 2ರವರೆಗೆ ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳು, ಬೆಳಗಾವಿ, ಗದಗ, ವಿಜಯಪುರ, ರಾಯಚೂರು, ಹಾವೇರಿ, ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ