HOME » NEWS » State » KARNATAKA WEATHER RAIN ALERT IN KARNATAKA TILL JANUARY 8 YELLOW ALERT IN SHIMOGA CHIKMAGALUR KODAGU SCT

Karnataka weather: ಕರ್ನಾಟಕದಲ್ಲಿ ಜ. 8ರವರೆಗೆ ಮಳೆ; ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಹಳದಿ ಅಲರ್ಟ್​

Karnataka Rain Updates: 2 ದಿನಗಳ ಹಿಂದೆ ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರಿನಲ್ಲಿ ಮಳೆಯಾಗಿತ್ತು. ಮುಂದಿನ ಮೂರ್ನಾಲ್ಕು ದಿನದಲ್ಲಿ ಇದೇ ವಾತಾವರಣ ಮುಂದುವರೆಯಲಿದ್ದು, ಮಲೆನಾಡು, ಕೊಡಗು, ಹಾಸನದಲ್ಲಿ ಹಳದಿ ಅಲರ್ಟ್​ ಘೋಷಣೆ ಮಾಡಲಾಗಿದೆ.

Sushma Chakre | news18-kannada
Updated:January 8, 2021, 3:35 PM IST
Karnataka weather: ಕರ್ನಾಟಕದಲ್ಲಿ ಜ. 8ರವರೆಗೆ ಮಳೆ; ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಹಳದಿ ಅಲರ್ಟ್​
ಮಳೆ
  • Share this:
ಬೆಂಗಳೂರು (ಜ. 5): ಮಳೆಗಾಲ ಮುಗಿದು ಚಳಿಗಾಲ ಆರಂಭವಾಗಿದೆ. ಇನ್ನೇನು 2 ತಿಂಗಳು ಕಳೆದರೆ ಬೇಸಿಗೆಯೂ ಶುರುವಾಗಲಿದೆ. ಆದರೂ ಕರ್ನಾಟಕದಲ್ಲಿ ಮಳೆ ಮಾತ್ರ ನಿಂತಿಲ್ಲ. ಬೆಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ 2 ದಿನಗಳ ಹಿಂದೆ ಭಾರೀ ಮಳೆಯಾಗಿ, ಅವಾಂತರಗಳನ್ನು ಸೃಷ್ಟಿಸಿತ್ತು. ಇದೀಗ ಮತ್ತೆ ರಾಜ್ಯಾದ್ಯಂತ 3 ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯ ಹಿನ್ನೆಲೆಯಲ್ಲಿ ಜ. 8ರವರೆಗೆ ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.

ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಹಿನ್ನೆಲೆಯಲ್ಲಿ ಮೂರು ದಿನ ಮಳೆ ಸುರಿಯುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಈ ಜಿಲ್ಲೆಗಳಿಗೆ ಜನವರಿ 8ರವರೆಗೆ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ್ ಪೈಪ್​ಲೈನ್​ ಅನ್ನು ಇಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ

2 ದಿನಗಳ ಹಿಂದೆ ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರಿನಲ್ಲಿ ಮಳೆಯಾಗಿತ್ತು. ಮುಂದಿನ ಮೂರ್ನಾಲ್ಕು ದಿನದಲ್ಲಿ ಇದೇ ವಾತಾವರಣ ಮುಂದುವರೆಯಲಿದ್ದು, ಮಲೆನಾಡು, ಕೊಡಗು, ಹಾಸನದಲ್ಲಿ ಹಳದಿ ಅಲರ್ಟ್​ ಘೋಷಣೆ ಮಾಡಲಾಗಿದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈಶಾನ್ಯ ಮುಂಗಾರಿನ ಮಾರುತಗಳು ಪ್ರಬಲವಾಗಿರುವುದರಿಂದ ಮೋಡ ಕವಿದ ವಾತಾವರಣವಿದ್ದು, ಕರ್ನಾಟಕದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಈಶಾನ್ಯದ ಕಡೆಯಿಂದ ಬಲವಾದ ಮೇಲ್ಮೈ ಗಾಳಿ ಬೀಸುತ್ತಿದ್ದು, ಜ.8ರವರೆಗೂ ಇದೇ ರೀತಿ ಮೋಡ ಕವಿದ ವಾತಾವರಣ ಕಂಡು ಬರಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ ನಿರ್ದೇಶಕ ಡಾ.ಜಿ.ಎಸ್. ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.
ಮಲೆನಾಡು ಮಾತ್ರವಲ್ಲದೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಹಾಸನ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಗಳಿವೆ. ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆಯ ವೇಳೆಗೆ ಮಳೆಯಾಗುವ ಸಾಧ್ಯತೆಯೂ ಇದೆ.
Published by: Sushma Chakre
First published: January 5, 2021, 11:22 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories