HOME » NEWS » State » KARNATAKA WEATHER RAIN EXPECTED IN COASTAL KARNATAKA BANGALORE KODAGU SHIMOGA FOR 3 DAYS SCT

Karnataka Weather: ಬೆಂಗಳೂರು, ಕರಾವಳಿ, ಮೈಸೂರು, ಕೊಡಗು ಸೇರಿ ಬಹುತೇಕ ಕಡೆ ನ. 18ರವರೆಗೆ ಮಳೆ ಸಾಧ್ಯತೆ

Karnataka Rain Updates: ಇಂದಿನಿಂದ ನ. 18ರವರೆಗೂ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಕೊಡಗು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಹಿಂಗಾರು ಮಳೆಯಾಗಲಿದೆ.

Sushma Chakre | news18-kannada
Updated:November 16, 2020, 10:24 AM IST
Karnataka Weather: ಬೆಂಗಳೂರು, ಕರಾವಳಿ, ಮೈಸೂರು, ಕೊಡಗು ಸೇರಿ ಬಹುತೇಕ ಕಡೆ ನ. 18ರವರೆಗೆ ಮಳೆ ಸಾಧ್ಯತೆ
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು (ನ. 16): ದೀಪಾವಳಿ ಹಬ್ಬದ ಸಂಭ್ರಮದಲ್ಲಿದ್ದ ಬೆಂಗಳೂರಿನಲ್ಲಿ ನಿನ್ನೆ ಮಳೆರಾಯನ ಆಗಮನವಾಗಿತ್ತು. ಬೆಂಗಳೂರು ಮಾತ್ರವಲ್ಲದೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯ ಅಬ್ಬರ ಉಂಟಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದಾಗಿ ಮಳೆ ಮುಂದುವರೆಯಲಿದೆ. ಇಂದಿನಿಂದ ನ. 18ರವರೆಗೂ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಹಿಂಗಾರು ಮಳೆಯಾಗಲಿದೆ.

ಕೇವಲ ಕರಾವಳಿ ಮತ್ತು ಬೆಂಗಳೂರು, ಮೈಸೂರು ಭಾಗ ಮಾತ್ರವಲ್ಲದೆ ಮಲೆನಾಡಿನಲ್ಲಿಯೂ ಮಳೆಯ ಅಬ್ಬರ ಹೆಚ್ಚಲಿದೆ. ನ. 18ರವರೆಗೆ ಕೇರಳ ಮತ್ತು ತಮಿಳುನಾಡಿನಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಇದರ ಪರಿಣಾಮವಾಗಿ ಕರ್ನಾಟಕದಲ್ಲೂ ಮಳೆಯಾಗಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗಲಿದೆ. ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಇನ್ನೆರಡು ದಿನ ಮಳೆ ಮುಂದುವರೆಯಲಿದೆ.

ಇದನ್ನೂ ಓದಿ: Hasanamba Temple: ಹಾಸನಾಂಬೆ ದರ್ಶನಕ್ಕೆ ಇಂದು ಕೊನೆಯ ದಿನ; ಬೆಳ್ಳಂಬೆಳಗ್ಗೆ ದೇವಿಗೆ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್

ಬೆಂಗಳೂರಿನಲ್ಲಿ ಇಂದು ಕೂಡ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ತಣ್ಣನೆಯ ಗಾಳಿ ಬೀಸುತ್ತಿದೆ. ಹೀಗಾಗಿ, ಇಂದು ಸಂಜೆಯೂ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ರಾಜ್ಯದಲ್ಲಿ ಈಶಾನ್ಯ ಮುಂಗಾರು ಚುರುಕಾಗಿದ್ದು, ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ನ. 18ರಂದು ಪಕ್ಕದ ರಾಜ್ಯವಾದ ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದರಿಂದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು, ರಾಮನಗರ, ಮಂಡ್ಯ, ಚಾಮರಾಜನಗರದಲ್ಲೂ ಮಳೆಯ ಅಬ್ಬರ ಉಂಟಾಗುವ ಸಾಧ್ಯತೆಯಿದೆ.

ತಮಿಳುನಾಡು, ಪುದುಚೆರಿ, ಆಂಧ್ರಪ್ರದೇಶ, ಕೇರಳದಲ್ಲಿ ನವೆಂಬರ್ 18ರವರೆಗೂ ಗುಡುಗುಸಹಿತ ಭಾರೀ ಮಳೆಯಾಗಲಿದೆ. ಇಂದು ಮಳೆಯ ಪ್ರಮಾಣ ಹೆಚ್ಚಿರಲಿದ್ದು, ಕ್ರಮೇಣ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಕೂಡ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Published by: Sushma Chakre
First published: November 16, 2020, 10:24 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading