• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Karnataka Weather: ಕರಾವಳಿ, ಕೊಡಗು, ಮಲೆನಾಡಿನಲ್ಲಿ ಇಂದಿನಿಂದ ನ. 3ರವರೆಗೆ ಮಳೆ ಹೆಚ್ಚಳ

Karnataka Weather: ಕರಾವಳಿ, ಕೊಡಗು, ಮಲೆನಾಡಿನಲ್ಲಿ ಇಂದಿನಿಂದ ನ. 3ರವರೆಗೆ ಮಳೆ ಹೆಚ್ಚಳ

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

Karnataka Rain ಇಂದಿನಿಂದ ರಾಜ್ಯದ ಹಲವೆಡೆ ಮಳೆಯಾಗಲಿದ್ದು, ನಾಳೆ ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಉತ್ತರ ಕನ್ನಡದ ಕೆಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚಲಿದೆ.

  • Share this:

ಬೆಂಗಳೂರು (ಅ. 30): ಕರ್ನಾಟಕದಲ್ಲಿ ಹಿಂಗಾರು ಮಳೆ ಆರಂಭವಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆಯ ಅಬ್ಬರ ಶುರುವಾಗಲಿದೆ. ವಾಯುಭಾರ ಕುಸಿತದಿಂದ ಈಗಾಗಲೇ ತಮಿಳುನಾಡು, ಆಂಧ್ರ ಪ್ರದೇಶ, ಕೇರಳದಲ್ಲಿ ಮಳೆಯಾಗುತ್ತಿದೆ. ಅದರ ಪರಿಣಾಮವಾಗಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು, ಮೈಸೂರು, ಹಾಸನ, ಕೊಡಗು ಮತ್ತು ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.


ಇಂದಿನಿಂದ ರಾಜ್ಯದ ಹಲವೆಡೆ ಮಳೆಯಾಗಲಿದ್ದು, ನಾಳೆ ಶಿವಮೊಗ್ಗ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಉತ್ತರ ಕನ್ನಡದ ಕೆಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚಲಿದೆ. ಈ ಮಳೆ ನ. 3ರವರೆಗೂ ಮುಂದುವರೆಯಲಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ನವೆಂಬರ್ 1 ಮತ್ತು 2ರಂದು ಹಗುರದಿಂದ ಸಾಧಾರಣ ಮಟ್ಟದವರೆಗೆ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಇಂದು ಅಲ್ಲಲ್ಲಿ ಮಳೆಯಾಗಬಹುದು. ಅ. 31ರಿಂದ ನ. 2ರವರೆಗೆ ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.


ಇದನ್ನೂ ಓದಿ: Bangalore Rains: ಬೆಂಗಳೂರಿಗರೇ ಎಚ್ಚರ!; ಸಿಲಿಕಾನ್​ ಸಿಟಿಯಲ್ಲಿ ಇಂದು ಭಾರೀ ಮಳೆ ಸಾಧ್ಯತೆ


ಕರಾವಳಿ ಜಿಲ್ಲೆಗಳಲ್ಲಿ ನ. 1ರಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಇಂದು ಮತ್ತು ನಾಳೆ ಒಣಹವೆ ಇರಲಿದೆ. ನ. 1 ಮತ್ತು ನ. 2ರಂದು ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮಳೆಯಿಂದ ಬೆಂಗಳೂರಿನಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ನಾಳೆಯವರೆಗೆ ಬೆಂಗಳೂರಿನಲ್ಲಿ ಹಗುರದಿಂದ ಸಾಧಾರಣ ಮಟ್ಟದವರೆಗೆ ಮಳೆಯಾಗಬಹುದು ಎಂದು ಹವಾಮಾನ ಇಲಾಖೆಯ ಮಾಹಿತಿ ನಿರ್ದೇಶಕ ಪಾಟೀಲ್ ಅವರು ಮುನ್ಸೂಚನೆ ನೀಡಿದ್ದಾರೆ.


ಇಂದಿನಿಂದ ನವೆಂಬರ್ 3ರವರೆಗೆಗೂ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಕರ್ನಾಟಕದ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ನ.2 ರವರೆಗೆ ಮತ್ತೆ ಮಳೆಯಾಗುವ ಸಾಧ್ಯತೆಗಳಿವೆ. ನಾಳೆಯಿಂದ ನವೆಂಬರ್ 2ರವರೆಗೆ ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳು, ಬೆಳಗಾವಿ, ಗದಗ, ವಿಜಯಪುರ, ರಾಯಚೂರು, ಹಾವೇರಿ, ಸೇರಿದಂತೆ ಹಲವೆಡೆ ಹಚ್ಚಿನ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

First published: